AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸಹ ಏರಿಕೆಯಾದ ಇಂಧನ ದರ; ದೆಹಲಿಯಲ್ಲಿ 105 ರೂ. ದಾಟಿ ಮುನ್ನುಗ್ಗಿದ ಲೀಟರ್ ಪೆಟ್ರೋಲ್ ಬೆಲೆ

Petrol Rate Today: ಇಂದು ಸಹ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Petrol Price Today: ಇಂದು ಸಹ ಏರಿಕೆಯಾದ ಇಂಧನ ದರ; ದೆಹಲಿಯಲ್ಲಿ 105 ರೂ. ದಾಟಿ ಮುನ್ನುಗ್ಗಿದ ಲೀಟರ್ ಪೆಟ್ರೋಲ್ ಬೆಲೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 15, 2021 | 8:09 AM

Share

Petrol Diesel Price Today | ದೆಹಲಿ: ದೇಶಾದ್ಯಂತ ಇಂದು (ಅಕ್ಟೋಬರ್ 15, ಶುಕ್ರವಾರ) ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ನಿನ್ನೆ ಸಹ ಇಂದನ ದರದಲ್ಲಿ (Fuel Price) ಏರಿಕೆ ಕಂಡು ಬಂದಿತ್ತು. ಆ ಬಳಿಕ ಇಂದು ಸಹ ಪೆಟ್ರೋಲ್ (Petrol Price), ಡೀಸೆಲ್ ಬೆಲೆಗಳಲ್ಲಿ (Diesel Price) ಏರಿಕೆ ಆಗಿದೆ. ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಇಲ್ಲಿದೆ ಪರಿಶೀಲಿಸಿ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 35 ಪೈಸೆ ಏರಿಕೆಯಿಂದ 105.14 ರೂಪಾಯಿ ನಿಗದಿಯಾಗಿದೆ. ಡೀಸೆಲ್ ದರದಲ್ಲಿಯೂ 35 ಪೈಸೆ ಹೆಚ್ಚಳವಾಗಿದ್ದು, ಲೀಟರ್ ಡೀಸೆಲ್ ಬೆಲೆ 93.87 ರೂಪಾಯಿಗೆ ಏರಿಕೆಯಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 34 ಪೈಸೆ ಹೆಚ್ಚಳವಾಗಿದ್ದು, 111.09 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ದರದಲ್ಲಿ 37 ಪೈಸೆ ಹೆಚ್ಚಳವಾಗಿದ್ದು, ಲೀಟರ್ ಡೀಸೆಲ್ ದರ 101.78 ರೂಪಾಯಿ ನಿಗದಿಯಾಗಿದೆ. ಇನ್ನು, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 105.76 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.98 ರೂಪಾಯಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.26 ರೂಪಾಯಿ ಇದೆ.

ಇನ್ನು, ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 108.80 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 99.63 ರೂಪಾಯಿಗೆ ಏರಿಕೆಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೊಲ್ ದರ 109.37 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.42 ರೂಪಾಯಿ ನಿಗದಿಯಾಗಿದೆ. ಕಳೆದ 2 ವಾರಗಳಲ್ಲಿ ಗಮನಿಸಿದರೆ ಪೆಟ್ರೋಲ್ ಬೆಲೆಯಲ್ಲಿ 14 ಬಾರಿ ಹಾಗೂ ಡೀಸೆಲ್ ದರವನ್ನು 17 ಬಾರಿ ಏರಿಕೆ ಮಾಡಲಾಗಿದೆ. ಅಕ್ಟೋಬರ್ 12 ಮತ್ತು 13ನೇ ತಾರೀಕಿನಂದು ಸ್ಥಿರವಾಗಿದ್ದ ಪೆಟ್ರೋಲ್ ದರ ಮತ್ತೆ ನಿನ್ನೆಯಿಂದ ಏರಿಕೆ ಕಾಣಲು ಆರಂಭಿಸಿದೆ. ಇಂದು ಸತತ ಎರಡನೇ ದಿನವೂ ಸಹ ಇಂಧನ ದರ ಏರಿಕೆ ಕಂಡಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 7:54 am, Fri, 15 October 21

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?