Petrol Diesel Price Today | ಇಂದು (ಅಕ್ಟೋಬರ್ 17, ಭಾನುವಾರ) ಇಂಧನ ಬೆಲೆಯಲ್ಲಿ (Fuel Price) ಏರಿಕೆ ಕಂಡು ಬಂದಿದೆ. ಆ ಮೂಲಕ ಲೀಟರ್ ಪೆಟ್ರೋಲ್ ಬೆಲೆಯೊಂದೇ ಅಲ್ಲ! ಬೆಂಗಳೂರಿನಲ್ಲಿ ಲೀಟರ್ ಡೀಸೆಲ್ ದರವೂ (Diesel Price) 100ರ ಗಡಿ ದಾಟಿ ಮುನ್ನುಗ್ಗಿದೆ. ಪ್ರಮುಖ ನಗರಗಳಲ್ಲಿ ಪೆಟ್ರೋಲ್ (Petrol Price), ಡೀಸೆಲ್ ದರ ಎಷ್ಟು ಹೆಚ್ಚಾಗಿದೆ? ಆ ಬಳಿಕ ಲೀಟರ್ ಪೆಟ್ರೋಲ್ ಡೀಸೆಲ್ ಬೆಲೆ ಎಷ್ಟು ನಿಗದಿಯಾಗಿದೆ? ಎಂಬೆಲ್ಲಾ ಕುರಿತಾಗಿ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೀಟರ್ ಡೀಸೆಲ್ ದರ 100ರ ಗಡಿ ದಾಟಿದೆ. ಬೆಂಗಳೂರಿನಲ್ಲಿ ಲೀಟರ್ ಡೀಸೆಲ್ ಬೆಲೆ 100.37 ರೂ. ಆಗಿದ್ದರೆ, ರಾಯಚೂರಿನಲ್ಲಿ ಲೀಟರ್ ಡೀಸೆಲ್ ಬೆಲೆ 100.25 ರೂಪಾಯಿ, ತುಮಕೂರಿನಲ್ಲಿ ಲೀಟರ್ ಡೀಸೆಲ್ ಬೆಲೆ 100.84 ರೂಪಾಯಿ, ಕಲಬುರಗಿಯಲ್ಲಿ ಲೀಟರ್ ಡೀಸೆಲ್ ಬೆಲೆ 100.16 ರೂಪಾಯಿ ಹಾಗೂ ರಾಮನಗರದಲ್ಲಿ ಲೀಟರ್ ಡೀಸೆಲ್ ಬೆಲೆ 100.67 ರೂಪಾಯಿಗೆ ಏರಿಕೆ ಆಗಿದೆ.
ಇನ್ನು, ಬೀದರ್ನಲ್ಲಿ ಲೀಟರ್ ಡೀಸೆಲ್ ಬೆಲೆ 101.22 ರೂಪಾಯಿ ಹಾಗೂ ಚಿತ್ರದುರ್ಗದಲ್ಲಿ ಲೀಟರ್ ಡೀಸೆಲ್ ಬೆಲೆ 101.93 ರೂಪಾಯಿ ಇದೆ. ಪ್ರತಿದಿನ ಸಾಗುತ್ತಿದ್ದಂತೆಯೇ ಪೆಟ್ರೋಲ್, ಡೀಸೆಲ್ ದರ ಇನ್ನಷ್ಟು ಏರಿಕೆಯಾಗುತ್ತಿರುವುದನ್ನು ಕಂಡು ವಾಹನ ಸವಾರರು ಬೇಸರ ಹೊರಹಾಕಿದ್ದಾರೆ.
ಸತತ ನಾಲ್ಕನೇ ದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕಾಣುತ್ತಿದೆ. ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 35 ಪೈಸೆ ಹೆಚ್ಚಳ ಮಾಡಲಾಗಿದೆ. ಆ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 105.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.57 ರೂಪಾಯಿಗೆ ಏರಿಕೆ ಆಗಿದೆ. ಇನ್ನು, ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 111.77 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.52 ರೂಪಾಯಿ ನಿಗದಿಯಾಗಿದೆ. ಸುಮಾರು 37 ಪೈಸೆ ಹೆಚ್ಚಳ ಮಾಡಲಾಗಿದೆ.
ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 106.43 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.68 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 103.01 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.92 ರೂಪಾಯಿಗೆ ಏರಿಕೆಯಾಗಿದೆ.
ಇನ್ನು, ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 110.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 103.08 ರೂಪಾಯಿ ನಿಗದಿಯಾಗಿದೆ. ಸೆಪ್ಟೆಂಬರ್ ಕೊನೆಯ ವಾರದಲ್ಲಿ ಸ್ಥಿರತೆ ಕಾಯ್ದುಕೊಳ್ಳುವ ಮೂಲಕ ಸುದೀರ್ಘ ವಿರಾಮದ ನಂತರ ಇದು ಪೆಟ್ರೋಲ್ ಬೆಲೆಯಲ್ಲಿ 16ನೇ ಹೆಚ್ಚಳ ಮತ್ತು ಡೀಸೆಲ್ ಏರಿಕೆಯಲ್ಲಿ 19ನೇ ಬಾರಿಯ ಹೆಚ್ಚಳವಾಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html
Published On - 8:04 am, Sun, 17 October 21