AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಒಂದು ದಿನದ ವಿರಾಮದ ಬಳಿಕ ಮತ್ತೆ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ!

Petrol Rate Today: ಇಂದು ಲೀಟರ್ ಪೆಟ್ರೋಲ್ ದರದಲ್ಲಿ 21 ರಿಂದ 25 ಪೈಸೆ ಹೆಚ್ಚಳ ಮಾಡಲಾಗಿದೆ. ಲೀಟರ್ ಡೀಸೆಲ್ ಬೆಲೆಯಲ್ಲಿ 30 ರಿಂದ 32 ಪೈಸೆ ಏರಿಕೆ ಮಾಡಲಾಗಿದೆ. ನಿಮ್ಮೂರಿನಲ್ಲಿ ಇಂಧನ ದರ ಎಷ್ಟಿದೆ ಎಂಬ ಮಾಹಿತಿ ಪರಿಶೀಲಿಸಿ.

Petrol Price Today: ಒಂದು ದಿನದ ವಿರಾಮದ ಬಳಿಕ ಮತ್ತೆ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 05, 2021 | 9:10 AM

Share

Petrol Diesel Price Today | ದೆಹಲಿ: ನಿನ್ನೆ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಆ ಬಳಿಕ ಇಂದು ( ಅಕ್ಟೋಬರ್ 5, ಮಂಗಳವಾರ) ಪೆಟ್ರೋಲ್ (Petrol Price) ಮತ್ತು ಡೀಸೆಲ್ ದರ (Diesel Price) ಏರಿಕೆಯತ್ತ ಸಾಗಿದೆ. ಲೀಟರ್ ಪೆಟ್ರೋಲ್ ದರದಲ್ಲಿ 21 ರಿಂದ 25 ಪೈಸೆ ಹೆಚ್ಚಳ ಮಾಡಲಾಗಿದೆ. ಲೀಟರ್ ಡೀಸೆಲ್ ಬೆಲೆಯಲ್ಲಿ 30 ರಿಂದ 32 ಪೈಸೆ ಏರಿಕೆ ಮಾಡಲಾಗಿದೆ. ಇಂದು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಂದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ (Fuel Price) ಏರಿಕೆ ಕಂಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 102.64 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 108.67 ರೂಪಾಯಿಗೆ ಏರಿಕೆಯಾಗಿದೆ. ಇನ್ನು, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 103.36 ರೂಪಾಯಿ ಇದೆ ಹಾಗೂ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 100.23 ರೂಪಾಯಿ ಇದೆ.

ದೆಹಲಿಯಲ್ಲಿ ಲೀಟರ್ ಡೀಸೆಲ್ ದರ 91.07 ರೂಪಾಯಿಗೆ ಏರಿಕೆಯಾಗಿದೆ. ಮುಂಬೈನಲ್ಲಿ ಲೀಟರ್ ಡೀಸೆಲ್ ದರ 98.80 ರೂಪಾಯಿ ಹಾಗೂ ಕೋಲ್ಕತ್ತಾದಲ್ಲಿ ಲೀಟರ್ ಡೀಸೆಲ್ ದರ 94.17 ರೂಪಾಯಿಗೆ ಏರಿಕೆ ಆಗಿದೆ. ಇನ್ನು, ಚೆನ್ನೈನಲ್ಲಿ ಲೀಟರ್ ಡೀಸೆಲ್ ದರ 95.59 ರೂಪಾಯಿಗೆ ಏರಿದೆ.

ಇನ್ನು, ಮಧ್ಯ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಕ್​ನಲ್ಲಿ ಲೀಟರ್ ಪೆಟ್ರೋಲ್ ದರ ಈಗಾಗಲೇ 100 ಗಡಿ ಆಚೆಗಿದೆ. ಆ ನಂತರದಲ್ಲಿಯೂ ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುತ್ತಲೇ ಇರುವುದು ಗ್ರಾಹಕರ ಕೆಂಗಣ್ಣಿಗೆ ಕಾರಣವಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 7:09 am, Tue, 5 October 21

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ