AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on December 29: ಕಚ್ಚಾ ತೈಲದ ಬೆಲೆ ಕುಸಿತ; ಹಲವು ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ

Fuel Price Today: ಕಚ್ಚಾ ತೈಲದ ಬೆಲೆಗಳು ಕಳೆದ 24 ಗಂಟೆಗಳಲ್ಲಿ ಕಡಿಮೆಯಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಸುಮಾರು 1 ಡಾಲರ್​​ನಷ್ಟು ಕುಸಿದಿದ್ದು, ಪ್ರತಿ ಬ್ಯಾರೆಲ್‌ಗೆ 83.26 ಡಾಲರ್​​ಗೆ ತಲುಪಿದೆ.

Petrol Price on December 29: ಕಚ್ಚಾ ತೈಲದ ಬೆಲೆ ಕುಸಿತ; ಹಲವು ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ
ಪೆಟ್ರೋಲ್ ಬೆಲೆ
TV9 Web
| Edited By: |

Updated on: Dec 29, 2022 | 8:04 AM

Share

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ನಡೆಯುತ್ತಿರುವ ಏರಿಕೆ ಇಂದು ಅಂತ್ಯಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಸುಮಾರು 1 ಡಾಲರ್ ಕಡಿಮೆಯಾಗಿದೆ. ಇಂದು (ಗುರುವಾರ) ಬೆಳಿಗ್ಗೆ ಸರ್ಕಾರಿ ತೈಲ ಕಂಪನಿಗಳು ಹೊರಡಿಸಿದ ಪೆಟ್ರೋಲ್ (Petrol Price) ಮತ್ತು ಡೀಸೆಲ್ (Diesel Price Today) ಚಿಲ್ಲರೆ ಬೆಲೆಯಲ್ಲಿ ಬದಲಾವಣೆ ಕಂಡುಬಂದಿದೆ. ಇಂದು ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ತೈಲದ ದರಗಳು (Fuel Price) ಇಳಿಕೆಯಾಗಿವೆ. ಆದರೆ, ದೆಹಲಿ-ಮುಂಬೈನಂತಹ ದೇಶದ ನಾಲ್ಕು ಮಹಾನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಸರ್ಕಾರಿ ತೈಲ ಕಂಪನಿಗಳ ಪ್ರಕಾರ, ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಇಂದು ಪೆಟ್ರೋಲ್ ಲೀಟರ್‌ಗೆ 18 ಪೈಸೆ ಕಡಿಮೆಯಾಗಿದ್ದು, 108.71 ರೂ.ಗೆ ತಲುಪಿದೆ. ಆದರೆ ಡೀಸೆಲ್ ಲೀಟರ್‌ಗೆ 17 ಪೈಸೆ ಇಳಿದು 95.09 ರೂ.ಗೆ ತಲುಪಿದೆ. ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ (ನೋಯ್ಡಾ-ಗ್ರೇಟರ್ ನೋಯ್ಡಾ) ಜಿಲ್ಲೆಯಲ್ಲಿ ಇಂದು ಪೆಟ್ರೋಲ್ 27 ಪೈಸೆ ಇಳಿಕೆಯಾಗಿದ್ದು, ಲೀಟರ್‌ಗೆ 96.65 ರೂ.ಗೆ ತಲುಪಿದ್ದರೆ, ಡೀಸೆಲ್ ಲೀಟರ್‌ಗೆ 26 ಪೈಸೆ ಇಳಿದು 89.82 ರೂ.ಗೆ ತಲುಪಿದೆ. ಗಾಜಿಯಾಬಾದ್‌ನಲ್ಲಿ ಇಂದು ಪೆಟ್ರೋಲ್ ಬೆಲೆ 32 ಪೈಸೆಯಷ್ಟು ಏರಿಕೆಯಾಗಿದ್ದು, ಲೀಟರ್‌ಗೆ 96.58 ರೂ. ಮತ್ತು ಡೀಸೆಲ್ ಲೀಟರ್‌ಗೆ 32 ಪೈಸೆ ಏರಿಕೆಯಾಗಿ 89.82 ರೂ. ಹರಿಯಾಣದ ಗುರುಗ್ರಾಮದಲ್ಲಿ ಪೆಟ್ರೋಲ್ 8 ಪೈಸೆ ಅಗ್ಗವಾಗಿ ಲೀಟರ್‌ಗೆ 96.89 ರೂ. ಮತ್ತು ಡೀಸೆಲ್ ಲೀಟರ್‌ಗೆ 89.76 ರೂ. ಆಗಿದೆ.

ಕಚ್ಚಾ ತೈಲದ ಬೆಲೆಗಳು ಕಳೆದ 24 ಗಂಟೆಗಳಲ್ಲಿ ಕಡಿಮೆಯಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಸುಮಾರು 1 ಡಾಲರ್​​ನಷ್ಟು ಕುಸಿದಿದ್ದು, ಪ್ರತಿ ಬ್ಯಾರೆಲ್‌ಗೆ 83.26 ಡಾಲರ್​​ಗೆ ತಲುಪಿದೆ.

ಇದನ್ನೂ ಓದಿ: Petrol Price On December 23: ಬೆಂಗಳೂರು, ದೆಹಲಿ, ಚೆನ್ನೈ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಹೀಗಿದೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗುತ್ತಿದೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಅನ್ವಯವಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ.

ದೆಹಲಿ, ಮುಂಬೈ ಚೆನ್ನೈ ಮತ್ತು ಕೋಲ್ಕತಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೀಗಿವೆ:

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.65 ಮತ್ತು ಡೀಸೆಲ್ 89.82 ರೂ

ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ ಬೆಲೆ 94.27 ರೂ.

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ ಬೆಲೆ 94.24 ರೂ.

ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ರೂ. 106.03 ಮತ್ತು ಡೀಸೆಲ್ ಬೆಲೆ 92.76 ರೂ. ಆಗಿದೆ.

ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.92 ರೂ ಮತ್ತು ಡೀಸೆಲ್ 90.08 ರೂ ಆಗಿದೆ.

ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ ಮತ್ತು ಡೀಸೆಲ್ 89.76 ರೂ ಆಗಿದೆ.

ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.48 ರೂ ಮತ್ತು ಡೀಸೆಲ್ 94.26 ರೂ. ಆಗಿದೆ.

ಇದನ್ನೂ ಓದಿ: Petrol Price on December 28: ಹೆಚ್ಚುತ್ತಲೇ ಇದೆ ಕಚ್ಚಾ ತೈಲದ ಬೆಲೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಡೀಸೆಲ್‌ನ ದೈನಂದಿನ ದರವನ್ನು ಸಹ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9223112222 ಗೆ ಟೈಪ್ ಮಾಡುವ ಮೂಲಕ 9224992249 ಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಆದರೆ, HPCL ಗ್ರಾಹಕರು HPPrice ಮತ್ತು ಅವರ ಸಿಟಿ ಕೋಡ್ ಅನ್ನು 9222201122 ಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು