AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on November 11: ನೊಯ್ಡಾದಲ್ಲಿ ಪೆಟ್ರೋಲ್ ಬೆಲೆ ಕುಸಿತ, ಕೆಲವೆಡೆ ದುಬಾರಿ; ಕರ್ನಾಟಕದ ಇಂಧನದ ದರ ಹೀಗಿದೆ

ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ (ನೋಯ್ಡಾ) ಇಂದು ಬೆಳಿಗ್ಗೆ ಪೆಟ್ರೋಲ್ ಬೆಲೆ ಲೀಟರ್‌ಗೆ 29 ಪೈಸೆ ಇಳಿಕೆಯಾಗಿ 96.65 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 29 ಪೈಸೆ ಇಳಿಕೆಯಾಗಿ 89.82 ರೂ.ಗೆ ತಲುಪಿದೆ.

Petrol Price on November 11: ನೊಯ್ಡಾದಲ್ಲಿ ಪೆಟ್ರೋಲ್ ಬೆಲೆ ಕುಸಿತ, ಕೆಲವೆಡೆ ದುಬಾರಿ; ಕರ್ನಾಟಕದ ಇಂಧನದ ದರ ಹೀಗಿದೆ
ಪೆಟ್ರೋಲ್, ಡೀಸೆಲ್ ಬೆಲೆಗಳು
TV9 Web
| Edited By: |

Updated on: Nov 11, 2022 | 9:25 AM

Share

Fuel Price on November 11: ಜಾಗತಿಕ ಮಾರುಕಟ್ಟೆಯಲ್ಲಿ ಕಳೆದ 24 ಗಂಟೆಗಳಲ್ಲಿ ಕಚ್ಚಾ ತೈಲದ ಬೆಲೆ ಕೊಂಚ ಏರಿಕೆ ಕಂಡಿದೆ. ಇಂದು ಬೆಳಿಗ್ಗೆ ಸರ್ಕಾರಿ ತೈಲ ಕಂಪನಿಗಳು ಬಿಡುಗಡೆ ಮಾಡಿದ ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಯಲ್ಲಿ (Diesel Price) ಬದಲಾವಣೆಯೂ ಗೋಚರಿಸುತ್ತದೆ. ಇಂದು ನೋಯ್ಡಾ-ಗ್ರೇಟರ್ ನೋಯ್ಡಾದಂತಹ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಬೆಲೆ ಕಡಿಮೆಯಾಗಿದೆ. ಆದರೆ, ಗಾಜಿಯಾಬಾದ್‌ನಲ್ಲಿ ಪೆಟ್ರೋಲ್ ಬೆಲೆ ದುಬಾರಿಯಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ. ಇಂದು ಕೂಡ ಸರ್ಕಾರಿ ತೈಲ ಕಂಪನಿಗಳು ದೆಹಲಿ, ಮುಂಬೈ ಹೀಗೆ ದೇಶದ ನಾಲ್ಕೂ ಮಹಾನಗರಗಳಲ್ಲಿ ತೈಲ ಬೆಲೆಯನ್ನು ಸ್ಥಿರವಾಗಿರಿಸಿಕೊಂಡಿವೆ.

ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ (ನೋಯ್ಡಾ) ಇಂದು ಬೆಳಿಗ್ಗೆ ಪೆಟ್ರೋಲ್ ಬೆಲೆ ಲೀಟರ್‌ಗೆ 29 ಪೈಸೆ ಇಳಿಕೆಯಾಗಿ 96.65 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 29 ಪೈಸೆ ಇಳಿಕೆಯಾಗಿ 89.82 ರೂ.ಗೆ ತಲುಪಿದೆ. ಗಾಜಿಯಾಬಾದ್‌ನಲ್ಲಿ ಪೆಟ್ರೋಲ್ ಬೆಲೆ 18 ಪೈಸೆಯಷ್ಟು ಹೆಚ್ಚಾಗಿ, ಲೀಟರ್‌ಗೆ 96.58 ರೂ.ಗಳಿಗೆ ತಲುಪಿದೆ. ಆದರೆ ಡೀಸೆಲ್ ಲೀಟರ್‌ಗೆ 17 ಪೈಸೆಯಿಂದ 89.75 ರೂ.ಗಳಿಗೆ ಮಾರಾಟವಾಗುತ್ತಿದೆ. ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಇಂದು ಪೆಟ್ರೋಲ್ ಬೆಲೆ 13 ಪೈಸೆಯಷ್ಟು ಏರಿಕೆಯಾಗಿದ್ದು, ಲೀಟರ್‌ಗೆ 96.44 ರೂ.ಗೆ ತಲುಪಿದೆ. ಡೀಸೆಲ್ ಲೀಟರ್ ಗೆ 12 ಪೈಸೆ ಏರಿಕೆಯಾಗಿ 89.64 ರೂ. ಆಗಿದೆ.

ಹಿಂದಿನ ದಿನಗಳಲ್ಲಿ ಕಚ್ಚಾತೈಲದಲ್ಲಿ ದಾಖಲೆ ಕುಸಿತವಾಗಿತ್ತು. ಅದರ ನಂತರ ಒಪೆಕ್ ರಾಷ್ಟ್ರಗಳು ಕಚ್ಚಾ ತೈಲ ಉತ್ಪಾದನೆಯನ್ನು ಕಡಿತಗೊಳಿಸುವ ನಿರ್ಧಾರವನ್ನು ಕೈಗೊಂಡವು. ಅಲ್ಲಿಂದೀಚೆಗೆ ಕಚ್ಚಾ ತೈಲದಲ್ಲಿ ಏರಿಕೆ ಕಂಡುಬಂದಿದೆ. ಪೆಟ್ರೋಲ್, ಡೀಸೆಲ್ ದರದಲ್ಲಿ ರಿಲೀಫ್ ನೀಡುವ ನಿರೀಕ್ಷೆ ತೈಲ ಕಂಪನಿಗಳಿಂದ ಇತ್ತು. 5 ತಿಂಗಳಿಗೂ ಹೆಚ್ಚು ಕಾಲ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಪರಿಷ್ಕೃತ ದರಗಳ ಪ್ರಕಾರ, ಭಾರತದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಗಳು ಹೀಗಿವೆ…

ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 96.65 ಮತ್ತು 89.82 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್‌ಗೆ 106.31 ರೂ ಮತ್ತು ಡೀಸೆಲ್‌ಗೆ 94.27 ರೂ. ಚೆನ್ನೈನಲ್ಲಿ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಕೋಲ್ಕತ್ತಾ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ನೋಯ್ಡಾದಲ್ಲಿ ಪೆಟ್ರೋಲ್ 96.65 ರೂ. ಮತ್ತು ಡೀಸೆಲ್ ಲೀಟರ್‌ಗೆ 89.82 ರೂ. ಲಕ್ನೋದಲ್ಲಿ ಪೆಟ್ರೋಲ್ 96.44 ರೂ. ಮತ್ತು ಡೀಸೆಲ್ ಲೀಟರ್‌ಗೆ 89.64 ರೂ. ಜೈಪುರದಲ್ಲಿ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ ಲೀಟರ್‌ಗೆ 93.72 ರೂ. ತಿರುವನಂತಪುರದಲ್ಲಿ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ ಲೀಟರ್‌ಗೆ 96.52 ರೂ. ಪಾಟ್ನಾದಲ್ಲಿ ಪೆಟ್ರೋಲ್ 108.12 ರೂ. ಮತ್ತು ಡೀಸೆಲ್ ಲೀಟರ್‌ಗೆ 94.86 ರೂ. ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ ಲೀಟರ್‌ಗೆ 87.89 ರೂ. ಹೈದರಾಬಾದ್‌ನಲ್ಲಿ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ ಲೀಟರ್‌ಗೆ 97.82 ರೂ. ಆಗಿದೆ.

ಇದನ್ನೂ ಓದಿ: Petrol Price on November 9: ಬೆಂಗಳೂರು, ಚೆನ್ನೈ ಸೇರಿ ಭಾರತದ ಪ್ರಮುಖ ನಗರಗಳ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

ಆಗಸ್ಟ್-ಸೆಪ್ಟೆಂಬರ್ ತಿಂಗಳಿನಲ್ಲಿ ಕಚ್ಚಾ ತೈಲ ದಾಖಲೆ ಮಟ್ಟಕ್ಕೆ ಕುಸಿದಿತ್ತು. ಆದರೆ ಆಗ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ. ಮೇ 22ರಂದು ತೈಲದ ಬೆಲೆಯಲ್ಲಿ ಕೊನೆಯ ಬದಲಾವಣೆಯಾಗಿತ್ತು. 5 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿರುವುದು ಇದೇ ಮೊದಲು. ಮೇ 22ರಂದು ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಇದರಿಂದಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಯಿತು. ಇದರ ನಂತರ, ಮಹಾರಾಷ್ಟ್ರದಲ್ಲಿ ತೈಲದ ಮೇಲಿನ ವ್ಯಾಟ್ ಅನ್ನು ಕಡಿಮೆಗೊಳಿಸಲಾಯಿತು. ಇದರಿಂದಾಗಿ ಇಂಧನ ಬೆಲೆ ಕಡಿಮೆಯಾಯಿತು.

ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಅಂತಾರಾಷ್ಟ್ರೀಯ ಮಾನದಂಡದ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. OMC ಗಳಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸೇರಿವೆ.

ಕರ್ನಾಟಕದ ಪ್ರಮುಖ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ.

ಬಾಗಲಕೋಟೆ – ರೂ. 102.68, ಬೆಂಗಳೂರು – ರೂ. 101.94, ಬೆಂಗಳೂರು ಗ್ರಾಮಾಂತರ – ರೂ. 102.01, ಬೆಳಗಾವಿ – ರೂ. 102.13, ಬಳ್ಳಾರಿ – ರೂ. 103.78, ಬೀದರ್ – ರೂ. 102.28, ವಿಜಯಪುರ – ರೂ. 102.12, ಚಾಮರಾಜನಗರ – ರೂ. 102.10, ಚಿಕ್ಕಬಳ್ಳಾಪುರ – ರೂ. 101.94, ಚಿಕ್ಕಮಗಳೂರು – ರೂ. 103.27, ಚಿತ್ರದುರ್ಗ – ರೂ. 104.64, ದಕ್ಷಿಣ ಕನ್ನಡ – ರೂ. 101.13, ದಾವಣಗೆರೆ – ರೂ. 103.67, ಧಾರವಾಡ – ರೂ. 101.71, ಹಾಸನ – ರೂ. 102.34, ಹಾವೇರಿ – ರೂ. 102.85, ಕೊಡಗು – ರೂ. 103.11, ಕೋಲಾರ – ರೂ. 101.81, ಮಂಡ್ಯ – ರೂ. 101.61, ಮೈಸೂರು – ರೂ. 101.68, ರಾಯಚೂರು – ರೂ. 101.84, ರಾಮನಗರ – ರೂ. 102.40, ಶಿವಮೊಗ್ಗ – ರೂ. 103.43, ತುಮಕೂರು – ರೂ. 102.45, ಉಡುಪಿ – ರೂ. 101.44, ಉತ್ತರ ಕನ್ನಡ – ರೂ. 102.49 ಆಗಿದೆ.

ಇದನ್ನೂ ಓದಿ: Petrol Price on November 5: ಬೆಂಗಳೂರು, ಶಿವಮೊಗ್ಗ ಸೇರಿದಂತೆ ನಿಮ್ಮ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು?

ಕರ್ನಾಟಕದ ಪ್ರಮುಖ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರ ಹೀಗಿದೆ.

ಬಾಗಲಕೋಟೆ – ರೂ. 88.59, ಬೆಂಗಳೂರು – ರೂ. 87.89, ಬೆಂಗಳೂರು ಗ್ರಾಮಾಂತರ – ರೂ. 87.95, ಬೆಳಗಾವಿ – ರೂ. 87.09, ಬಳ್ಳಾರಿ – ರೂ. 89.58, ಬೀದರ್ – ರೂ. 88.23, ವಿಜಯಪುರ – ರೂ. 88.07, ಚಿಕ್ಕಬಳ್ಳಾಪುರ – ರೂ. 87.89, ಚಿಕ್ಕಮಗಳೂರು – ರೂ. 88.89, ಚಿತ್ರದುರ್ಗ – ರೂ. 90.15, ದಕ್ಷಿಣ ಕನ್ನಡ – ರೂ. 87.13, ದಾವಣಗೆರೆ – ರೂ. 89.29, ಧಾರವಾಡ – ರೂ. 87.71, ಹಾಸನ – ರೂ. 88.09, ಹಾವೇರಿ – ರೂ. 88.74, ಕೊಡಗು – ರೂ. 88.75, ಕೋಲಾರ – ರೂ. 87.77, ಮಂಡ್ಯ – ರೂ. 87.59, ಮೈಸೂರು – ರೂ. 87.49, ರಾಮನಗರ – ರೂ. 88.29, ಶಿವಮೊಗ್ಗ – ರೂ. 89.45, ತುಮಕೂರು – ರೂ. 88.36, ಉಡುಪಿ – ರೂ. 87.84, ಉತ್ತರ ಕನ್ನಡ – ರೂ. 87.98 ಆಗಿದೆ.

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಕಳುಹಿಸಬಹುದು. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವ್ಯಾಟ್ ಮತ್ತು ಸರಕು ಸಾಗಣೆ ಶುಲ್ಕಗಳಂತಹ ಸ್ಥಳೀಯ ತೆರಿಗೆಗಳಲ್ಲಿನ ವ್ಯತ್ಯಾಸವು ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು