AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price: ಒಂದೇ ವಾರದಲ್ಲಿ ಮೂರನೇ ಬಾರಿ ಏರಿಕೆಯಾಯ್ತು ಇಂಧನ ದರ; ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು?

Petrol Diesel Price Today, 25-03-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.

Petrol Price: ಒಂದೇ ವಾರದಲ್ಲಿ ಮೂರನೇ ಬಾರಿ ಏರಿಕೆಯಾಯ್ತು ಇಂಧನ ದರ; ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 25, 2022 | 7:52 AM

Share

Petrol Diesel Price Today | ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ (Petrol Price) ಹಾಗೂ ಡೀಸೆಲ್ ಬೆಲೆಯಲ್ಲಿ (Diesel Price) ಏರಿಕೆಯಾಗಿತ್ತು. ಅದಾದ ನಂತರ ಬುಧವಾರ (ಮಾರ್ಚ್ 23) ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 84 ಪೈಸೆ ಏರಿಕೆ ಮಾಡಲಾಗಿತ್ತು. ಸತತ ಎರಡನೇ ದಿನವೂ 80 ಪೈಸೆ ಹೆಚ್ಚಳ ಆಗಿದ್ದು ವಾಹನ ಸವಾರರಿಗೆ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಬಿಸಿ ಮುಟ್ಟಿಸಿತ್ತು. ಇದೀಗ ಶುಕ್ರವಾರವಾದ ಇಂದು (ಮಾರ್ಚ್ 25) ಮತ್ತೆ ಇಂಧನ ದರದಲ್ಲಿ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನಲೆ ಈಗ ಭಾರತದಲ್ಲೂ ತೈಲ ಬೆಲೆ ಏರಿಕೆ ಆರಂಭವಾಗಿದೆ. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 80 ಪೈಸೆ ಹೆಚ್ಚಳವಾಗಿದೆ. ದೆಹಲಿಯಲ್ಲಿ 80 ಪೈಸೆ ಹೆಚ್ಚಳದ ಮೂಲಕ ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ ₹ 97.81 ರೂಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ₹ 89.07 ದಾಖಲಾಗಿದೆ.

ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 84 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್ ಬೆಲೆಯಲ್ಲಿ 85 ಪೈಸೆ ಏರಿಕೆಯಾಗಿದೆ. ಈ ಮೂಲಕ ಲೀ.ಪೆಟ್ರೋಲ್ ದರ ₹ 112.51, ಡೀಸೆಲ್ ₹ 96.70 ದಾಖಲಾಗಿದೆ. ಚೆನ್ನೈನಲ್ಲಿ ಇಂಧನ ದರದಲ್ಲಿ 76 ಪೈಸೆ ಏರಿಕೆಯಾಗಿದೆ. ಈ ಮೂಲಕ ಲೀಟರ್ ಪೆಟ್ರೋಲ್ ಬೆಲೆ 103.67 ರೂಗೆ ತಲುಪಿದ್ದು, ಡೀಸೆಲ್ ಬೆಲೆ 93.71 ರೂಗೆ ಏರಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ದರ 84 ಪೈಸೆ ಏರಿಕೆಯೊಂದಿಗೆ 106.34 ರೂ ದಆಖಲಾಗಿದೆ. ಹಾಗೆಯೇ ಡೀಸೆಲ್ ಬೆಲೆಯಲ್ಲಿ 80 ಪೈಸೆ ಹೆಚ್ಚಳವಾಗಿದ್ದು 91.42 ರೂ ದಾಖಲಾಗಿದೆ.

ಬೆಂಗಳೂರಿನಲ್ಲಿ 102.26 ರೂ ಇದ್ದ ಪೆಟ್ರೋಲ್ ದರ 103.11 ರೂಗೆ ಏರಿಕೆಯಾಗಿದೆ. ಪ್ರತಿ ಲೀಟರ್​ಗೆ 86.58 ರೂ ಇದ್ದ ಡೀಸೆಲ್ ದರ ₹ 87.37 ಗೆ ಏರಿಕೆಯಾಗಿದೆ. ಹೈದರಾಬಾದ್​ನಲ್ಲೂ ದರ ಏರಿಕೆಯಾಗಿದ್ದು, ಲೀಟರ್​ಗೆ ಪೆಟ್ರೋಲ್ ಬೆಲೆ 110.91 ರೂ ಹಾಗೂ ಡೀಸೆಲ್​ಗೆ 97.24 ರೂ ದಾಖಲಾಗಿದೆ. ಲಕ್ನೋದಲ್ಲಿ ಪೆಟ್ರೋಲ್​ ದರ 97.67 ರೂ ಹಾಗೂ ಡೀಸೆಲ್ ದರ 89.22 ರೂಗೆ ಏರಿಕೆಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

Gold Price Today: ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ; ಬೆಂಗಳೂರಿನಲ್ಲಿ 73 ಸಾವಿರದ ಗಡಿ ತಲುಪಿದ ಬೆಳ್ಳಿ ದರ

ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಶಾಕ್; ಏಪ್ರಿಲ್​ನಿಂದ ದುಬಾರಿಯಾಗಲಿವೆಯೇ ಹಲವು ಸೇವೆಗಳು? ಇಲ್ಲಿದೆ ಪೂರ್ಣ ವಿವರ

Published On - 7:50 am, Fri, 25 March 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!