Petrol Price on January 19: ಇಂಧನದ ಗ್ರಾಹಕರಿಗೆ ಗುಡ್ ನ್ಯೂಸ್; ಬಜೆಟ್​ಗೂ ಮೊದಲೇ ಕೊಂಚ ಕುಸಿದ ಪೆಟ್ರೋಲ್, ಡೀಸೆಲ್ ಬೆಲೆ

Fuel Price Today: ಬಹಳ ದಿನಗಳ ನಂತರ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿರುವುದರಿಂದ ಜನಸಾಮಾನ್ಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Petrol Price on January 19: ಇಂಧನದ ಗ್ರಾಹಕರಿಗೆ ಗುಡ್ ನ್ಯೂಸ್; ಬಜೆಟ್​ಗೂ ಮೊದಲೇ ಕೊಂಚ ಕುಸಿದ ಪೆಟ್ರೋಲ್, ಡೀಸೆಲ್ ಬೆಲೆ
ಪೆಟ್ರೋಲ್ ಬೆಲೆImage Credit source: Zee News
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 19, 2023 | 8:07 AM

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ (Fuel Price) ಕುಸಿತದ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಕಂಡುಬರುತ್ತಿದೆ. ಈ ಹಿಂದೆ ಪ್ರತಿ ಬ್ಯಾರೆಲ್‌ಗೆ 100 ಡಾಲರ್‌ಗೆ ತಲುಪಿದ್ದ ಕಚ್ಚಾ ತೈಲ ಈಗ 80 ಡಾಲರ್‌ ಸಮೀಪದಲ್ಲಿದೆ. ಬಹಳ ದಿನಗಳ ನಂತರ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ (Petrol Price), ಡೀಸೆಲ್ ದರ (Diesel Price) ಇಳಿಕೆ ಮಾಡಿರುವುದರಿಂದ ಜನಸಾಮಾನ್ಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಬ್ರೆಂಟ್ ಕಚ್ಚಾ ತೈಲ ಇಂದು (ಗುರುವಾರ) ಬೆಳಿಗ್ಗೆ ಪ್ರತಿ ಬ್ಯಾರೆಲ್‌ಗೆ 0.60 ಡಾಲರ್ ಕಡಿಮೆಯಾಗಿ 84.38 ಡಾಲರ್​​ಗೆ ಇಳಿದಿದೆ. WTI ಕಚ್ಚಾ ತೈಲವು ಪ್ರತಿ ಬ್ಯಾರೆಲ್​ಗೆ 78.72 ಡಾಲರ್​ಗೆ ಕುಸಿದಿದೆ. ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 57 ಪೈಸೆ ಇಳಿಕೆಯಾಗಿ 105.96 ರೂ. ಆಗಿದೆ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 54 ಪೈಸೆ ಇಳಿಕೆಯಾಗಿ 92.49 ರೂ. ಆಗಿದೆ. ಇದಲ್ಲದೇ ಮಧ್ಯಪ್ರದೇಶದಲ್ಲಿ ಪೆಟ್ರೋಲ್ ದರ 30 ಪೈಸೆ ಇಳಿಕೆಯಾಗಿದ್ದು, ಲೀಟರ್‌ಗೆ 109.70 ರೂ. ಆಗಿದೆ. ಅದೇ ರೀತಿ, ಡೀಸೆಲ್ 28 ಪೈಸೆ ಕುಸಿತವಾಗಿ ಲೀಟರ್‌ಗೆ 94.89 ರೂ.ಗೆ ಮಾರಾಟವಾಗುತ್ತಿದೆ.

ಇದನ್ನೂ ಓದಿ: Petrol Price on January 5: 80 ಡಾಲರ್​​ಗಿಂತ ಕುಸಿತ ಕಂಡ ಕಚ್ಚಾ ತೈಲದ ಬೆಲೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಉತ್ತರ ಪ್ರದೇಶದಲ್ಲಿ ಡೀಸೆಲ್ 25 ಪೈಸೆ ಇಳಿಕೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್ 44 ಪೈಸೆ ಮತ್ತು ಡೀಸೆಲ್ 41 ಪೈಸೆ ಇಳಿಕೆಯಾಗಿದೆ. ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್-ಡೀಸೆಲ್ ಸ್ವಲ್ಪಮಟ್ಟಿಗೆ ದುಬಾರಿಯಾಗಿದೆ. ಚೆನ್ನೈನಲ್ಲೂ ಪೆಟ್ರೋಲ್-ಡೀಸೆಲ್ ಏರಿಕೆಯಾಗಿದೆ. ಈ ಹಿಂದೆ ಕಚ್ಚಾತೈಲದಲ್ಲಿ ಭಾರೀ ಏರಿಳಿತವಾಗಿದ್ದರೂ, ದೀರ್ಘಕಾಲದಿಂದ ತೈಲ ಬೆಲೆಯಲ್ಲಿ ಹೆಚ್ಚಿನ ಏರಿಕೆಯಾಗಿರಲಿಲ್ಲ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ:

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.72 ರೂ. ಮತ್ತು ಡೀಸೆಲ್ ಬೆಲೆ 89.62 ರೂ. ಆಗಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.31 ರೂ. ಮತ್ತು ಡೀಸೆಲ್ ಬೆಲೆ 94.27 ರೂ. ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.73 ರೂ. ಮತ್ತು ಡೀಸೆಲ್ 94.34 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ ಬೆಲೆ 92.76 ರೂ. ಆಗಿದೆ. ನೊಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.64 ರೂ. ಮತ್ತು ಡೀಸೆಲ್ ಬೆಲೆ 89.83 ರೂ. ಆಗಿದೆ. ಘಾಜಿಯಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.58 ರೂ. ಮತ್ತು ಡೀಸೆಲ್ ಬೆಲೆ 89.75 ರೂ. ಆಗಿದೆ. ಪಾಟ್ನಾದಲ್ಲಿ ಪೆಟ್ರೋಲ್ ಲೀಟರ್‌ಗೆ 108.12 ರೂ. ಮತ್ತು ಡೀಸೆಲ್ 94.86 ರೂ. ಆಗಿದೆ. ಗಂಗಾನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 113.20 ರೂ. ಮತ್ತು ಡೀಸೆಲ್ ಬೆಲೆ 97.98 ರೂ. ಆಗಿದೆ.

ಇದನ್ನೂ ಓದಿ: Petrol Price on January 18: ಲೀಟರ್​ಗೆ 113 ರೂ. ದಾಟಿದ ಪೆಟ್ರೋಲ್ ಬೆಲೆ; ನಿಮ್ಮ ನಗರದ ಡೀಸೆಲ್ ಬೆಲೆ ಹೀಗಿದೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗುತ್ತದೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಅನ್ವಯವಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ.

ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಡೀಸೆಲ್‌ನ ದೈನಂದಿನ ದರವನ್ನು ಸಹ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9223112222ಗೆ ಟೈಪ್ ಮಾಡುವ ಮೂಲಕ 9224992249ಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. HPCL ಗ್ರಾಹಕರು HPPrice ಮತ್ತು ಅವರ ಸಿಟಿ ಕೋಡ್ ಅನ್ನು 9222201122ಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ