Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ ನಾಲ್ಕನೇ ದಿನವೂ ಏರಿದ ಇಂಧನ ದರ; ಹೆಚ್ಚಳದ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

Petrol Rate Today, 29-10-2021: ಇಂದು ಶನಿವಾರ (ಅಕ್ಟೋಬರ್ 30) ಲೀಟರ್ ಪೆಟ್ರೋಲ್ ಬೆಲೆ 35 ಪೈಸೆ ಹೆಚ್ಚಳವಾಗಿದೆ ಅದೇ ರೀತಿ ಲೀಟರ್ ಡೀಸೆಲ್ ಬೆಲೆಯಲ್ಲಿಯೂ ಇಂದು 36 ಪೈಸೆ ಹೆಚ್ಚಳವಾಗಿದೆ.

Petrol Price Today: ಸತತ ನಾಲ್ಕನೇ ದಿನವೂ ಏರಿದ ಇಂಧನ ದರ; ಹೆಚ್ಚಳದ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on:Oct 30, 2021 | 8:31 AM

Petrol Diesel Price Today | ದೆಹಲಿ: ದೇಶದಲ್ಲಿ ದಿನೇ ದಿನೇ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗುತ್ತಲೇ ಇದೆ. ಸತತ ನಾಲ್ಕು ದಿನಗಳಿಂದ ಏರಿಕೆಯಾಗುತ್ತಲೇ ಇರುವ ಪೆಟ್ರೋಲ್ (Petrol Price), ಡೀಸೆಲ್ ದರದಲ್ಲಿ ಇಂದು ಶನಿವಾರ (ಅಕ್ಟೋಬರ್ 30) ಲೀಟರ್ ಪೆಟ್ರೋಲ್ ಬೆಲೆ 35 ಪೈಸೆ ಹೆಚ್ಚಳವಾಗಿದೆ ಅದೇ ರೀತಿ ಲೀಟರ್ ಡೀಸೆಲ್ ಬೆಲೆಯಲ್ಲಿಯೂ (Diesel Price) ಇಂದು 36 ಪೈಸೆ ಹೆಚ್ಚಳವಾಗಿದೆ. ಆ ಬಳಿಕ ಪ್ರಮುಖ ನಗರಗಳಲ್ಲಿ ಇಂಧನ ದರ (Fuel Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 108.99 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.73 ರೂಪಾಯಿ ಇದೆ. ಸೆಪ್ಟೆಂಬರ್​ 24 ರಿಂದ ಪೆಟ್ರೋಲ್​ ಬೆಲೆಗಿಂತ ಡೀಸೆಲ್​ ಬೆಲೆ ಏರಿಕೆಯಾಗಿದೆ. ಪೆಟ್ರೋಲ್​ ಬೆಲೆ 7.75 ರೂಪಾಯಿ ಹೆಚ್ಚಳವಾಗಿದ್ದರೆ ಇದೇ ಸಮಯದಲ್ಲಿ ಡೀಸೆಲ್​ ಬೆಲೆ ಲೀಟರ್​ಗೆ 8.45 ರೂಪಾಯಿ ಹೆಚ್ಚಳವಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 105.90 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.19 ರೂಪಾಯಿ ನಿಗದಿಯಾಗಿದೆ. ಇನ್ನು, ಚಂಡೀಗಢದಲ್ಲಿ ಲೀಟರ್ ಪೆಟ್ರೋಲ್ ದರ 104.89 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.43 ರೂಪಾಯಿ ದಾಖಲಾಗಿದೆ.

ಪೈಸೆಗಳ ಲೆಕ್ಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗುತ್ತಿದೆ. ಇಂದು ಏರಿಕೆಯ ಬಳಿಕ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 112.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 103.72 ರೂಪಾಯಿಗೆ ಏರಿಕೆಯಾಗಿದೆ. ಇನ್ನು, ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 114.81 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 105.86 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 109.46 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 100.84 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 105.74 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 101.92 ರೂಪಾಯಿ ದಾಖಲಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 7:52 am, Sat, 30 October 21

ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ