Petrol Price on January 2: 86 ಡಾಲರ್ ದಾಟಿದ ಕಚ್ಚಾ ತೈಲದ ಬೆಲೆ; ಹಲವು ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ದುಬಾರಿ

Fuel Price Today: ಇಂದು ಪೆಟ್ರೋಲ್ 6 ಪೈಸೆಗಳಷ್ಟು ದುಬಾರಿಯಾಗಿದೆ. ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಇಂದು ಪೆಟ್ರೋಲ್ ಬೆಲೆ 11 ಪೈಸೆ ಏರಿಕೆಯಾಗಿದ್ದು, ಲೀಟರ್‌ಗೆ 96.44 ರೂ.ಗೆ ತಲುಪಿದೆ.

Petrol Price on January 2: 86 ಡಾಲರ್ ದಾಟಿದ ಕಚ್ಚಾ ತೈಲದ ಬೆಲೆ; ಹಲವು ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ದುಬಾರಿ
ಪೆಟ್ರೋಲ್ ಬೆಲೆ
Follow us
| Updated By: ಸುಷ್ಮಾ ಚಕ್ರೆ

Updated on: Jan 02, 2023 | 8:20 AM

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ನಿರಂತರ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಕಚ್ಚಾ ತೈಲದ ಬೆಲೆಗಳು ಸುಮಾರು 3 ಡಾಲರ್ ಜಿಗಿತ ಕಂಡಿವೆ. ಬ್ರೆಂಟ್ ಕಚ್ಚಾ ಬೆಲೆ ಪ್ರತಿ ಬ್ಯಾರೆಲ್‌ಗೆ 86 ಡಾಲರ್​​ಗೆ ತಲುಪಿದೆ. ಸೋಮವಾರ ಬೆಳಿಗ್ಗೆ ಸರ್ಕಾರಿ ತೈಲ ಕಂಪನಿಗಳು ಬಿಡುಗಡೆ ಮಾಡಿದ ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಯಲ್ಲಿ (Diesel Price Today) ಬದಲಾವಣೆಯಾಗಿದ್ದು, ಬಹುತೇಕ ನಗರಗಳಲ್ಲಿ ಇಂಧನದ ಬೆಲೆಯಲ್ಲಿ ಏರಿಕೆಯಾಗಿದೆ.

ಸರ್ಕಾರಿ ತೈಲ ಕಂಪನಿಗಳ ಪ್ರಕಾರ, ಇಂದು ಪೆಟ್ರೋಲ್ 6 ಪೈಸೆಗಳಷ್ಟು ದುಬಾರಿಯಾಗಿದೆ. ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಇಂದು ಪೆಟ್ರೋಲ್ ಬೆಲೆ 11 ಪೈಸೆ ಏರಿಕೆಯಾಗಿದ್ದು, ಲೀಟರ್‌ಗೆ 96.44 ರೂ.ಗೆ ತಲುಪಿದೆ. ಹಾಗೇ, ಡೀಸೆಲ್ ಲೀಟರ್‌ಗೆ 11 ಪೈಸೆ ಏರಿಕೆಯಾಗಿ 89.64 ರೂ.ಗೆ ತಲುಪಿದೆ. ಹರಿಯಾಣದ ರಾಜಧಾನಿ ಗುರುಗ್ರಾಮದಲ್ಲಿ ಇಂದು ಪೆಟ್ರೋಲ್ ಲೀಟರ್‌ಗೆ 5 ಪೈಸೆ ಏರಿಕೆಯಾಗಿ 96.89 ರೂ.ಗೆ ತಲುಪಿದ್ದು, ಡೀಸೆಲ್ ಬೆಲೆ ಲೀಟರ್‌ಗೆ 4 ಪೈಸೆ ಏರಿಕೆಯಾಗಿ 89.76 ರೂ.ಗೆ ತಲುಪಿದೆ.

ಭಾರತದ ಪ್ರಮುಖ ನಗರಗಳ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ:

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.65 ರೂ. ಮತ್ತು ಡೀಸೆಲ್ 89.82 ರೂ. ಆಗಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.31 ರೂ. ಮತ್ತು ಡೀಸೆಲ್ 94.27 ರೂ. ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ 94.24 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ ಬೆಲೆ 92.76 ರೂ. ಆಗಿದೆ. ನೊಯ್ಡಾದಲ್ಲಿ ಪ್ರತಿ ಲೀಟರ್​​ ಪೆಟ್ರೋಲ್ ಬೆಲೆ 96.65 ರೂ. ಮತ್ತು ಡೀಸೆಲ್ ಬೆಲೆ 89.82 ರೂ. ಆಗಿದೆ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.44 ರೂ. ಮತ್ತು ಡೀಸೆಲ್ ಬೆಲೆ 89.64 ರೂ. ಆಗಿದೆ. ಗುರುಗ್ರಾಮದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.85 ರೂ. ಮತ್ತು ಡೀಸೆಲ್ ಬೆಲೆ 89.76 ರೂ. ಆಗಿದೆ.

ಇದನ್ನೂ ಓದಿ: Petrol Price on December 27: ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

ಪ್ರತಿದಿನ ಬೆಳಿಗ್ಗೆ ಇಂಧನದ ಬೆಲೆಗಳು ಬದಲಾಗುತ್ತವೆ. ವಿದೇಶಿ ವಿನಿಮಯ ದರಗಳ ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ಬೆಲೆಯನ್ನು ಅವಲಂಬಿಸಿ ಪ್ರತಿದಿನ ಬದಲಾಗುತ್ತವೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರಗಳನ್ನು ನಿರ್ಧರಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪರಿಷ್ಕರಿಸಿದೆ.

ಕೇಂದ್ರೀಯ ಅಬಕಾರಿ ಮತ್ತು ರಾಜ್ಯ ತೆರಿಗೆಗಳು ಪೆಟ್ರೋಲ್ ಬೆಲೆಯಲ್ಲಿ ಶೇ.60 ರಷ್ಟಿದ್ದರೆ, ಡೀಸೆಲ್ ಬೆಲೆ ಶೇ.54 ರಷ್ಟಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕ 32.90 ರೂ., ಡೀಸೆಲ್ ಮೇಲೆ 31.80 ರೂ. ಪೆಟ್ರೋಲ್-ಡೀಸೆಲ್ ಬೆಲೆಗಳು ಸಾಮಾನ್ಯವಾಗಿ ಪ್ರತಿದಿನ ಬದಲಾಗುತ್ತವೆ, ಈ ಬೆಲೆಗಳನ್ನು ಮಾನದಂಡದ ಅಂತಾರಾಷ್ಟ್ರೀಯ ಕಚ್ಚಾ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳ ಆಧಾರದ ಮೇಲೆ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: Petrol Price on December 31: ಹೊಸ ವರ್ಷಕ್ಕೂ ಮುನ್ನ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ನವೀಕರಿಸಲಾಗುತ್ತದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನವೀಕರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಜನಸಾಮಾನ್ಯರಿಗೆ ಪೆಟ್ರೋಲ್, ಡೀಸೆಲ್ ಬೆಲೆ ದುಬಾರಿಯಾಗಿದೆ.

ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಡೀಸೆಲ್‌ನ ದೈನಂದಿನ ದರವನ್ನು ಸಹ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9223112222 ಗೆ ಟೈಪ್ ಮಾಡುವ ಮೂಲಕ 9224992249 ಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಆದರೆ, HPCL ಗ್ರಾಹಕರು HPPrice ಮತ್ತು ಅವರ ಸಿಟಿ ಕೋಡ್ ಅನ್ನು 9222201122 ಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್