Petrol Diesel Price Today | ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ (Petrol Price) ಹಾಗೂ ಡೀಸೆಲ್ ಬೆಲೆಯಲ್ಲಿ (Diesel Price) ಏರಿಕೆಯಾಗಿತ್ತು. ಅದಾದ ನಂತರ ಬುಧವಾರ (ಮಾರ್ಚ್ 23) ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 84 ಪೈಸೆ ಏರಿಕೆ ಮಾಡಲಾಗಿತ್ತು. ಸತತ ಎರಡನೇ ದಿನವೂ 80 ಪೈಸೆ ಹೆಚ್ಚಳ ಆಗಿದ್ದು ವಾಹನ ಸವಾರರಿಗೆ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಬಿಸಿ ಮುಟ್ಟಿಸಿತ್ತು. ಇದೀಗ ಶುಕ್ರವಾರವಾದ ಇಂದು (ಮಾರ್ಚ್ 25) ಮತ್ತೆ ಇಂಧನ ದರದಲ್ಲಿ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನಲೆ ಈಗ ಭಾರತದಲ್ಲೂ ತೈಲ ಬೆಲೆ ಏರಿಕೆ ಆರಂಭವಾಗಿದೆ. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 80 ಪೈಸೆ ಹೆಚ್ಚಳವಾಗಿದೆ. ದೆಹಲಿಯಲ್ಲಿ 80 ಪೈಸೆ ಹೆಚ್ಚಳದ ಮೂಲಕ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ₹ 97.81 ರೂಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ₹ 89.07 ದಾಖಲಾಗಿದೆ.
ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 84 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್ ಬೆಲೆಯಲ್ಲಿ 85 ಪೈಸೆ ಏರಿಕೆಯಾಗಿದೆ. ಈ ಮೂಲಕ ಲೀ.ಪೆಟ್ರೋಲ್ ದರ ₹ 112.51, ಡೀಸೆಲ್ ₹ 96.70 ದಾಖಲಾಗಿದೆ. ಚೆನ್ನೈನಲ್ಲಿ ಇಂಧನ ದರದಲ್ಲಿ 76 ಪೈಸೆ ಏರಿಕೆಯಾಗಿದೆ. ಈ ಮೂಲಕ ಲೀಟರ್ ಪೆಟ್ರೋಲ್ ಬೆಲೆ 103.67 ರೂಗೆ ತಲುಪಿದ್ದು, ಡೀಸೆಲ್ ಬೆಲೆ 93.71 ರೂಗೆ ಏರಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ದರ 84 ಪೈಸೆ ಏರಿಕೆಯೊಂದಿಗೆ 106.34 ರೂ ದಆಖಲಾಗಿದೆ. ಹಾಗೆಯೇ ಡೀಸೆಲ್ ಬೆಲೆಯಲ್ಲಿ 80 ಪೈಸೆ ಹೆಚ್ಚಳವಾಗಿದ್ದು 91.42 ರೂ ದಾಖಲಾಗಿದೆ.
ಬೆಂಗಳೂರಿನಲ್ಲಿ 102.26 ರೂ ಇದ್ದ ಪೆಟ್ರೋಲ್ ದರ 103.11 ರೂಗೆ ಏರಿಕೆಯಾಗಿದೆ. ಪ್ರತಿ ಲೀಟರ್ಗೆ 86.58 ರೂ ಇದ್ದ ಡೀಸೆಲ್ ದರ ₹ 87.37 ಗೆ ಏರಿಕೆಯಾಗಿದೆ. ಹೈದರಾಬಾದ್ನಲ್ಲೂ ದರ ಏರಿಕೆಯಾಗಿದ್ದು, ಲೀಟರ್ಗೆ ಪೆಟ್ರೋಲ್ ಬೆಲೆ 110.91 ರೂ ಹಾಗೂ ಡೀಸೆಲ್ಗೆ 97.24 ರೂ ದಾಖಲಾಗಿದೆ. ಲಕ್ನೋದಲ್ಲಿ ಪೆಟ್ರೋಲ್ ದರ 97.67 ರೂ ಹಾಗೂ ಡೀಸೆಲ್ ದರ 89.22 ರೂಗೆ ಏರಿಕೆಯಾಗಿದೆ.
In Chennai, the price of petrol is Rs 103.67 & diesel is Rs 93.71 (increased by 76 paise) and in Kolkata, the price of petrol is Rs 106.34 (increased by 84 paise) and diesel is 91.42 (increased by 80 paise)
— ANI (@ANI) March 25, 2022
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
Gold Price Today: ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ; ಬೆಂಗಳೂರಿನಲ್ಲಿ 73 ಸಾವಿರದ ಗಡಿ ತಲುಪಿದ ಬೆಳ್ಳಿ ದರ
ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಶಾಕ್; ಏಪ್ರಿಲ್ನಿಂದ ದುಬಾರಿಯಾಗಲಿವೆಯೇ ಹಲವು ಸೇವೆಗಳು? ಇಲ್ಲಿದೆ ಪೂರ್ಣ ವಿವರ
Published On - 7:50 am, Fri, 25 March 22