Petrol Price on December 31: ಹೊಸ ವರ್ಷಕ್ಕೂ ಮುನ್ನ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ

Fuel Price Today: ಮೇ 22ರಂದು ದೇಶದ ಎಲ್ಲಾ 4 ಮಹಾನಗರಗಳಲ್ಲಿ ಇಂಧನದ ಬೆಲೆಯಲ್ಲಿ ಕೊನೆಯ ಬದಲಾವಣೆ ಕಂಡುಬಂದಿತ್ತು. ತಜ್ಞರ ಪ್ರಕಾರ 2023ರ ಮೊದಲ ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆ ಆಗಬಹುದು.

Petrol Price on December 31: ಹೊಸ ವರ್ಷಕ್ಕೂ ಮುನ್ನ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ
ಪೆಟ್ರೋಲ್ ಮತ್ತು ಡೀಸೆಲ್ ದರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 31, 2022 | 7:53 AM

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸಾಕಷ್ಟು ಏರಿಳಿತವಾಗಿದ್ದು, ವರ್ಷದ ಕೊನೆಯ ವಹಿವಾಟಿನ ದಿನವಾದ ಇಂದು ಕಚ್ಚಾ ತೈಲದ ಬೆಲೆ ಶೇ. 3ರಷ್ಟು ಏರಿಕೆಯಾಗಿದೆ. ವಿಶೇಷವೆಂದರೆ ಎರಡು ವಾರಗಳಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಶೇ.8ರಷ್ಟು ಏರಿಕೆಯಾಗಿದೆ. ಆದರೂ ದೇಶದ ನಾಲ್ಕೂ ಮಹಾನಗರಗಳಲ್ಲಿ ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಯಲ್ಲಿ (Diesel Price Today) ಯಾವುದೇ ಬದಲಾವಣೆಯಾಗಿಲ್ಲ.

ಮೇ 22ರಂದು ದೇಶದ ಎಲ್ಲಾ 4 ಮಹಾನಗರಗಳಲ್ಲಿ ಇಂಧನದ ಬೆಲೆಯಲ್ಲಿ ಕೊನೆಯ ಬದಲಾವಣೆ ಕಂಡುಬಂದಿತ್ತು. ತಜ್ಞರ ಪ್ರಕಾರ 2023ರ ಮೊದಲ ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆ ಆಗಬಹುದು. ಪ್ರಸ್ತುತ ಕಚ್ಚಾ ತೈಲದ ಬೆಲೆ ಎಷ್ಟು ಆಗಿದೆ ಮತ್ತು ಇಂದು ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ಗೆ ನೀವು ಎಷ್ಟು ಪಾವತಿಸಬೇಕಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ.

ಈ ವರ್ಷದ ಕೊನೆಯ ವಹಿವಾಟಿನ ದಿನದಂದು ಕಚ್ಚಾ ತೈಲದ ಬೆಲೆಯಲ್ಲಿ ಸುಮಾರು ಶೇ.3ರಷ್ಟು ಏರಿಕೆಯಾಗಿದೆ. ಶುಕ್ರವಾರ ಬ್ರೆಂಟ್ ಕಚ್ಚಾ ತೈಲವು 86 ಡಾಲರ್ ಆಗಿತ್ತು. ಇದು ಶೇ. 3ರಷ್ಟು ಹೆಚ್ಚಾಗಿದೆ. ಡಿಸೆಂಬರ್ 16 ರಿಂದ, ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 8.19 ಡಾಲರ್​ ಏರಿಕೆ ಕಂಡಿದೆ. 2 ವಾರಗಳಲ್ಲಿ WTI ಕಚ್ಚಾ ತೈಲದ ಬೆಲೆಯಲ್ಲಿ ಶೇ. 8ರಷ್ಟು ಏರಿಕೆಯಾಗಿದೆ.

ಇದನ್ನೂ ಓದಿ: Petrol Price on December 30: ಕಚ್ಚಾ ತೈಲದ ನಿರಂತರ ಕುಸಿತ; ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

ಮತ್ತೊಂದೆಡೆ, ದೇಶದ 4 ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಮೇ 22ರ ನಂತರ ದೇಶದ ನಾಲ್ಕು ಮಹಾನಗರಗಳಲ್ಲಿ ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂದಿಗೂ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 106 ರೂ., ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96 ರೂ. ಆಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ನವೀಕರಿಸಲಾಗುತ್ತದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನವೀಕರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಜನಸಾಮಾನ್ಯರಿಗೆ ಪೆಟ್ರೋಲ್, ಡೀಸೆಲ್ ಬೆಲೆ ದುಬಾರಿಯಾಗಿದೆ.

ಇದನ್ನೂ ಓದಿ: Petrol Price on December 29: ಕಚ್ಚಾ ತೈಲದ ಬೆಲೆ ಕುಸಿತ; ಹಲವು ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ

ದೆಹಲಿ, ಮುಂಬೈ ಚೆನ್ನೈ ಮತ್ತು ಕೋಲ್ಕತಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೀಗಿವೆ:

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.65 ಮತ್ತು ಡೀಸೆಲ್ 89.82 ರೂ

ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ ಬೆಲೆ 94.27 ರೂ.

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ ಬೆಲೆ 94.24 ರೂ.

ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ರೂ. 106.03 ಮತ್ತು ಡೀಸೆಲ್ ಬೆಲೆ 92.76 ರೂ. ಆಗಿದೆ.

ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.92 ರೂ ಮತ್ತು ಡೀಸೆಲ್ 90.08 ರೂ ಆಗಿದೆ.

ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ ಮತ್ತು ಡೀಸೆಲ್ 89.76 ರೂ ಆಗಿದೆ.

ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.48 ರೂ ಮತ್ತು ಡೀಸೆಲ್ 94.26 ರೂ. ಆಗಿದೆ.

ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಡೀಸೆಲ್‌ನ ದೈನಂದಿನ ದರವನ್ನು ಸಹ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9223112222 ಗೆ ಟೈಪ್ ಮಾಡುವ ಮೂಲಕ 9224992249 ಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಆದರೆ, HPCL ಗ್ರಾಹಕರು HPPrice ಮತ್ತು ಅವರ ಸಿಟಿ ಕೋಡ್ ಅನ್ನು 9222201122 ಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ