AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಮತ್ತಷ್ಟು ಏರಿಕೆಯಾಗಿದೆ ಪೆಟ್ರೋಲ್​, ಡೀಸೆಲ್ ದರ; ಎಲ್ಲೆಲ್ಲಿ ಎಷ್ಟೆಷ್ಟು? ಮಾಹಿತಿ ಇಲ್ಲಿದೆ

Petrol Rate Today: ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 25 ರಿಂದ 33 ಪೈಸೆ ಹೆಚ್ಚಾಗಿದ್ದರೆ, ಲೀಟರ್ ಡೀಸೆಲ್ ದರದಲ್ಲಿ 29 ರಿಂದ 36 ಪೈಸೆ ಏರಿಕೆಯಾಗಿದೆ. ಯಾವ ಯಾವ ನಗರಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Petrol Price Today: ಮತ್ತಷ್ಟು ಏರಿಕೆಯಾಗಿದೆ ಪೆಟ್ರೋಲ್​, ಡೀಸೆಲ್ ದರ; ಎಲ್ಲೆಲ್ಲಿ ಎಷ್ಟೆಷ್ಟು? ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 03, 2021 | 7:35 AM

Share

Petrol Diesel Price Today | ದೆಹಲಿ: ಇತ್ತೀಚೆಗೆ ಪೆಟ್ರೋಲ್​, ಡೀಸೆಲ್ ದರ ಮತ್ತೆ ಏರಿಕೆ ಹಾದಿ ಹಿಡಿದಂತೆ ಅನ್ನಿಸುತ್ತಿದೆ. ನಿನ್ನೆ ಇಂಧನ ದರದಲ್ಲಿ (Fuel Price) ಕೊಂಚ ಏರಿಕೆ ಆಗಿತ್ತು. ಇಂದು ( ಅಕ್ಟೋಬರ್​ 3, ಭಾನುವಾರ) ಮತ್ತೆ ಪೆಟ್ರೋಲ್ (Petrol Price)​, ಡೀಸೆಲ್​ ದರವನ್ನು (Diesel Price) ಹೆಚ್ಚಿಸಲಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 25 ರಿಂದ 33 ಪೈಸೆ ಹೆಚ್ಚಾಗಿದ್ದರೆ, ಲೀಟರ್ ಡೀಸೆಲ್ ದರದಲ್ಲಿ 29 ರಿಂದ 36 ಪೈಸೆ ಏರಿಕೆಯಾಗಿದೆ. ಯಾವ ಯಾವ ನಗರಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 102.39 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.77 ರೂಪಾಯಿಗೆ ಏರಿಕೆ ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 108.43 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.48 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 103.07 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.87 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 100.01 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.31 ರೂಪಾಯಿಗೆ ಏರಿಕೆಯಾಗಿದೆ.

ಇನ್ನು, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ಲಡಾಕ್​ನಲ್ಲಿ ಈಗಾಗಲೇ ಲೀಟರ್ ಪೆಟ್ರೋಲ್ ದರ 100ರ ಗಡಿಯ ಆಚೆಗಿದೆ. ಪ್ರಮುಖ ಮೆಟ್ರೋ ನಗರಕ್ಕೆ ಹೋಲಿಸಿದರೆ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ ಗರಿಷ್ಠ ಮಟ್ಟದಲ್ಲಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 7:17 am, Sun, 3 October 21

Follow Us
TV9 Web
TV9 Web

TV9 Kannada

Read More
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ