AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on March 11: ದೇಶದ ವಿವಿಧ ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು, ಮಾರ್ಚ್​ 11 ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ರಾಷ್ಟ್ರಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಹೆಚ್ಚಿನ ಬದಲಾವಣೆ ಕಂಡುಬರಲಿಲ್ಲ. ಕಚ್ಚಾ ತೈಲದ ಅಂತಾರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಭಾರತದಲ್ಲಿ ಇಂಧನ ಬೆಲೆಯನ್ನು ನಿರ್ಧರಿಸಲಾಗುತ್ತದೆ. ದೆಹಲಿ, ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ತಿಳಿಯೋಣ.

Petrol Diesel Price on March 11: ದೇಶದ ವಿವಿಧ ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ಪೆಟ್ರೋಲ್Image Credit source: News24
ನಯನಾ ರಾಜೀವ್
|

Updated on: Mar 11, 2024 | 7:16 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ $82 ರಷ್ಟಿದೆ. ಕಚ್ಚಾತೈಲದ ಬೆಲೆಯಲ್ಲಿನ ಏರಿಳಿತಗಳನ್ನು ಗಮನದಲ್ಲಿಟ್ಟುಕೊಂಡು, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಗೆ ಬೆಂಬಲವಿದೆಯೇ? ತೈಲ ಕಂಪನಿಗಳು ಮಾರ್ಚ್ 11 ಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಿದೆ. ಮಾರ್ಚ್ 11 ರಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಒಂದೇ ಆಗಿದ್ದು, ಇಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ದೇಶದ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನವೀಕರಿಸುತ್ತವೆ.

ಏಪ್ರಿಲ್ 2022 ರಲ್ಲಿ ತೈಲ ಕಂಪನಿಗಳು ಕೊನೆಯ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಿದ್ದವು ಅಂದಿನಿಂದ ಒಮ್ಮೆಯೂ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ, ಮುಂಬರುವ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆ ಆಗಬಹುದು ಎಂದು ಸರ್ಕಾರ ಹೇಳುತ್ತಿದೆ. ಚುನಾವಣೆಗೂ ಮುನ್ನ ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಣೆಯಾಗುವ ಸಾಧ್ಯತೆ ಇದೆ.

ಪೆಟ್ರೋಲ್ ಮತ್ತು ಡೀಸೆಲ್ ಈಗಿನ ಬೆಲೆಗಳು

ದೆಹಲಿ ಪೆಟ್ರೋಲ್ 96.72 ರೂ., ಡೀಸೆಲ್ 89.62 ರೂ. ಬೆಂಗಳೂರು ಪೆಟ್ರೋಲ್ 101.94 ರೂ., ಡೀಸೆಲ್ 87.89 ರೂ. ಲಕ್ನೋದಲ್ಲಿ ಪೆಟ್ರೋಲ್ 96.57 ರೂ., ಡೀಸೆಲ್ 89.76 ರೂ. ನೋಯ್ಡಾದಲ್ಲಿ ಪೆಟ್ರೋಲ್ 96.79 ರೂ. ಡೀಸೆಲ್ 89.96 ರೂ. ಗುರುಗ್ರಾಮದಲ್ಲಿ ಪೆಟ್ರೋಲ್ 97.18 ರೂ., ಡೀಸೆಲ್ 90.05 ರೂ. ಚಂಡೀಗಢದಲ್ಲಿ ಪೆಟ್ರೋಲ್ 96.20ರೂ., ಡೀಸೆಲ್ 84.26 ರೂ. ಇದೆ.

ಮತ್ತಷ್ಟು ಓದಿ: Petrol Diesel Price on March 10: ಬಿಹಾರ, ಜಾರ್ಖಂಡ್​ನಲ್ಲಿ ಪೆಟ್ರೋಲ್ ಅಗ್ಗ

ನೀವು ಮನೆಯಲ್ಲಿ ಕುಳಿತು ಬೆಲೆಯನ್ನು ಪರಿಶೀಲಿಸಬಹುದು ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನೀವು ಸುಲಭವಾಗಿ ತಿಳಿದುಕೊಳ್ಳಬಹುದು. ಇದಕ್ಕಾಗಿ ತೈಲ ಮಾರುಕಟ್ಟೆ ಕಂಪನಿಗಳ ವೆಬ್‌ಸೈಟ್‌ಗೆ ಹೋಗಬೇಕು ಅಥವಾ ಎಸ್‌ಎಂಎಸ್ ಕಳುಹಿಸಬೇಕು. ನೀವು ಇಂಡಿಯನ್ ಆಯಿಲ್ ಗ್ರಾಹಕರಾಗಿದ್ದರೆ, ನೀವು RSP ಜೊತೆಗೆ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು BPCL ಗ್ರಾಹಕರಾಗಿದ್ದರೆ ನೀವು RSP ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸಬಹುದು.

ಮತ್ತಷ್ಟು ಓದಿ: Petrol Diesel Price on March 07: ಜಾರ್ಖಂಡ್, ಅಸ್ಸಾಂನಲ್ಲಿ ಪೆಟ್ರೋಲ್ ದುಬಾರಿ

ಪ್ರತಿದಿನ ಬೆಳಗ್ಗೆ ಬೆಲೆಗಳು ನಿರ್ಧಾರವಾಗುತ್ತವೆ ಇಂಧನ ಬೆಲೆಗಳು ಪ್ರತಿದಿನ ಬೆಳಿಗ್ಗೆ ಬದಲಾಗುತ್ತವೆ. ವಾಸ್ತವವಾಗಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿದೇಶಿ ವಿನಿಮಯ ದರಗಳೊಂದಿಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಅವಲಂಬಿಸಿ ಪ್ರತಿದಿನ ಬದಲಾಗುತ್ತವೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರಗಳನ್ನು ನಿರ್ಧರಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪರಿಷ್ಕರಿಸುತ್ತವೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?