Petrol Price on December 27: ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

Fuel Price Today: ಇಂದು (ಮಂಗಳವಾರ) ಬೆಳಿಗ್ಗೆ ಸರ್ಕಾರಿ ತೈಲ ಕಂಪನಿಗಳು ಹೊರಡಿಸಿದ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯಲ್ಲೂ ಬದಲಾವಣೆ ಗೋಚರಿಸುತ್ತಿದೆ.

Petrol Price on December 27: ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ
ಪೆಟ್ರೋಲ್, ಡೀಸೆಲ್ ಬೆಲೆ
Follow us
| Updated By: Digi Tech Desk

Updated on:Dec 27, 2022 | 8:18 AM

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 1 ಡಾಲರ್​​ನಷ್ಟು ಜಿಗಿದಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 84 ಡಾಲರ್​​ಗೆ ತಲುಪಿದೆ. ಇಂದು (ಮಂಗಳವಾರ) ಬೆಳಿಗ್ಗೆ ಸರ್ಕಾರಿ ತೈಲ ಕಂಪನಿಗಳು ಹೊರಡಿಸಿದ ಪೆಟ್ರೋಲ್ (Petrol Price) ಮತ್ತು ಡೀಸೆಲ್ (Diesel Price Today) ಚಿಲ್ಲರೆ ಬೆಲೆಯಲ್ಲೂ ಬದಲಾವಣೆ ಗೋಚರಿಸುತ್ತಿದೆ. ಆದರೆ, ಇಂದಿಗೂ ದೆಹಲಿ-ಮುಂಬೈನಂತಹ ಮಹಾನಗರಗಳಲ್ಲಿ ಇಂಧನದ ಬೆಲೆಯಲ್ಲಿ (Fuel Price) ಯಾವುದೇ ಬದಲಾವಣೆಯಾಗಿಲ್ಲ.

ಸರ್ಕಾರಿ ತೈಲ ಕಂಪನಿಗಳ ಪ್ರಕಾರ, ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 64 ಪೈಸೆಗಳಷ್ಟು ಏರಿಕೆಯಾಗಿದ್ದು, 108.12 ರೂ.ಗೆ ತಲುಪಿದೆ. ಆದರೆ, ಡೀಸೆಲ್ ಬೆಲೆ ಲೀಟರ್‌ಗೆ 60 ಪೈಸೆ ಏರಿಕೆಯಾಗಿ 94.86 ರೂ.ಗೆ ತಲುಪಿದೆ. ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದಲ್ಲಿ ಇಂದು ಪೆಟ್ರೋಲ್ ಬೆಲೆ 34 ಪೈಸೆಯಷ್ಟು ಕಡಿಮೆಯಾಗಿ, ಲೀಟರ್‌ಗೆ 96.58 ರೂ.ಗಳಿಗೆ ತಲುಪಿದೆ. ಆದರೆ, ಡೀಸೆಲ್ ಬೆಲೆ 33 ಪೈಸೆ ಅಗ್ಗವಾಗಿ ಲೀಟರ್‌ಗೆ 89.75 ರೂ.ಗಳಿಗೆ ಮಾರಾಟವಾಗುತ್ತಿದೆ.

ಕಚ್ಚಾ ತೈಲದ ಬೆಲೆ

ಕಚ್ಚಾ ತೈಲದ ಬೆಲೆ ಕಳೆದ 24 ಗಂಟೆಗಳಲ್ಲಿ ಮತ್ತೆ ಏರಿಕೆ ಕಾಣುತ್ತಿವೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಸುಮಾರು 1 ರೂ. ಏರಿಕೆಯಾಗಿದ್ದು ಪ್ರತಿ ಬ್ಯಾರೆಲ್‌ಗೆ 83.92 ಡಾಲರ್​ಗೆ ತಲುಪಿದೆ. WTIಯ ಬೆಲೆಯು ಪ್ರತಿ ಬ್ಯಾರೆಲ್‌ಗೆ 80.52 ಡಾಲರ್​​ಗೆ ಏರಿದೆ.

ಇದನ್ನೂ ಓದಿ: Petrol Price on December 26: ಕಚ್ಚಾ ತೈಲದ ಬೆಲೆ ದುಬಾರಿ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗುತ್ತಿದೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಅನ್ವಯವಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ.

ದೆಹಲಿ, ಮುಂಬೈ ಚೆನ್ನೈ ಮತ್ತು ಕೋಲ್ಕತಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೀಗಿವೆ:

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.65 ಮತ್ತು ಡೀಸೆಲ್ 89.82 ರೂ

ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ ಬೆಲೆ 94.27 ರೂ.

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ ಬೆಲೆ 94.24 ರೂ.

ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ರೂ. 106.03 ಮತ್ತು ಡೀಸೆಲ್ ಬೆಲೆ 92.76 ರೂ. ಆಗಿದೆ.

ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.92 ರೂ ಮತ್ತು ಡೀಸೆಲ್ 90.08 ರೂ ಆಗಿದೆ.

ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ ಮತ್ತು ಡೀಸೆಲ್ 89.76 ರೂ ಆಗಿದೆ.

ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.48 ರೂ ಮತ್ತು ಡೀಸೆಲ್ 94.26 ರೂ. ಆಗಿದೆ.

ಇದನ್ನೂ ಓದಿ: Petrol Price On December 19: ಬೆಂಗಳೂರು, ದೆಹಲಿ, ಚೆನ್ನೈ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಹೀಗಿದೆ

ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಡೀಸೆಲ್‌ನ ದೈನಂದಿನ ದರವನ್ನು ಸಹ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9223112222 ಗೆ ಟೈಪ್ ಮಾಡುವ ಮೂಲಕ 9224992249 ಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಆದರೆ, HPCL ಗ್ರಾಹಕರು HPPrice ಮತ್ತು ಅವರ ಸಿಟಿ ಕೋಡ್ ಅನ್ನು 9222201122 ಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:59 am, Tue, 27 December 22