Petrol Diesel Price Today | ದೆಹಲಿ: ಸತತವಾಗಿ ಮೂರನೇ ದಿನವೂ ಪೆಟ್ರೋಲ್ (Petrol Price), ಡೀಸೆಲ್ ಬೆಲೆಯಲ್ಲಿ (Diesel Price) ಏರಿಕೆ ಕಂಡು ಬಂದಿದೆ. ಇಂದು ( ಅಕ್ಟೋಬರ್ 7, ಗುರುವಾರ) ಇಂಧನ ದರ (Fuel Price) ಮತ್ತೆ ಹೆಚ್ಚಳವಾಗಿದೆ. ಲೀಟರ್ ಪೆಟ್ರೋಲ್ ದರದಲ್ಲಿ 26 ರಿಂದ 30 ಪೈಸೆಗಳಷ್ಟು ಏರಿಕೆ ಮಾಡಲಾಗಿದೆ. ಅದೇ ರೀತಿ ಲೀಟರ್ ಡೀಸೆಲ್ ದರದಲ್ಲಿ 35 ರಿಂದ 38 ಪೈಸೆ ಹೆಚ್ಚಳ ಮಾಡಲಾಗಿದೆ.
ಇಂದು ದರ ಏರಿಕೆಯ ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.24 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.77 ರೂಪಾಯಿಗೆ ಏರಿಕೆ ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.55 ರೂಪಾಯಿಗೆ ಏರಿಕೆ ಆಗಿದೆ. ಇನ್ನು, ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 100.75 ರೂಪಾಯಿ ಆಗಿದ್ದರೆ, ಲೀಟರ್ ಡೀಸೆಲ್ ದರ 96.26 ರೂಪಾಯಿಗೆ ಏರಿಕೆಯಾಗಿದೆ.
ಮಧ್ಯಪ್ರದೇಶದ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಲಡಾಕ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಈಗಾಗಲೇ ಲೀಟರ್ ಪೆಟ್ರೋಲ್ ಬೆಲೆ 100ರ ಗಡಿಯಾಚೆಗೆ ಇದೆ. ಬಳಿಕ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕಾಣುತ್ತಿರುವುದು ಗ್ರಾಹಕರಿಗೆ ನಿರಾಸೆ ಮೂಡಿಸಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html
Published On - 7:33 am, Thu, 7 October 21