Petrol Price Today: ಇಂದು ಪೆಟ್ರೋಲ್​, ಡೀಸೆಲ್​ ದರದಲ್ಲಿ ಏರಿಕೆ; ಪ್ರಮುಖ ನಗರಗಳಲ್ಲಿನ ಇಂಧನ ದರ ವಿವರ ಪರಿಶೀಲಿಸಿ

Petrol Rate Today: ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 102.14 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.47 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 108.15 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.12 ರೂಪಾಯಿ ಆಗಿದೆ.

Petrol Price Today: ಇಂದು ಪೆಟ್ರೋಲ್​, ಡೀಸೆಲ್​ ದರದಲ್ಲಿ ಏರಿಕೆ; ಪ್ರಮುಖ ನಗರಗಳಲ್ಲಿನ ಇಂಧನ ದರ ವಿವರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ

Petrol Diesel Price Today | ದೆಹಲಿ: ಸರ್ಕಾರಿ ತೈಲ ಕಂಪನಿಗಳು ಇಂದು ( ಅಕ್ಟೋಬರ್ 2, ಶನಿವಾರ) ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಿವೆ. ಇಂದು ಲೀಟರ್ ಪೆಟ್ರೋಲ್ ದರ 25 ಪೈಸೆ ಹೆಚ್ಚಳವಾಗಿದ್ದರೆ, ಲೀಟರ್ ಡೀಸೆಲ್ ದರ 30 ಪೈಸೆ ಹೆಚ್ಚಳವಾಗಿದೆ. ನಿನ್ನೆ ಸಹ ಪೆಟ್ರೋಲ್ (Petrol Price), ಡೀಸೆಲ್ ದರ (Diesel Price) ಏರಿಕೆಯಾಗಿತ್ತು. ಇಂದು ಮತ್ತೆ ಇಂಧನ ದರ (Fuel Price) ಏರಿಕೆ ಆಗಿರುವುದು ಗ್ರಾಹಕರಿಗೆ ಬೇಸರದ ಸಂಗತಿ. ಈಗಲೇ ಇಂಧನ ದರ ಗರಿಷ್ಠ ಮಟ್ಟದಲ್ಲಿದೆ, ಇದರ ಮೇಲೆ ಮತ್ತೆ ಬೆಲೆ ಏರಿಕೆ ಆಗುತ್ತಿರುವುದು ಸಾಮಾನ್ಯ ಜನರ ಕೆಂಗಣ್ಣಿಗೆ ಕಾರಣವಾಗಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 102.14 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.47 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 108.15 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.12 ರೂಪಾಯಿ ಆಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.74 ರೂಪಾಯಿ ಹಾಗೂ ಲೀಟರ್ ಡಿಸೆಲ್ ದರ 93.54 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 99.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.99 ರೂಪಾಯಿಗೆ ಏರಿಕೆ ಆಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.65 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.98 ರೂಪಾಯಿಗೆ ಏರಿಕೆ ಆಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.59 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.17 ರೂಪಾಯಿ ಇದೆ.

ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 99.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.85 ರೂಪಾಯಿ ಇದೆ. ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 104.91 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.72 ರೂಪಾಯಿ ಇದೆ. ಛಂಡೀಗಢದಲ್ಲಿ ಲೀಟರ್ ಪೆಟ್ರೋಲ್ ದರ 98.29 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.17 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

Read Full Article

Click on your DTH Provider to Add TV9 Kannada