AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on December 12: ಕುಸಿತವಾಗುತ್ತಲೇ ಇದೆ ಕಚ್ಚಾ ತೈಲದ ಬೆಲೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

Fuel Price Today: ಕಳೆದ 24 ಗಂಟೆಗಳಲ್ಲಿ ಕಚ್ಚಾತೈಲದ ಬೆಲೆ ಮತ್ತಷ್ಟು ಇಳಿಕೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯ ಮೇಲೂ ಪರಿಣಾಮ ಬೀರಿದೆ.

Petrol Price on December 12: ಕುಸಿತವಾಗುತ್ತಲೇ ಇದೆ ಕಚ್ಚಾ ತೈಲದ ಬೆಲೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ
ಪೆಟ್ರೋಲ್ ಬೆಲೆ
TV9 Web
| Edited By: |

Updated on: Dec 12, 2022 | 8:00 AM

Share

Fuel Price on December 12: ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Fuel Rate) ಬೆಲೆಗಳು ಕಡಿಮೆಯಾಗುತ್ತಲೇ ಇವೆ. ಕಳೆದ 24 ಗಂಟೆಗಳಲ್ಲಿ ಕಚ್ಚಾತೈಲದ ಬೆಲೆ ಮತ್ತಷ್ಟು ಇಳಿಕೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯ ಮೇಲೂ ಪರಿಣಾಮ ಬೀರಿದೆ. ಇಂದು (ಸೋಮವಾರ) ಬೆಳಗ್ಗೆ ಸರ್ಕಾರಿ ತೈಲ ಕಂಪನಿಗಳು ಬಿಡುಗಡೆ ಮಾಡಿದ ಪೆಟ್ರೋಲ್ (Petrol Price) ಮತ್ತು ಡೀಸೆಲ್‌ನ (Diesel Price) ಚಿಲ್ಲರೆ ಬೆಲೆಗಳು ಉತ್ತರ ಪ್ರದೇಶ-ಬಿಹಾರದಿಂದ ಹರಿಯಾಣಕ್ಕೆ ಇಳಿಕೆಯನ್ನು ತೋರಿಸುತ್ತಿವೆ. ಆದರೆ, ಇಂದಿಗೂ ಸರ್ಕಾರಿ ತೈಲ ಕಂಪನಿಗಳು ದೆಹಲಿ-ಮುಂಬೈ ಸೇರಿದಂತೆ ದೇಶದ 4 ಮಹಾನಗರಗಳಲ್ಲಿ ತೈಲದ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಇಂದು ಬೆಳಿಗ್ಗೆ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ (ನೋಯ್ಡಾ) 1 ಪೈಸೆ ಏರಿಕೆಯಾದ ನಂತರ ಪೆಟ್ರೋಲ್ ಲೀಟರ್‌ಗೆ ರೂ 96.60 ಮತ್ತು ಡೀಸೆಲ್ ರೂ 89.77 ಕ್ಕೆ ಮಾರಾಟವಾಗುತ್ತಿದೆ. ಲಕ್ನೋದಲ್ಲಿ ಪೆಟ್ರೋಲ್ ಬೆಲೆ 15 ಪೈಸೆಯಷ್ಟು ಅಗ್ಗವಾಗಿದೆ ಮತ್ತು ಲೀಟರ್‌ಗೆ 96.42 ರೂಪಾಯಿಗಳಿಗೆ ತಲುಪಿದೆ. ಆದರೆ ಡೀಸೆಲ್ 14 ಪೈಸೆಗಳಷ್ಟು ಕುಸಿದು ಲೀಟರ್‌ಗೆ 89.62 ರೂಪಾಯಿಗಳಿಗೆ ಮಾರಾಟವಾಗುತ್ತಿದೆ. ಹರಿಯಾಣದ ಗುರುಗ್ರಾಮ್‌ನಲ್ಲಿ ಇಂದು ಸಹ ಪೆಟ್ರೋಲ್ 13 ಪೈಸೆ ಅಗ್ಗವಾಗಿ ಲೀಟರ್‌ಗೆ 96.97 ರೂ ಮತ್ತು ಡೀಸೆಲ್ ಲೀಟರ್‌ಗೆ 12 ಪೈಸೆ ಇಳಿಕೆಯಾಗಿ 89.84 ರೂ. ಆಗಿದೆ. ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 32 ಪೈಸೆ ಇಳಿಕೆಯಾಗಿ 107.42 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 30 ಪೈಸೆ ಇಳಿಕೆಯಾಗಿ 94.21 ರೂ.ಗೆ ತಲುಪಿದೆ.

ಇದನ್ನೂ ಓದಿ: Petrol, Diesel Price: ಮುಂಬೈ, ದೆಹಲಿ ಮುಂತಾದ ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

ಇಂದು ಬೆಳಗ್ಗೆ ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 77.01 ಡಾಲರ್ ಆಗಿತ್ತು. ಡಬ್ಲ್ಯುಟಿಐ ದರ ಕೂಡ ಪ್ರತಿ ಬ್ಯಾರೆಲ್‌ಗೆ 72 ಡಾಲರ್‌ಗೆ ಇಳಿದಿದೆ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೀಗಿದೆ… ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.65 ರೂ. ಮತ್ತು ಡೀಸೆಲ್ 89.82 ರೂ. ಆಗಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.31 ರೂ. ಮತ್ತು ಡೀಸೆಲ್ 94.27 ರೂ. ಆಗಿದೆ.

ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ 87.89 ರೂ. ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ 94.24 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ 92.76 ರೂ. ಆಗಿದೆ. ನೊಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.60 ರೂ. ಮತ್ತು ಡೀಸೆಲ್ 89.77 ರೂ. ಆಗಿದೆ. ಘಜಿಯಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.26 ರೂ. ಮತ್ತು ಡೀಸೆಲ್ 89.45 ರೂ. ಆಗಿದೆ. ಗುರುಗ್ರಾಮದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.97 ರೂ. ಮತ್ತು ಡೀಸೆಲ್ 89.84 ರೂ. ಆಗಿದೆ. ಪಾಟ್ನಾದಲ್ಲಿ ಪೆಟ್ರೋಲ್ ಲೀಟರ್‌ಗೆ 107.42 ರೂ. ಮತ್ತು ಡೀಸೆಲ್ 94.21 ರೂ. ಆಗಿದೆ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.42 ರೂ. ಮತ್ತು ಡೀಸೆಲ್ 89.62 ರೂ. ಆಗಿದೆ.

ಇದನ್ನೂ ಓದಿ: Petrol Price on December 10: ಕಚ್ಚಾ ತೈಲದ ಬೆಲೆ ಕುಸಿತ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗುತ್ತಿದೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಅನ್ವಯವಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ.

ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಡೀಸೆಲ್‌ನ ದೈನಂದಿನ ದರವನ್ನು ಸಹ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9223112222 ಗೆ ಟೈಪ್ ಮಾಡುವ ಮೂಲಕ 9224992249 ಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಆದರೆ, HPCL ಗ್ರಾಹಕರು HPPrice ಮತ್ತು ಅವರ ಸಿಟಿ ಕೋಡ್ ಅನ್ನು 9222201122 ಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ