AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸಹ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ; ಸತತ ಆರು ದಿನಗಳಿಂದ ಇಂಧನ ದರ ಹೆಚ್ಚಳ

Petrol Diesel Rate Today: ಇಂದು ಸಹ ಪೆಟ್ರೋಲ್​, ಡೀಸೆಲ್​ ದರ ಏರಿಕೆ ಆಗಿದೆ. ಸತತ ಆರನೇ ದಿನವೂ ಸಹ ಇಂಧನ ದರ ಏರಿಕೆ ಕಂಡಿದೆ. ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

Petrol Price Today: ಇಂದು ಸಹ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ; ಸತತ ಆರು ದಿನಗಳಿಂದ ಇಂಧನ ದರ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 10, 2021 | 8:23 AM

Share

Petrol Diesel Price Today | ದೆಹಲಿ: ನಿನ್ನೆ ಕೂಡಾ ಪೆಟ್ರೋಲ್, ಡೀಸೆಲ್ ಬೆಲೆಗಳು ಏರಿಕೆ ಕಂಡಿದ್ದವು. ಆ ಬಳಿಕ ಇಂದು (ಅಕ್ಟೋಬರ್ 10, ಭಾನುವಾರ) ಪೆಟ್ರೋಲ್ (Petrol Price), ಡೀಸೆಲ್ ಬೆಲೆಯಲ್ಲಿ (Diesel Price) ಏರಿಕೆ ಕಂಡು ಬಂದಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಇಂಧನ ದರ (Fuel Price) ಏರಿಕೆಯಾಗಿದೆ. ಇಂದು ನಿಮ್ಮ ನಗರದಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಎಷ್ಟು ಏರಿಕೆಯಾಗಿದೆ? ಎಂಬೆಲ್ಲಾ ಮಾಹಿತಿಗಳು ಈ ಕೆಳಗಿನಂತಿದೆ ಪರಿಶೀಲಿಸಿ.

ಲೀಟರ್ ಪೆಟ್ರೋಲ್ ದರದಲ್ಲಿ 30 ಪೈಸೆ ಹಾಗೂ ಲೀಟರ್ ಡೀಸೆಲ್ ದರದಲ್ಲಿ 47 ಪೈಸೆ ಏರಿಕೆಯಾಗಿದೆ. ಆ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 104.14 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.82 ರೂಪಾಯಿಗೆ ಏರಿಕೆ ಆಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.80 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.93 ರೂಪಾಯಿಗೆ ಏರಿಕೆ ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 110.12 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.66 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.53 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.26 ರೂಪಾಯಿಗೆ ಏರಿಕೆಯಾಗಿದೆ.

ಇನ್ನು, ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.33 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.27 ರೂಪಾಯಿಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 107.77 ರೂಪಾಯಿ ಹಾಗೂ 98.52 ರೂಪಾಯಿ ನಿಗದಿಯಾಗಿದೆ. ಇನ್ನು, ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 107.29 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.36 ರೂಪಾಯಿ ನಿಗದಿಯಾಗಿದೆ.

ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 101.18 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.26 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 112.69 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.91 ರೂಪಾಯಿ ಇದೆ. ಅದೇ ರೀತಿ ಚಂಡೀಗಢದಲ್ಲಿ ಲೀಟರ್ ಪೆಟ್ರೋಲ್ ದರ 100.24 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ದರ 92.55 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:11 am, Sun, 10 October 21

Follow Us
TV9 Web
TV9 Web

TV9 Kannada

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!