Petrol Price Today: ಮತ್ತಷ್ಟು ಏರಿಕೆಯಾಯ್ತು ಇಂಧನ ದರ; ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟು ಗೊತ್ತಾ?

Petrol Rate Today: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 35 ಪೈಸೆ ಹೆಚ್ಚಳದ ಬಳಿಕ ಲೀಟರ್ ಪೆಟ್ರೋಲ್ ದರ 107.24 ರೂಪಾಯಿ ಹಾಗೂ 35 ಪೈಸೆ ಏರಿಕೆ ಕಂಡ ಲೀಟರ್ ಡೀಸೆಲ್ ಬೆಲೆ 95.98 ರೂಪಾಯಿ ದಾಖಲಾಗಿದೆ.

Petrol Price Today: ಮತ್ತಷ್ಟು ಏರಿಕೆಯಾಯ್ತು ಇಂಧನ ದರ; ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟು ಗೊತ್ತಾ?
ಸಾಂದರ್ಭಿಕ ಚಿತ್ರ
Edited By:

Updated on: Oct 23, 2021 | 8:01 AM

Petrol Diesel Price Today | ದೆಹಲಿ: ಕಳೆದ ಕೆಲವು ದಿನಗಳಿಂದ ಇಂಧನ ದರ ಮತ್ತೆ ಏರಿಕೆಯತ್ತ ಸಾಗುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಂದು (ಅಕ್ಟೋಬರ್ 23, ಶನಿವಾರ) ಮತ್ತೆ ಹೆಚ್ಚಳವಾಗಿದೆ. ಆ ಮೂಲಕ ಪ್ರಮುಖ ನಗರಗಳಲ್ಲಿ ಇಂಧನ ದರ (Fuel Price) ಗರಿಷ್ಠ ಮಟ್ಟ ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 35 ಪೈಸೆ ಹೆಚ್ಚಳದ ಬಳಿಕ ಲೀಟರ್ ಪೆಟ್ರೋಲ್ ದರ (Petrol Price) 107.24 ರೂಪಾಯಿ ಹಾಗೂ 35 ಪೈಸೆ ಏರಿಕೆ ಕಂಡ ಲೀಟರ್ ಡೀಸೆಲ್ ಬೆಲೆ (Diesel Price) 95.98 ರೂಪಾಯಿ ದಾಖಲಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ 34 ಪೈಸೆ ಹೆಚ್ಚಳದ ನಂತರ ಲೀಟರ್ ಪೆಟ್ರೋಲ್ ದರ 113.08 ರೂಪಾಯಿ ಹಾಗೂ 37 ಪೈಸೆ ಏರಿಕೆ ಬಳಿಕ ಲೀಟರ್ ಡೀಸೆಲ್ ಬೆಲೆ 103.97 ರೂಪಾಯಿ ಇದೆ. ಇನ್ನು ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 30 ಪೈಸೆ ಹೆಚ್ಚಳದ ನಂತರ 104.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆಯಲ್ಲಿ 24 ಪೈಸೆ ಏರಿಕೆ ಬಳಿಕ 100.22 ರೂಪಾಯಿ ನಿಗದಿಯಾಗಿದೆ.

ಬೆಂಗಳೂರಿನಲ್ಲಿ 37 ಪೈಸೆ ಹೆಚ್ಚಳದ ನಂತರ ಲೀಟರ್ ಪೆಟ್ರೋಲ್ ದರ 110.98 ರೂಪಾಯಿ ಹಾಗೂ 37 ಪೈಸೆ ಏರಿಕೆ ಬಳಿಕ ಲೀಟರ್ ಡೀಸೆಲ್ ಬೆಲೆ 101.86 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 111.51 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.66 ರೂಪಾಯಿ ಇದೆ. ಇನ್ನು, ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 104.16 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.39 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

Published On - 7:47 am, Sat, 23 October 21

TV9 Web

TV9 Kannada

Read More
Loading...
Unable to load recommendations.
Follow Us