Petrol Price Today: ಇಂದು ಸಹ ಏರಿಕೆಯಾದ ಇಂಧನ ದರ; ಪ್ರಮುಖ ನಗರಗಳಲ್ಲಿನ ಪೆಟ್ರೋಲ್​, ಡೀಸೆಲ್ ಬೆಲೆ ವಿವರ ಇಲ್ಲಿದೆ

Petrol Rate Today: ಇಂದು ಸಹ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಆ ಮೂಲಕ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಾಗಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Petrol Price Today: ಇಂದು ಸಹ ಏರಿಕೆಯಾದ ಇಂಧನ ದರ; ಪ್ರಮುಖ ನಗರಗಳಲ್ಲಿನ ಪೆಟ್ರೋಲ್​, ಡೀಸೆಲ್ ಬೆಲೆ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ

Petrol Diesel Price Today | ದೆಹಲಿ: ಕಳೆದ ಕೆಲವು ದಿನಗಳಿಂದ ಇಂಧನ ದರ ಮತ್ತೆ ಏರಿಕೆಯತ್ತ ಸಾಗಲು ಪ್ರಾರಂಭಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳು ಇಂದು (ಅಕ್ಟೋಬರ್ 22, ಶುಕ್ರವಾರ) ಮತ್ತೆ ಹೆಚ್ಚಳವಾಗಿದೆ. ಆ ಮೂಲಕ ಪ್ರಮುಖ ನಗರಗಳಲ್ಲಿ ಇಂಧನ ದರ (Fuel Price) ಗರಿಷ್ಠ ಮಟ್ಟ ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 35 ಪೈಸೆ ಹೆಚ್ಚಳದ ಬಳಿಕ ಲೀಟರ್ ಪೆಟ್ರೋಲ್ ದರ (Petrol Price) 106.89 ರೂಪಾಯಿ ಹಾಗೂ 35 ಪೈಸೆ ಏರಿಕೆ ಕಂಡ ಲೀಟರ್ ಡೀಸೆಲ್ ಬೆಲೆ (Diesel Price) 95.62 ರೂಪಾಯಿ ದಾಖಲಾಗಿದೆ.

ಇನ್ನು, ವಾಣಿಜ್ಯ ನಗರಿ ಮುಂಬೈನಲ್ಲಿ 34 ಪೈಸೆ ಹೆಚ್ಚಳದ ನಂತರ ಲೀಟರ್ ಪೆಟ್ರೋಲ್ ದರ 112.78 ರೂಪಾಯಿ ಹಾಗೂ 37 ಪೈಸೆ ಏರಿಕೆ ಬಳಿಕ ಲೀಟರ್ ಡೀಸೆಲ್ ಬೆಲೆ 103.63 ರೂಪಾಯಿ ಇದೆ. ಇನ್ನು ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 33 ಪೈಸೆ ಹೆಚ್ಚಳದ ನಂತರ 103.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆಯಲ್ಲಿ 35 ಪೈಸೆ ಏರಿಕೆ ಬಳಿಕ 99.92 ರೂಪಾಯಿ ನಿಗದಿಯಾಗಿದೆ.

ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರದಲ್ಲಿ 37 ಪೈಸೆ ಏರಿಕೆ ಆಗಿದೆ. ಆ ಮೂಲಕ ಲೀಟರ್ ಪೆಟ್ರೋಲ್ ಬೆಲೆ 115.54 ರೂಪಾಯಿ ನಿಗದಿಯಾಗಿದೆ. ಇನ್ನು, ಲೀಟರ್ ಡೀಸೆಲ್ ದರದಲ್ಲಿ 37 ಪೈಸೆ ಹೆಚ್ಚಳವಾಗಿದೆ. ಬಳಿಕ ಲೀಟರ್ ಡೀಸೆಲ್ ದರ 104.89 ರೂಪಾಯಿಗೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 110.61 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.49 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 11.18 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.32 ರೂಪಾಯಿ ಇದೆ. ಇನ್ನು, ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 103.86 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.07 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

Click on your DTH Provider to Add TV9 Kannada