Petrol Price on December 8: ಬೆಂಗಳೂರು, ಮುಂಬೈ ಸೇರಿದಂತೆ ಭಾರತದ ಪ್ರಮುಖ ನಗರಗಳ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

Fuel Price Today: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಮತ್ತು ಕ್ರೂಡ್ ಇಂಧನದ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದ್ದರೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Petrol Price on December 8: ಬೆಂಗಳೂರು, ಮುಂಬೈ ಸೇರಿದಂತೆ ಭಾರತದ ಪ್ರಮುಖ ನಗರಗಳ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ
ಪೆಟ್ರೋಲ್ ದರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 08, 2022 | 7:58 AM

Fuel Price on December 8: ಭಾರತೀಯ ರಿಸರ್ವ್ ಬ್ಯಾಂಕ್ 2023-24ರ ಹಣಕಾಸು ವರ್ಷದ ಹಣದುಬ್ಬರ ದರವನ್ನು ಶೇ. 6.7ಕ್ಕೆ ಅಂದಾಜಿಸಿದೆ. ಮುಂದಿನ 4 ತಿಂಗಳವರೆಗೆ ಹಣದುಬ್ಬರದಿಂದ ಜನರಿಗೆ ಯಾವುದೇ ಪರಿಹಾರ ಕಾಣುತ್ತಿಲ್ಲ. ಹೀಗಿರುವಾಗ ಪೆಟ್ರೋಲ್ (Petrol Price), ಡೀಸೆಲ್ ಬೆಲೆ ಏರಿಕೆಯಿಂದ ಜನ ಕಂಗಾಲಾಗಿದ್ದಾರೆ. ಮೇ 22ರಿಂದ ಪೆಟ್ರೋಲ್, ಡೀಸೆಲ್ ಬೆಲೆ (Diesel Price) ಏರಿಕೆಯಿಂದ ಜನರಿಗೆ ಪರಿಹಾರ ಸಿಕ್ಕಿಲ್ಲ. ಅಷ್ಟೇ ಅಲ್ಲ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಮತ್ತು ಕ್ರೂಡ್ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದ್ದರೂ ಪೆಟ್ರೋಲ್, ಡೀಸೆಲ್ (Fuel Price) ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇ 21ರಂದು ಪೆಟ್ರೋಲ್ ಮೇಲೆ ಲೀಟರ್​ಗೆ 8 ರೂ. ಮತ್ತು ಡೀಸೆಲ್ ಮೇಲೆ 6 ರೂ. ಅಬಕಾರಿ ಸುಂಕ ಕಡಿತ ಮಾಡುವುದಾಗಿ ಘೋಷಿಸಿದ್ದರು.ಸುಮಾರು 6 ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ ಮಾಡದೇ ಇರುವುದು ಇದೇ ಮೊದಲು. ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ಬೆಲೆಗಳನ್ನು ಬಿಡುಗಡೆ ಮಾಡಲಾಗುತ್ತದೆ. ಆ ದಿನದ ಹೊಸ ದರಗಳು ಬೆಳಿಗ್ಗೆ 6 ಗಂಟೆಯಿಂದಲೇ ಅನ್ವಯವಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳ ಸೇರ್ಪಡೆಯಿಂದಾಗಿ ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದರಿಂದಾಗಿ ಪೆಟ್ರೋಲ್ ಡೀಸೆಲ್ ಬೆಲೆ ತುಂಬಾ ಹೆಚ್ಚಾಗಿತ್ತು.

ಇದನ್ನೂ ಓದಿ: Petrol Diesel Price: ಕಚ್ಚಾ ತೈಲದ ಬೆಲೆಯಲ್ಲಿ ಮತ್ತೆ ಹೆಚ್ಚಳ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

ಭಾರತದ ಪ್ರಮುಖ ನಗರಗಳಲ್ಲಿ 6 ತಿಂಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರವಾಗಿದೆ. OPEC ರಾಷ್ಟ್ರಗಳು ಕಚ್ಚಾ ಉತ್ಪಾದನೆಯಲ್ಲಿ ಕಡಿತದ ಘೋಷಣೆ ಮಾಡಿದ ನಂತರ ಕಚ್ಚಾ ತೈಲದಲ್ಲಿ ಏರಿಳಿತಗಳಾಗಿತ್ತು. ನವೆಂಬರ್ 1ರಿಂದ ತೈಲ ಕಂಪನಿಗಳು ಪ್ರತಿ ಲೀಟರ್ ತೈಲಕ್ಕೆ 40 ಪೈಸೆ ಪರಿಹಾರವನ್ನು ನೀಡುವ ನಿರೀಕ್ಷೆಯಿತ್ತು. ಆದರೆ, ಕಂಪನಿಗಳು ಇದನ್ನು ಮಾಡಲಿಲ್ಲ. ದೇಶಿಯ ಮಾರುಕಟ್ಟೆಯಲ್ಲಿ ಸುಮಾರು 6 ತಿಂಗಳಿನಿಂದ ಪೆಟ್ರೋಲ್ -ಡೀಸೆಲ್ ಬೆಲೆ ಸ್ಥಿರವಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ ಲೀಟರ್‌ಗೆ 94.27 ರೂ. ಚೆನ್ನೈನಲ್ಲಿ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಕೊಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ನೊಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.58 ರೂ. ಮತ್ತು ಡೀಸೆಲ್ 89.75 ರೂ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ 89.76 ರೂ. ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ 93.72 ರೂ. ತಿರುವನಂತಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ 96.52 ರೂ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ 94.04 ರೂ. ಗುರುಗ್ರಾಮದಲ್ಲಿ 97.18 ರೂ. ಮತ್ತು ಡೀಸೆಲ್ ಲೀಟರ್‌ಗೆ 90.05 ರೂ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ 87.89 ರೂ. ಭುವನೇಶ್ವರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 103.19 ರೂ. ಮತ್ತು ಡೀಸೆಲ್ 94.76 ರೂ. ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.20 ರೂ. ಮತ್ತು ಡೀಸೆಲ್ 84.26 ರೂ. ಹೈದರಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ 97.82 ರೂ. ಆಗಿದೆ.

ಇದನ್ನೂ ಓದಿ: Petrol Price on November 30: ಕೆಲವು ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬದಲಾವಣೆ; ಹೊಸ ದರ ಹೀಗಿದೆ

ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಅಂತಾರಾಷ್ಟ್ರೀಯ ಮಾನದಂಡದ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. OMCಗಳಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸೇರಿವೆ.

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಕಳುಹಿಸಬಹುದು. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವ್ಯಾಟ್ ಮತ್ತು ಸರಕು ಸಾಗಣೆ ಶುಲ್ಕಗಳಂತಹ ಸ್ಥಳೀಯ ತೆರಿಗೆಗಳಲ್ಲಿನ ವ್ಯತ್ಯಾಸವು ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನವೀಕರಿಸಲಾಗುತ್ತದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾದರೆ, ದೇಶದ ತೈಲ ಮಾರುಕಟ್ಟೆ ಕಂಪನಿಗಳು ಅದನ್ನು 6 ಗಂಟೆಗೆ ನವೀಕರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ ಎಂದು ವಿವರಿಸಿ. ಇದೇ ಕಾರಣಕ್ಕೆ ಜನಸಾಮಾನ್ಯರಿಗೆ ಪೆಟ್ರೋಲ್, ಡೀಸೆಲ್ ಬೆಲೆ ದುಬಾರಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ