AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಅಕ್ಟೋಬರ್​ ತಿಂಗಳ ಮೊದಲ ದಿನವೇ ಏರಿಕೆಯಾದ ಪೆಟ್ರೋಲ್​, ಡೀಸೆಲ್​ ದರ; ಇಲ್ಲಿದೆ ಸಂಪೂರ್ಣ ವಿವರ

Petrol Rate Today: ನಿನ್ನೆ ಸಹ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿತ್ತು. ಇಂದು ಮತ್ತೆ ಇಂಧನ ದರ ಏರಿಕೆ ಆಗಿರುವುದು ಗ್ರಾಹಕರಿಗೆ ಬೇಸರದ ಸಂಗತಿ.

Petrol Price Today: ಅಕ್ಟೋಬರ್​ ತಿಂಗಳ ಮೊದಲ ದಿನವೇ ಏರಿಕೆಯಾದ ಪೆಟ್ರೋಲ್​, ಡೀಸೆಲ್​ ದರ; ಇಲ್ಲಿದೆ ಸಂಪೂರ್ಣ ವಿವರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 01, 2021 | 7:34 AM

Share

Petrol Diesel Price Today | ದೆಹಲಿ: ಸರ್ಕಾರಿ ತೈಲ ಕಂಪನಿಗಳ ಇಂದು ( ಅಕ್ಟೋಬರ್ 1, ಶುಕ್ರವಾರ) ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಿವೆ. ಇಂದು ಲೀಟರ್ ಪೆಟ್ರೋಲ್ ದರ 22 ರಿಂದ 30 ಪೈಸೆ ಹೆಚ್ಚಳವಾಗಿದ್ದರೆ, ಲೀಟರ್ ಡೀಸೆಲ್ ದರ 29 ರಿಂದ 32 ಪೈಸೆ ಹೆಚ್ಚಳವಾಗಿದೆ. ನಿನ್ನೆ ಸಹ ಪೆಟ್ರೋಲ್ (Petrol Price), ಡೀಸೆಲ್ ದರ (Diesel Price) ಏರಿಕೆಯಾಗಿತ್ತು. ಇಂದು ಮತ್ತೆ ಇಂಧನ ದರ (Fuel Price) ಏರಿಕೆ ಆಗಿರುವುದು ಗ್ರಾಹಕರಿಗೆ ಬೇಸರದ ಸಂಗತಿ. ಈಗಲೇ ಇಂಧನ ದರ ಗರಿಷ್ಠ ಮಟ್ಟದಲ್ಲಿದೆ, ಇದರ ಮೇಲೆ ಮತ್ತೆ ಬೆಲೆ ಏರಿಕೆ ಆಗುತ್ತಿರುವುದು ಸಾಮಾನ್ಯ ಜನರ ಕೆಂಗಣ್ಣಿಗೆ ಕಾರಣವಾಗಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.89 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.17 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.95 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.84 ರೂಪಾಯಿ ಆಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.47 ರೂಪಾಯಿ ಹಾಗೂ ಲೀಟರ್ ಡಿಸೆಲ್ ದರ 93.27 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 99.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.74 ರೂಪಾಯಿಗೆ ಏರಿಕೆ ಆಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.44 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.70 ರೂಪಾಯಿಗೆ ಏರಿಕೆ ಆಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.37 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.09 ರೂಪಾಯಿ ಇದೆ.

ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.99 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.69 ರೂಪಾಯಿ ಇದೆ. ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 104.64 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.40 ರೂಪಾಯಿ ಇದೆ. ಛಂಡೀಗಢದಲ್ಲಿ ಲೀಟರ್ ಪೆಟ್ರೋಲ್ ದರ 98.08 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.90 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 7:21 am, Fri, 1 October 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ