Petrol Price Today: ನಿರಂತರ ಏರುತ್ತಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಇಂದು ಸ್ಥಿರ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಇಂಧನ ದರ ತಿಳಿಯಿರಿ

Petrol Rate Today: ಇಂದು ಪ್ರಮುಖ ನಗರಗಳಲ್ಲಿ ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Petrol Price Today: ನಿರಂತರ ಏರುತ್ತಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಇಂದು ಸ್ಥಿರ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಇಂಧನ ದರ ತಿಳಿಯಿರಿ
ಸಾಂದರ್ಭಿಕ ಚಿತ್ರ

Petrol Diesel Price Today | ದೆಹಲಿ: ತೈಲ ಕಂಪನಿಗಳು ಇಂದು ( ಅಕ್ಟೋಬರ್ 12, ಮಂಗಳವಾರ) ಇಂಧನ ಬೆಲೆಯಲ್ಲಿ (Fuel Price) ಯಾವುದೇ ಬದಲಾವಣೆ ಮಾಡಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ನಿರಂತರವಾಗಿ ಏರುತ್ತಿರುವ ಪೆಟ್ರೋಲ್ (Petrol Price), ಡೀಸೆಲ್ ಬೆಲೆ (Diesel Price) ನೋಡಿ ವಾಹನ ಸವಾರರು ಬೇಸರ ಹೊರಹಾಕುತ್ತಿದ್ದಾರೆ. ಕೇವಲ ಲೀಟರ್ ಪೆಟ್ರೋಲ್ ಬೆಲೆ 100ರ ಗಡಿ ಆಚೆಗಿರುವುದಲ್ಲದೇ ಲೀಟರ್ ಡೀಸೆಲ್ ಬೆಲೆಯೂ ಸಹ 100ರ ಗಡಿ ದಾಟಿದೆ. ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್, ಡಿಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 104.44 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.17 ರೂಪಾಯಿ ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 110.24 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.03 ರೂಪಾಯಿ ಇದೆ. ಇನ್ನು, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 105.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.28 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.59 ರೂಪಾಯಿ ಇದೆ.

ಇನ್ನು, ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.64 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.66 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 108.08 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.89 ರೂಪಾಯಿ ಇದೆ. ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 107.64 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.72 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 101.47 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.61 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

Read Full Article

Click on your DTH Provider to Add TV9 Kannada