AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ರಾಜ್ಯದಲ್ಲಿಯೂ 100ರ ಗಡಿ ದಾಟಿದ ಡೀಸೆಲ್ ಬೆಲೆ

Petrol Rate Today: ನಿರಂತರವಾಗಿ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ ಕಾಣುತ್ತಲೇ ಇದೆ. ಆ ಬಳಿಕ ಪೆಟ್ರೋಲ್​ ಬೆಲೆಯೊಂದೇ ಅಲ್ಲದೇ ಲೀಟರ್​ ಡೀಸೆಲ್​ ದರವೂ ಸಹ 100ರ ಗಡಿ ದಾಟಿದೆ.

Petrol Price Today: ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ರಾಜ್ಯದಲ್ಲಿಯೂ 100ರ ಗಡಿ ದಾಟಿದ ಡೀಸೆಲ್ ಬೆಲೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 11, 2021 | 8:05 AM

Share

Petrol Diesel Price Today | ಬೆಂಗಳೂರು: ದೇಶದಲ್ಲಿ ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕಾಣುತ್ತಲೇ ಇದೆ. ಇಂದು ಸಹ (ಅಕ್ಟೋಬರ್​ 11, ಸೋಮವಾರ) ಲೀಟರ್​ ಪೆಟ್ರೋಲ್ ಬೆಲೆ 30 ಪೈಸೆ ಹಾಗೂ ಡೀಸೆಲ್ ಬೆಲೆ 35 ಪೈಸೆ ಏರಿಕೆ ಆಗಿದೆ. ಆ ಬಳಿಕ ಮುಂಬೈನಲ್ಲಿ ಲೀಟರ್​ ಪೆಟ್ರೋಲ್ ಬೆಲೆ (Petrol Price) 110.41 ರೂಪಾಯಿ ಹಾಗೂ ಲೀಟರ್​ ಡೀಸೆಲ್  ಬೆಲೆ (Diesel Price) 101.03 ರೂಪಯಿಗೆ ಏರಿಕೆ ಆಗಿದೆ. ಜತೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್ ಬೆಲೆ 104.44 ರೂಪಾಯಿ ಹಾಗೂ ಲೀಟರ್​ ಡೀಸೆಲ್ ಬೆಲೆ 93.17 ರೂಪಾಯಿ ನಿಗದಿಯಾಗಿದೆ.

ಕರ್ನಾಟಕ ರಾಜ್ಯದಲ್ಲಿ ಪೆಟ್ರೋಲ್​​ ಬೆಲೆಯೊಂದೇ ಅಲ್ಲದೇ ಇದೀಗ ಲೀಟರ್​ ಡೀಸೆಲ್ ​ಬೆಲೆಯೂ 100ರ ಗಡಿ ದಾಟಿದೆ. ಪೆಟ್ರೋಲ್, ಡೀಸೆಲ್ ಬೆಲೆ ದಿನೇ ದಿನೆ ಏರಿಕೆ ಕಾಣುತ್ತಿದ್ದು, ಶಿವಮೊಗ್ಗದಲ್ಲಿ ಲೀಟರ್​ ಪೆಟ್ರೋಲ್ ಬೆಲೆ 109.69 ರೂಪಾಯಿ, ಲೀಟರ್​ ಡೀಸೆಲ್  ಬೆಲೆ 100.29 ರೂಪಾಯಿ ಇದೆ. ಬೀದರ್​ನಲ್ಲಿ ಲೀಟರ್​ ಪೆಟ್ರೋಲ್​ ದರ 108.97 ರೂಪಾಯಿ ಹಾಗೂ ಲೀಟರ್​ ಡೀಸೆಲ್  ಬೆಲೆ 99.73 ರೂಪಾಯಿಗೆ ಏರಿಕೆಯಾಗಿದೆ.

ತುಮಕೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 108.14 ರೂಪಾಯಿ, ಲೀಟರ್ ಡೀಸೆಲ್ ಬೆಲೆ 98.74 ರೂಪಾಯಿ ಇದೆ. ಮೈಸೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.57 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 98.43 ರೂಪಾಯಿ ಇದೆ. ಇನ್ನು, ರಾಮನಗರದಲ್ಲಿ ಲೀಟರ್ ಪೆಟ್ರೋಲ್ ಬೆಲೆ 108.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 99.19 ರೂಪಾಯಿ ಇದೆ. ಹಾಸನದಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.83 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 98.55 ರೂಪಾಯಿ ಇದೆ.

ವಿಜಯಪುರದಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 98.65 ರೂಪಾಯಿ ಇದೆ. ದಾವಣಗೆರೆಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 109.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 100.44 ರೂಪಾಯಿ ಇದೆ. ಅದೇ ರೀತಿ ಧಾರವಾಡದಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.95 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 98.75 ರೂಪಾಯಿ ಇದೆ. ಚಿತ್ರದುರ್ಗದಲ್ಲಿ ಲೀಟರ್ ಪೆಟ್ರೋಲ್ ಬೆಲೆ 109.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 100.44 ರೂಪಾಯಿಗೆ ಏರಿಕೆ ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 7:53 am, Mon, 11 October 21

Follow Us
TV9 Web
TV9 Web

TV9 Kannada

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!