AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸಹ ಏರಿಕೆ ಕಂಡಿದೆ ಪೆಟ್ರೋಲ್​, ಡೀಸೆಲ್​ ಬೆಲೆ!

Petrol Rate Today, 28-10-2021: ಇಂದು ಸಹ ಪೆಟ್ರೋಲ್​, ಡೀಸೆಲ್​ ದರದಲ್ಲಿ ಏರಿಕೆ ಕಂಡು ಬಂದಿದೆ. ಆ ಬಳಿಕ ಪ್ರಮುಖ ನಗರಗಳಲ್ಲಿ ಲೀಟರ್​ ಪೆಟ್ರೋಲ್​ ದರ ಎಷ್ಟಾಗಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Petrol Price Today: ಇಂದು ಸಹ ಏರಿಕೆ ಕಂಡಿದೆ ಪೆಟ್ರೋಲ್​, ಡೀಸೆಲ್​ ಬೆಲೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 28, 2021 | 8:00 AM

Share

Petrol Diesel Price Today | ದೆಹಲಿ: ಪ್ರತಿನಿತ್ಯ ಪೆಟ್ರೋಲ್, ಡೀಸೆಲ್ ದರ ಗಮನಿಸಿದಾಗ ದಿನದಿಂದ ದಿನಕ್ಕೆ ಇಂಧನ ದರ ಏರುತ್ತಲೇ ಇದೆ. ನಿನ್ನೆ ಕೂಡಾ ಇಂಧನ ದರದಲ್ಲಿ (Fuel Price) ಏರಿಕೆಯಾಗಿತ್ತು. ಆ ಬಳಿಕ ಇಂದು ಗುರುವಾರ (ಅ.28) ಪೆಟ್ರೋಲ್ (Petrol Price), ಡೀಸೆಲ್ ದರ ಏರಿಕೆ ಕಂಡಿದೆ. ಇತ್ತೀಚಿನ ದಿನಗಳಲ್ಲಿ ಏರಿಕೆ ಕಂಡ ಇಂಧನ ದರದಿಂದ ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಪೆಟ್ರೋಲ್, ಡೀಸೆಲ್ ದರ (Diesel Price) ಗರಿಷ್ಠ ಮಟ್ಟ ತಲುಪಿದೆ. ಕೇವಲ ಪೆಟ್ರೋಲ್ ಬೆಲೆಯೊಂದೇ ಅಲ್ಲದೇ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ.

ಇಂದು ದರ ಏರಿಕೆಯ ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 108.29 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ ಲೀಟರ್ ಡೀಸೆಲ್ ದರವೂ ಸಹ ಏರಿಕೆ ಕಂಡಿದ್ದು 97.02 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 114.14 ರೂಪಾಯಿಗೆ ಏರಿಕೆಯಾಗಿದೆ. ಲೀಟರ್ ಡೀಸೆಲ್ ಬೆಲೆ 105.12 ರೂಪಾಯಿ ದಾಖಲಾಗಿದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 105.13 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.25 ರೂಪಾಯಿ ನಿಗದಿಯಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 108.78 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.14 ರೂಪಾಯಿ ದಾಖಲಾಗಿದೆ. ಇನ್ನು, ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 116.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.38 ರೂಪಾಯಿ ಇದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 112.64 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.84 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 112.06 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.98 ರೂಪಾಯಿ ನಿಗದಿಯಾಗಿದೆ.

ಗುಹಾವಟಿಯಲ್ಲಿ ಲೀಟರ್ ಪೆಟ್ರೋಲ್ ದರ 104.30 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.87 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 105.22 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.98 ರೂಪಾಯಿ ಇದೆ. ಇನ್ನು, ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ ದರ 110.54 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.25 ರೂಪಾಯಿಗೆ ಏರಿಕೆಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 7:44 am, Thu, 28 October 21

Follow Us
TV9 Web
TV9 Web

TV9 Kannada

Read More
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು