Petrol Price Today: ಪೆಟ್ರೋಲ್, ಡೀಸೆಲ್ ದರ ಏರಿಕೆ; ಮುಂಬೈನಲ್ಲಿ ಮೊದಲ ಬಾರಿಗೆ 100ರ ಗಡಿ ದಾಟಿದ ಡೀಸೆಲ್ ಬೆಲೆ

Petrol Diesel Rate Today: ದೆಹಲಿಯಲ್ಲಿ ಇಂದು ಲೀಟರ್ ಪೆಟ್ರೋಲ್ ಬೆಲೆಯನ್ನು 26 ರಿಂದ 30 ಪೈಸೆ ಹೆಚ್ಚಳ ಮಾಡಲಾಗಿದೆ ಮತ್ತು ಲೀಟರ್ ಡೀಸೆಲ್ ಬೆಲೆಯನ್ನು 33 ರಿಂದ 37 ಪೈಸೆ ಹೆಚ್ಚಿಸಲಾಗಿದೆ.

Petrol Price Today: ಪೆಟ್ರೋಲ್, ಡೀಸೆಲ್ ದರ ಏರಿಕೆ; ಮುಂಬೈನಲ್ಲಿ ಮೊದಲ ಬಾರಿಗೆ 100ರ ಗಡಿ ದಾಟಿದ ಡೀಸೆಲ್ ಬೆಲೆ
ಸಾಂದರ್ಭಿಕ ಚಿತ್ರ
Edited By:

Updated on: Oct 09, 2021 | 8:33 AM

Petrol Diesel Price Today | ದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಸತತ ಐದು ದಿನಗಳಿಂದ ಏರುತ್ತಲೇ ಇದೆ. ಇಂದು (ಅಕ್ಟೋಬರ್ 9, ಶನಿವಾರ) ಮತ್ತೆ ಇಂಧನ ದರದಲ್ಲಿ (Fuel Price) ಏರಿಕೆ ಮಾಡಲಾಗಿದೆ. ದೆಹಲಿಯಲ್ಲಿ ಇಂದು ಲೀಟರ್ ಪೆಟ್ರೋಲ್ ಬೆಲೆಯನ್ನು 26 ರಿಂದ 30 ಪೈಸೆ ಹೆಚ್ಚಳ ಮಾಡಲಾಗಿದೆ ಮತ್ತು ಲೀಟರ್ ಡೀಸೆಲ್ ಬೆಲೆಯನ್ನು 33 ರಿಂದ 37 ಪೈಸೆ ಹೆಚ್ಚಿಸಲಾಗಿದೆ. ಆ ಮೂಲಕ ಇಂದು ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆ (Petrol Price) ಎಷ್ಟಿದೆ? ಲೀಟರ್ ಡೀಸೆಲ್ ಬೆಲೆ (Diesel Price) ಎಷ್ಟಾಗಿದೆ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.35 ರೂಪಾಯಿಗೆ ಏರಿಕೆ ಆಗಿದೆ. ಅದೇ ರೀತಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.83 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.29 ರೂಪಾಯಿಗೆ ಏರಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.27 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.93 ರೂಪಾಯಿ ನಿಗದಿಯಾಗಿದೆ. ಹಾಗೆಯೇ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.58 ರೂಪಾಯಿಗೆ ಏರಿಕೆ ಆಗಿದೆ.

ಮುಂಬೈನಲ್ಲಿ ಮೊದಲ ಬಾರಿಗೆ ಡೀಸೆಲ್ ಬೆಲೆ 100 ರೂ. ದಾಟಿದೆ
ಮುಂಬೈನಲ್ಲಿ ಇದೇ ಮೊದಲ ಬಾರಿಗೆ ಡೀಸೆಲ್ ಬೆಲೆ 100 ರೂ. ದಾಟಿದೆ. ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಪೆಟ್ರೋಲ್ ಬೆಲೆ 100 ರ ಗಡಿ ದಾಟಿದೆ. ಆದರೆ ಮುಂಬೈನಲ್ಲಿ ಡೀಸೆಲ್ ಕೂಡ ರೂಪಾಯಿ ದಾಟಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

Published On - 8:21 am, Sat, 9 October 21

Web contact

TV9 Kannada

Read More
Follow Us