AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸಹ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಸತತ 6 ದಿನಗಳಿಂದ ಹೆಚ್ಚಳ

Petrol Rate Today, 01-11-2021: ಇಂದು ಸಹ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಆ ಬಳಿಕ ನಿಮ್ಮೂರಿನಲ್ಲಿ ಇಂಧನ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Petrol Price Today: ಇಂದು ಸಹ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಸತತ 6 ದಿನಗಳಿಂದ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 01, 2021 | 7:36 AM

Share

Petrol Diesel Price Today | ದೆಹಲಿ: ಸತತ ಆರನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಆಗಿದೆ. ಅಂತರಾಷ್ಟ್ರೀಯ ತೈಲ ಬೆಲೆಗಳಲ್ಲಿ ನಿರಂತರ ಏರಿಕೆಯಿಂದ ದೇಶಾದ್ಯಂತ ಇಂಧನ ದರ (Fuel Price) ಗರಿಷ್ಠ ಮಟ್ಟ ತಲುಪಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ ಇಂದು ಸೋಮವಾರ (ನವೆಂಬರ್ 1) ಪೆಟ್ರೋಲ್ (Petrol Price), ಡೀಸೆಲ್ ಬೆಲೆಯಲ್ಲಿ (Diesel Price) ಕ್ರಮವಾಗಿ 35 ಪೈಸೆ ಹೆಚ್ಚಳ ಮಾಡಲಾಗಿದೆ. ಆ ಬಳಿಕ ಪ್ರಮುಖ ನಗರಗಳಲ್ಲಿ ಎಷ್ಟಾಗಿದೆ ಬೆಲೆ ಎಂಬ ಮಾಹಿತಿ ಈ ಕೆಳಗಿನಂತಿದೆ ತಿಳಿಯಿರಿ.

ಇಂದು ಇಂಧನ ದರ ಏರಿಕೆಯ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 109.69 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.42 ರೂಪಾಯಿಗೆ ಏರಿಕೆ ಆಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 115.50 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.62 ರೂಪಾಯಿ ದಾಖಲಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 110.15 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.35 ರೂಪಾಯಿ ಇದೆ. ಹಾಗೆಯೇ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.56 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.59 ರೂಪಾಯಿ ನಿಗದಿಯಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 113.56 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.50 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 114.12 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 107.40 ರೂಪಾಯಿ ಇದೆ. ಸ್ಥಳೀಯ ತೆರಿಗೆಗಳು ಮತ್ತು ಸಾರಿಗೆ ವೆಚ್ಚವನ್ನು ಅವಲಂಬಿಸಿ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ.

ರಾಜಸ್ಥಾನದ ಗಂಗಾನಗರದಲ್ಲಿ ಲೀಟರ್ ಪೆಟ್ರೋಲ್ ದರ 112.33 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 113.21 ರೂಪಾಯಿ ದಾಖಲಾಗಿದೆ. ಸೆಪ್ಟೆಂಬರ್ 28 ರಿಂದ ಪೆಟ್ರೋಲ್ ಬೆಲೆಯನ್ನು 26 ಬಾರಿ ಏರಿಕೆ ಮಾಡಲಾಗಿದೆ. ಲೀಟರ್ ಪೆಟ್ರೋಲ್ ದರದಲ್ಲಿ 8.15 ರೂಪಾಯಿಯಷ್ಟು ಏರಿಕೆ ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 7:19 am, Mon, 1 November 21

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?