Petrol Price on November 17: ಕಚ್ಚಾ ತೈಲದ ಬೆಲೆ ಮತ್ತೆ ಇಳಿಕೆ; ಈ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕುಸಿತ

Fuel Price Today: ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಉಂಟಾದ ದಾಖಲೆಯ ಕುಸಿತದ ನಂತರ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದೆ. ಕಚ್ಚಾ ತೈಲವು ಇಂದು ಬೆಳಿಗ್ಗೆ ಪ್ರತಿ ಬ್ಯಾರೆಲ್‌ಗೆ 85.29 ರೂ. ಆಗಿದೆ. ಬ್ರೆಂಟ್ ಕಚ್ಚಾ ಪ್ರತಿ ಬ್ಯಾರೆಲ್​ಗೆ 92.86 ರೂ. ಆಗಿದೆ.

Petrol Price on November 17: ಕಚ್ಚಾ ತೈಲದ ಬೆಲೆ ಮತ್ತೆ ಇಳಿಕೆ; ಈ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕುಸಿತ
ಪೆಟ್ರೋಲ್, ಡೀಸೆಲ್ ಬೆಲೆಗಳು
Follow us
| Updated By: ಸುಷ್ಮಾ ಚಕ್ರೆ

Updated on:Nov 17, 2022 | 11:25 AM

Fuel Price on November 17: ಇತ್ತೀಚೆಗೆ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 100 ಡಾಲರ್‌ಗೆ ಏರಿಕೆಯಾಗಿತ್ತು. ಆದರೆ, ಇದೀಗ ಮತ್ತೆ ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆ ಕಾಣುತ್ತಿದೆ. ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಉಂಟಾದ ದಾಖಲೆಯ ಕುಸಿತದ ನಂತರ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದೆ. ಡಬ್ಲ್ಯುಟಿಐ ಕಚ್ಚಾ ತೈಲವು ಇಂದು ಬೆಳಿಗ್ಗೆ ಪ್ರತಿ ಬ್ಯಾರೆಲ್‌ಗೆ 85.29 ಡಾಲರ್. ಆಗಿದೆ. ಬ್ರೆಂಟ್ ಕಚ್ಚಾ ಪ್ರತಿ ಬ್ಯಾರೆಲ್​ಗೆ 92.86 ಡಾಲರ್. ಆಗಿದೆ. ಭಾರತದ ಪ್ರಮುಖ ನಗರಗಳಲ್ಲಿ 6 ತಿಂಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರವಾಗಿದೆ. OPEC ರಾಷ್ಟ್ರಗಳು ಕಚ್ಚಾ ಉತ್ಪಾದನೆಯಲ್ಲಿ ಕಡಿತದ ಘೋಷಣೆಯ ನಂತರ ಕಚ್ಚಾ ತೈಲದಲ್ಲಿ ಏರಿಳಿತಗಳಾಗಿವೆ. ನವೆಂಬರ್ 1ರಿಂದ ತೈಲ ಕಂಪನಿಗಳು ಪ್ರತಿ ಲೀಟರ್ ತೈಲಕ್ಕೆ 40 ಪೈಸೆ ಪರಿಹಾರವನ್ನು ನೀಡುವ ನಿರೀಕ್ಷೆಯಿತ್ತು. ಆದರೆ ಕಂಪನಿಗಳು ಇದನ್ನು ಮಾಡಲಿಲ್ಲ. ದೇಶಿಯ ಮಾರುಕಟ್ಟೆಯಲ್ಲಿ ಸುಮಾರು 6 ತಿಂಗಳಿನಿಂದ ಪೆಟ್ರೋಲ್ (Petrol Price) -ಡೀಸೆಲ್ ಬೆಲೆ (Diesel Price) ಸ್ಥಿರವಾಗಿದೆ. ಇದು ಜನಸಾಮಾನ್ಯರಿಗೆ ನೆಮ್ಮದಿ ತಂದಿದೆ.

ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್‌ಗೆ 6 ರೂ. ಕಡಿತಗೊಳಿಸಿದ್ದರಿಂದ ಮೇ ತಿಂಗಳಲ್ಲಿ ಇಂಧನದ ಬೆಲೆಯಲ್ಲಿ ಕೊಂಚ ಏರಿಳಿತ ಕಂಡುಬಂದಿತ್ತು. ಪರಿಷ್ಕೃತ ದರಗಳ ಪ್ರಕಾರ, ಭಾರತದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಗಳು ಹೀಗಿವೆ…

ಇದನ್ನೂ ಓದಿ: Petrol Price on November 14: ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

ದೆಹಲಿಯಲ್ಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್ 111.35 ರೂ. ಮತ್ತು ಡೀಸೆಲ್ ಲೀಟರ್‌ಗೆ 97.28 ರೂ. ಚೆನ್ನೈನಲ್ಲಿ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ 89.96 ರೂ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ 89.76 ರೂ. ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ 93.72 ರೂ. ತಿರುವನಂತಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ 96.52 ರೂ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ 94.04 ರೂ. ಗುರುಗ್ರಾಮದಲ್ಲಿ 97.18 ರೂ. ಮತ್ತು ಡೀಸೆಲ್ ಲೀಟರ್‌ಗೆ 90.05 ರೂ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ 87.89 ರೂ. ಭುವನೇಶ್ವರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 103.19 ರೂ. ಮತ್ತು ಡೀಸೆಲ್ 94.76 ರೂ. ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.20 ರೂ. ಮತ್ತು ಡೀಸೆಲ್ 84.26 ರೂ. ಹೈದರಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ 97.82 ರೂ. ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಳೆದ 24 ಗಂಟೆಗಳಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು ಒಂದು ಡಾಲರ್‌ಗಳಷ್ಟು ಕುಸಿದಿದೆ. ಮೇ 22ರಂದು ತೈಲದ ಬೆಲೆಯಲ್ಲಿ ಕೊನೆಯ ಬದಲಾವಣೆಯಾಗಿತ್ತು. 5 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿರುವುದು ಇದೇ ಮೊದಲು. ಮೇ 22ರಂದು ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಇದರಿಂದಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಯಿತು. ಇದರ ನಂತರ, ಮಹಾರಾಷ್ಟ್ರದಲ್ಲಿ ತೈಲದ ಮೇಲಿನ ವ್ಯಾಟ್ ಅನ್ನು ಕಡಿಮೆಗೊಳಿಸಲಾಯಿತು. ಇದರಿಂದಾಗಿ ಇಂಧನ ಬೆಲೆ ಕಡಿಮೆಯಾಯಿತು.

ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಅಂತಾರಾಷ್ಟ್ರೀಯ ಮಾನದಂಡದ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. OMC ಗಳಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸೇರಿವೆ.

ಇದನ್ನೂ ಓದಿ: Petrol Price on November 16: ಪೆಟ್ರೋಲ್, ಡೀಸೆಲ್ ಖರೀದಿಸುವವರೇ ಗಮನಿಸಿ; ಇಂದಿನ ಇಂಧನದ ಬೆಲೆ ಹೀಗಿದೆ

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಕಳುಹಿಸಬಹುದು. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವ್ಯಾಟ್ ಮತ್ತು ಸರಕು ಸಾಗಣೆ ಶುಲ್ಕಗಳಂತಹ ಸ್ಥಳೀಯ ತೆರಿಗೆಗಳಲ್ಲಿನ ವ್ಯತ್ಯಾಸವು ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:59 am, Thu, 17 November 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ