AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ 35 ಪೈಸೆ ಹೆಚ್ಚಳ

Petrol Rate Today: ಇಂದು ಸಹ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆಯಾಗಿದೆ. ಆ ಮೂಲಕ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Petrol Price Today: ಇಂದು ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ 35 ಪೈಸೆ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 20, 2021 | 7:19 AM

Share

Petrol Diesel Price Today | ದೆಹಲಿ: ಸತತ ಎರಡು ದಿನಗಳಿಂದ ಇಂಧ ದರ (Fuel Price) ಸ್ಥಿರತೆ ಕಾಯ್ದುಕೊಂಡಿತ್ತು. ಆ ಬಳಿಕ ಇಂದು ಬುಧವಾರ (ಅ.20) ಮತ್ತೆ ತೈಲ ದರ ಏರಿಕೆ ಆಗಿದೆ. ದಿನದಿಂದ ದಿನಕ್ಕೆ ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗಿ ಆ ಮೂಲಕ ಪೆಟ್ರೋಲ್ (Petrol Price), ಡೀಸೆಲ್ ಬೆಲೆಗಳು (Diesel Price) ಗರಿಷ್ಠ ಮಟ್ಟ ತಲುಪಿವೆ. ಇಂದು ಲೀಟರ್ ಪೆಟ್ರೋಲ್ ಬೆಲೆಯಲ್ಲಿ 35 ಪೈಸೆ ಹೆಚ್ಚಳ ಮಾಡಲಾಗಿದೆ. ಅದೇ ರೀತಿ ಲೀಟರ್ ಡೀಸೆಲ್ ದರದಲ್ಲಿಯೂ ಸಹ 35 ಪೈಸೆ ಹೆಚ್ಚಳವಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 106.19 ರೂಪಾಯಿಗೆ ಏರಿಕೆ ಆಗಿದೆ. ಅದೇ ರೀತಿ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 112.11 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 103.31 ರೂಪಾಯಿ ಆಗಿದ್ದರೆ, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 106.78 ರೂಪಾಯಿ ನಿಗದಿಯಾಗಿದೆ.

ಇನ್ನು, ಪ್ರಮುಖ ನಗರಗಳಲ್ಲಿನ ಡೀಸೆಲ್ ದರ ಗಮನಿಸುವುದಾದರೆ, ದೆಹಲಿಯಲ್ಲಿ ಲೀಟರ್ ಡೀಸೆಲ್ ದರ 94.92 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಡೀಸೆಲ್ ದರ 102.89 ರೂಪಾಯಿ ಇದೆ. ಇನ್ನು, ಚೆನ್ನೈನಲ್ಲಿ ಲೀಟರ್ ಡೀಸೆಲ್ ದರ 99.26 ರೂಪಾಯಿ ಇದ್ದರೆ, ಕೋಲ್ಕತ್ತಾದಲ್ಲಿ ಲೀಟರ್ ಡೀಸೆಲ್ ದರ 98.03 ರೂಪಾಯಿ ಇದೆ.

ನಾಲ್ಕು ಪ್ರಮುಖ ಮೆಟ್ರೋ ನಗರಗಳಲ್ಲಿ ಮುಂಬೈ ನಗರದಲ್ಲಿ ಇಂಧನ ದರ ಅಧಿಕವಾಗಿದೆ. ಇತ್ತೀಚಿಗಿನ ಏರಿಕೆಯಿಂದ ಕೇವಲ ಲೀಟರ್ ಪೆಟ್ರೋಲ್ ದರವೊಂದೇ ಅಲ್ಲದೇ, ಕೆಲವೆಡೆ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿ ಮುನ್ನುಗ್ಗಿದೆ. ಇದರಿಂದ ವಾಹನ ಸವಾರರು ಆಕ್ರೋಶ ಹೊರಹಾಕುತ್ತಿದ್ದಾರೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 7:08 am, Wed, 20 October 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್