AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on November 10: ಕಚ್ಚಾ ತೈಲದಲ್ಲಿ ನಿರಂತರ ಕುಸಿತ; ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

Fuel Price Today: 5 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿರುವುದು ಇದೇ ಮೊದಲು. ಮೇ 22ರಂದು ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಇದರಿಂದಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಯಿತು.

Petrol Price on November 10: ಕಚ್ಚಾ ತೈಲದಲ್ಲಿ ನಿರಂತರ ಕುಸಿತ; ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ
ಪೆಟ್ರೋಲ್ ಮತ್ತು ಡೀಸೆಲ್ ದರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 10, 2022 | 8:30 AM

Fuel Price on November 10: 3 ದಿನಗಳ ಹಿಂದೆ 100 ಡಾಲರ್ ಸಮೀಪ ತಲುಪಿದ್ದ ಕಚ್ಚಾ ತೈಲದ ಬೆಲೆ ಮತ್ತೆ ಇಳಿಕೆ ಕಾಣುತ್ತಿದೆ. ಆಗಸ್ಟ್ ತಿಂಗಳಲ್ಲಿ ಕಚ್ಚಾ ತೈಲದಲ್ಲಿ ದಾಖಲೆಯ ಕುಸಿತವಾಗಿದೆ. ಆದರೆ ಇದೆಲ್ಲದರ ಹೊರತಾಗಿಯೂ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ (Petrol Price) -ಡೀಸೆಲ್ ದರ (Diesel Price) ಒಂದೇ ರೀತಿಯಲ್ಲಿದೆ. ಇಂದು ಬೆಳಿಗ್ಗೆ ಡಬ್ಲ್ಯುಟಿಐ ಕಚ್ಚಾ ತೈಲವು ಸತತ ಮೂರನೇ ದಿನವೂ ಪ್ರತಿ ಬ್ಯಾರೆಲ್‌ಗೆ 85.89 ರೂ.ಗೆ ಕುಸಿದಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್​ಗೆ 92.65ಕ್ಕೆ ಇಳಿದಿದೆ.

ಹಿಂದಿನ ದಿನಗಳಲ್ಲಿ ಕಚ್ಚಾತೈಲದಲ್ಲಿ ದಾಖಲೆ ಕುಸಿತವಾಗಿತ್ತು. ಅದರ ನಂತರ ಒಪೆಕ್ ರಾಷ್ಟ್ರಗಳು ಕಚ್ಚಾ ತೈಲ ಉತ್ಪಾದನೆಯನ್ನು ಕಡಿತಗೊಳಿಸುವ ನಿರ್ಧಾರವನ್ನು ಕೈಗೊಂಡವು. ಅಲ್ಲಿಂದೀಚೆಗೆ ಕಚ್ಚಾ ತೈಲದಲ್ಲಿ ಏರಿಕೆ ಕಂಡುಬಂದಿದೆ. ಪೆಟ್ರೋಲ್, ಡೀಸೆಲ್ ದರದಲ್ಲಿ ರಿಲೀಫ್ ನೀಡುವ ನಿರೀಕ್ಷೆ ತೈಲ ಕಂಪನಿಗಳಿಂದ ಇತ್ತು. 5 ತಿಂಗಳಿಗೂ ಹೆಚ್ಚು ಕಾಲ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಪರಿಷ್ಕೃತ ದರಗಳ ಪ್ರಕಾರ, ಭಾರತದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಗಳು ಹೀಗಿವೆ…

ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 96.72 ಮತ್ತು 89.62 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್‌ಗೆ 106.31 ರೂ ಮತ್ತು ಡೀಸೆಲ್‌ಗೆ 94.27 ರೂ. ಚೆನ್ನೈ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಕೋಲ್ಕತ್ತಾ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ನೋಯ್ಡಾದಲ್ಲಿ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ ಲೀಟರ್‌ಗೆ 89.96 ರೂ. ಲಕ್ನೋದಲ್ಲಿ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ ಲೀಟರ್‌ಗೆ 89.76 ರೂ. ಜೈಪುರದಲ್ಲಿ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ ಲೀಟರ್‌ಗೆ 93.72 ರೂ. ತಿರುವನಂತಪುರದಲ್ಲಿ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ ಲೀಟರ್‌ಗೆ 96.52 ರೂ. ಪಾಟ್ನಾದಲ್ಲಿ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ ಲೀಟರ್‌ಗೆ 94.04 ರೂ. ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ ಲೀಟರ್‌ಗೆ 87.89 ರೂ. ಹೈದರಾಬಾದ್‌ನಲ್ಲಿ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ ಲೀಟರ್‌ಗೆ 97.82 ರೂ. ಆಗಿದೆ.

ಇದನ್ನೂ ಓದಿ: Petrol Price on November 4: ನಿಮ್ಮ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕುಸಿತವಾಯ್ತಾ?; ಇಂದಿನ ಇಂಧನದ ಬೆಲೆ ಎಷ್ಟು?

ಆಗಸ್ಟ್-ಸೆಪ್ಟೆಂಬರ್ ತಿಂಗಳಿನಲ್ಲಿ ಕಚ್ಚಾ ತೈಲ ದಾಖಲೆ ಮಟ್ಟಕ್ಕೆ ಕುಸಿದಿತ್ತು. ಆದರೆ ಆಗ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ. ಮೇ 22ರಂದು ತೈಲದ ಬೆಲೆಯಲ್ಲಿ ಕೊನೆಯ ಬದಲಾವಣೆಯಾಗಿತ್ತು. 5 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿರುವುದು ಇದೇ ಮೊದಲು. ಮೇ 22ರಂದು ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಇದರಿಂದಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಯಿತು. ಇದರ ನಂತರ, ಮಹಾರಾಷ್ಟ್ರದಲ್ಲಿ ತೈಲದ ಮೇಲಿನ ವ್ಯಾಟ್ ಅನ್ನು ಕಡಿಮೆಗೊಳಿಸಲಾಯಿತು. ಇದರಿಂದಾಗಿ ಇಂಧನ ಬೆಲೆ ಕಡಿಮೆಯಾಯಿತು.

ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಅಂತಾರಾಷ್ಟ್ರೀಯ ಮಾನದಂಡದ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. OMC ಗಳಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸೇರಿವೆ.

ಕರ್ನಾಟಕದ ಪ್ರಮುಖ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ.

ಬಾಗಲಕೋಟೆ – ರೂ. 102.63, ಬೆಂಗಳೂರು – ರೂ. 101.94, ಬೆಂಗಳೂರು ಗ್ರಾಮಾಂತರ – ರೂ. 102.23, ಬೆಳಗಾವಿ – ರೂ. 101.91, ಬಳ್ಳಾರಿ – ರೂ. 103.20, ಬೀದರ್ – ರೂ. 102.58, ವಿಜಯಪುರ – ರೂ. 102.02, ಚಾಮರಾಜನಗರ – ರೂ. 102.13, ಚಿಕ್ಕಬಳ್ಳಾಪುರ – ರೂ. 102.39, ಚಿಕ್ಕಮಗಳೂರು – ರೂ. 103.06, ಚಿತ್ರದುರ್ಗ – ರೂ. 104.03, ದಕ್ಷಿಣ ಕನ್ನಡ – ರೂ. 101.77, ದಾವಣಗೆರೆ – ರೂ. 103.57, ಧಾರವಾಡ – ರೂ. 101.71, ಹಾಸನ – ರೂ. 101.88, ಹಾವೇರಿ – ರೂ. 102.89, ಕೊಡಗು – ರೂ. 103.32, ಕೋಲಾರ – ರೂ. 101.87, ಮಂಡ್ಯ – ರೂ. 101.94, ಮೈಸೂರು – ರೂ. 101.68, ರಾಯಚೂರು – ರೂ. 102.71, ರಾಮನಗರ – ರೂ. 102.39, ಶಿವಮೊಗ್ಗ – ರೂ. 103.78, ತುಮಕೂರು – ರೂ. 102.45, ಉಡುಪಿ – ರೂ. 101.92, ಉತ್ತರ ಕನ್ನಡ – ರೂ. 102.01 ಆಗಿದೆ.

ಇದನ್ನೂ ಓದಿ: Petrol Price on November 9: ಬೆಂಗಳೂರು, ಚೆನ್ನೈ ಸೇರಿ ಭಾರತದ ಪ್ರಮುಖ ನಗರಗಳ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

ಕರ್ನಾಟಕದ ಪ್ರಮುಖ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರ ಹೀಗಿದೆ.

ಬಾಗಲಕೋಟೆ – ರೂ. 88.54, ಬೆಂಗಳೂರು – ರೂ. 87.89, ಬೆಂಗಳೂರು ಗ್ರಾಮಾಂತರ – ರೂ. 88.15, ಬೆಳಗಾವಿ – ರೂ. 87.90, ಬಳ್ಳಾರಿ – ರೂ. 88.77, ಬೀದರ್ – ರೂ. 88.50, ವಿಜಯಪುರ – ರೂ. 87.99, ಚಿಕ್ಕಬಳ್ಳಾಪುರ – ರೂ. 88.55, ಚಿಕ್ಕಮಗಳೂರು – ರೂ. 88.48, ಚಿತ್ರದುರ್ಗ – ರೂ. 88.79, ದಕ್ಷಿಣ ಕನ್ನಡ – ರೂ. 87.70, ದಾವಣಗೆರೆ – ರೂ. 89.45, ಧಾರವಾಡ – ರೂ. 87.70, ಹಾಸನ – ರೂ. 87.89, ಹಾವೇರಿ – ರೂ. 88.77, ಕೊಡಗು – ರೂ. 88.98, ಕೋಲಾರ – ರೂ. 87.83, ಮಂಡ್ಯ – ರೂ. 88.10, ಮೈಸೂರು – ರೂ. 87.49, ರಾಮನಗರ – ರೂ. 88.29, ಶಿವಮೊಗ್ಗ – ರೂ. 89.45, ತುಮಕೂರು – ರೂ. 88.36, ಉಡುಪಿ – ರೂ. 87.84, ಉತ್ತರ ಕನ್ನಡ – ರೂ. 87.98 ಆಗಿದೆ.

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಕಳುಹಿಸಬಹುದು. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವ್ಯಾಟ್ ಮತ್ತು ಸರಕು ಸಾಗಣೆ ಶುಲ್ಕಗಳಂತಹ ಸ್ಥಳೀಯ ತೆರಿಗೆಗಳಲ್ಲಿನ ವ್ಯತ್ಯಾಸವು ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?