AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಪೆಟ್ರೋಲ್​, ಡೀಸೆಲ್​ ದರದಲ್ಲಿ ಏರಿಕೆ; ನಿಮ್ಮೂರಿನಲ್ಲಿ ಎಷ್ಟಿದೆ ಇಂಧನ ದರ ಪರಿಶೀಲಿಸಿ

Petrol Rate Today: ಇಂದು ಲೀಟರ್ ಪೆಟ್ರೋಲ್ ದರದಲ್ಲಿ 24 ರಿಂದ 25 ಪೈಸೆ ಏರಿಕೆ ಆಗಿದೆ. ಅದೇ ರೀತಿ ಲೀಟರ್ ಡೀಸೆಲ್ ದರವನ್ನು 30 ರಿಂದ 35 ಪೈಸೆ ಹೆಚ್ಚಳ ಮಾಡಲಾಗಿದೆ.

Petrol Price Today: ಇಂದು ಪೆಟ್ರೋಲ್​, ಡೀಸೆಲ್​ ದರದಲ್ಲಿ ಏರಿಕೆ; ನಿಮ್ಮೂರಿನಲ್ಲಿ ಎಷ್ಟಿದೆ ಇಂಧನ ದರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 30, 2021 | 7:53 AM

Share

Petrol Diesel Price Today | ದೆಹಲಿ: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನಿನ್ನೆ ಸ್ಥಿರವಾಗಿದ್ದ ಪೆಟ್ರೋಲ್ (Petrol Price), ಡೀಸೆಲ್ ದರ (Diesel Price) ಇಂದು (ಸೆಪ್ಟೆಂಬರ್ 30, ಗುರುವಾರ) ಮತ್ತೆ ಏರಿಕೆಯಾಗಿದೆ, ಕಚ್ಚಾ ತೈಲ ಬೆಲೆ ಏರಿಕೆಯ ನಡುವೆ, ಇಂದು ತೈಲ ಮಾರುಕಟ್ಟೆ ಕಂಪನಿಗಳು ದೇಶೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯನ್ನು ಹೆಚ್ಚಿಸಿವೆ. ಇಂದು ಲೀಟರ್ ಪೆಟ್ರೋಲ್ ದರದಲ್ಲಿ 24 ರಿಂದ 25 ಪೈಸೆ ಏರಿಕೆ ಆಗಿದೆ. ಅದೇ ರೀತಿ ಲೀಟರ್ ಡೀಸೆಲ್ ದರವನ್ನು 30 ರಿಂದ 35 ಪೈಸೆ ಹೆಚ್ಚಳ ಮಾಡಲಾಗಿದೆ.

ಕಳೆದ ಒಂದು ವಾರದಲ್ಲಿ ಡೀಸೆಲ್ ಬೆಲೆಯನ್ನು ಐದು ಬಾರಿ ಹೆಚ್ಚಳ ಮಾಡಲಾಗಿದ್ದು, ಪೆಟ್ರೋಲ್ ದರ ಎರಡು ದಿನಗಳಿಂದ ದುಬಾರಿಯಾಗಿದೆ. ಈ ವಾರದ ಏರಿಕೆಯ ಬಳಿಕ ಡೀಸಲ್ ದರದಲ್ಲಿ ಸುಮಾರು ಒಂದೂವರೆ ರೂಪಾಯಿಯಷ್ಟು ಏರಿಕೆ ಕಂಡಿದೆ. ಲೀಟರ್ ಪೆಟ್ರೋಲ್ ದರ 40 ರಿಂದ 45 ಪೈಸೆಗಳಷ್ಟು ಹೆಚ್ಚಳವಾಗಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.64 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿಗೆ ಏರಿಕೆ ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.71 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.52 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.17 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.97 ರೂಪಾಯಿಗೆ ಏರಿಕೆ ಆಗಿದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 99.36 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.45 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್​ಗೆ 105.18 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.38 ರೂಪಾಯಿ ಆಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 110.11 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ದರ 98.77 ರೂಪಾಯಿ ಇದೆ.

ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.75 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.29 ರೂಪಾಯಿಗೆ ಏರಿಕೆಯಾಗಿದೆ. ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 104.34 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.05 ರೂಪಾಯಿ ಇದೆ. ಛಂಡೀಗಢದಲ್ಲಿ ಲೀಟರ್ ಪೆಟ್ರೋಲ್ ದರ 97.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.61 ರೂಪಾಯಿಗೆ ಏರಿಕೆ ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 7:44 am, Thu, 30 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ