Petrol Price on November 18: ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಕುಸಿತ; ಈ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ದುಬಾರಿ

Fuel Price Today: ಇಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗಿದೆ. ಆದರೆ, ಉಳಿದ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಬೆಲೆ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Petrol Price on November 18: ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಕುಸಿತ; ಈ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ದುಬಾರಿ
ಪೆಟ್ರೋಲ್ ದರ
Follow us
TV9 Web
| Updated By: Digi Tech Desk

Updated on:Nov 18, 2022 | 9:14 AM

Fuel Price on November 18: ಜಾಗತಿಕ ಮಾರುಕಟ್ಟೆಯಲ್ಲಿ ಕಳೆದ 24 ಗಂಟೆಗಳಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು 3 ಡಾಲರ್‌ಗಳಷ್ಟು ಕುಸಿದಿದೆ. ಹೀಗಾಗಿ, ಇಂದು (ಶುಕ್ರವಾರ) ಬೆಳಗ್ಗೆ ಸರ್ಕಾರಿ ತೈಲ ಕಂಪನಿಗಳು ಬಿಡುಗಡೆ ಮಾಡಿದ ಪೆಟ್ರೋಲ್ (Petrol Price) ಮತ್ತು ಡೀಸೆಲ್ (Diesel Price) ಚಿಲ್ಲರೆ ಬೆಲೆಯಲ್ಲಿ ಬದಲಾವಣೆ ಕಂಡುಬರುತ್ತಿದೆ. ಇಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗಿದೆ. ಆದರೆ, ಉಳಿದ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಬೆಲೆ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಸರ್ಕಾರಿ ತೈಲ ಕಂಪನಿಗಳು ಬಿಡುಗಡೆ ಮಾಡಿದ ದರದ ಪ್ರಕಾರ, ಇಂದು ಬೆಳಿಗ್ಗೆ ನೋಯ್ಡಾದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.60 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.77 ರೂ. ಆಗಿದೆ. ಘಜಿಯಾಬಾದ್‌ನಲ್ಲೂ ಪೆಟ್ರೋಲ್ ಲೀಟರ್‌ಗೆ 96.26 ರೂ. ಮತ್ತು ಡೀಸೆಲ್ ಲೀಟರ್‌ಗೆ 89.45 ರೂ.ಗೆ ಮಾರಾಟವಾಗುತ್ತಿದೆ. ಆದರೆ, ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಇಂದು ಪೆಟ್ರೋಲ್ ದರ ಲೀಟರ್‌ಗೆ 50 ಪೈಸೆ ಏರಿಕೆಯಾಗಿ 108.12 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 47 ಪೈಸೆ ಏರಿಕೆಯಾಗಿ 94.86 ರೂ.ಗೆ ತಲುಪಿದೆ.

ಭಾರತದ ಪ್ರಮುಖ ನಗರಗಳಲ್ಲಿ 6 ತಿಂಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರವಾಗಿದೆ. OPEC ರಾಷ್ಟ್ರಗಳು ಕಚ್ಚಾ ಉತ್ಪಾದನೆಯಲ್ಲಿ ಕಡಿತದ ಘೋಷಣೆಯ ನಂತರ ಕಚ್ಚಾ ತೈಲದಲ್ಲಿ ಏರಿಳಿತಗಳಾಗಿವೆ. ನವೆಂಬರ್ 1ರಿಂದ ತೈಲ ಕಂಪನಿಗಳು ಪ್ರತಿ ಲೀಟರ್ ತೈಲಕ್ಕೆ 40 ಪೈಸೆ ಪರಿಹಾರವನ್ನು ನೀಡುವ ನಿರೀಕ್ಷೆಯಿತ್ತು. ಆದರೆ ಕಂಪನಿಗಳು ಇದನ್ನು ಮಾಡಲಿಲ್ಲ. ದೇಶಿಯ ಮಾರುಕಟ್ಟೆಯಲ್ಲಿ ಸುಮಾರು 6 ತಿಂಗಳಿನಿಂದ ಪೆಟ್ರೋಲ್ -ಡೀಸೆಲ್ ಬೆಲೆ ಸ್ಥಿರವಾಗಿದೆ. ಇದು ಜನಸಾಮಾನ್ಯರಿಗೆ ನೆಮ್ಮದಿ ತಂದಿದೆ.

ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್‌ಗೆ 6 ರೂ. ಕಡಿತಗೊಳಿಸಿದ್ದರಿಂದ ಮೇ ತಿಂಗಳಲ್ಲಿ ಇಂಧನದ ಬೆಲೆಯಲ್ಲಿ ಕೊಂಚ ಏರಿಳಿತ ಕಂಡುಬಂದಿತ್ತು. ಪರಿಷ್ಕೃತ ದರಗಳ ಪ್ರಕಾರ, ಭಾರತದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಗಳು ಹೀಗಿವೆ…

ಇದನ್ನೂ ಓದಿ: Petrol Price on November 16: ಪೆಟ್ರೋಲ್, ಡೀಸೆಲ್ ಖರೀದಿಸುವವರೇ ಗಮನಿಸಿ; ಇಂದಿನ ಇಂಧನದ ಬೆಲೆ ಹೀಗಿದೆ

ದೆಹಲಿಯಲ್ಲಿ ಪೆಟ್ರೋಲ್ 96.65 ರೂ. ಮತ್ತು ಡೀಸೆಲ್ ಲೀಟರ್‌ಗೆ 89.82 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ ಲೀಟರ್‌ಗೆ 94.27 ರೂ. ಚೆನ್ನೈನಲ್ಲಿ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.60 ರೂ. ಮತ್ತು ಡೀಸೆಲ್ 89.77 ರೂ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ 89.76 ರೂ. ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ 93.72 ರೂ. ತಿರುವನಂತಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ 96.52 ರೂ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ 94.04 ರೂ. ಗುರುಗ್ರಾಮದಲ್ಲಿ 97.18 ರೂ. ಮತ್ತು ಡೀಸೆಲ್ ಲೀಟರ್‌ಗೆ 90.05 ರೂ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ 87.89 ರೂ. ಭುವನೇಶ್ವರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 103.19 ರೂ. ಮತ್ತು ಡೀಸೆಲ್ 94.76 ರೂ. ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.20 ರೂ. ಮತ್ತು ಡೀಸೆಲ್ 84.26 ರೂ. ಹೈದರಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ 97.82 ರೂ. ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಳೆದ 24 ಗಂಟೆಗಳಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು ಒಂದು ಡಾಲರ್‌ಗಳಷ್ಟು ಕುಸಿದಿದೆ. ಮೇ 22ರಂದು ತೈಲದ ಬೆಲೆಯಲ್ಲಿ ಕೊನೆಯ ಬದಲಾವಣೆಯಾಗಿತ್ತು. 5 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿರುವುದು ಇದೇ ಮೊದಲು. ಮೇ 22ರಂದು ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಇದರಿಂದಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಯಿತು. ಇದರ ನಂತರ, ಮಹಾರಾಷ್ಟ್ರದಲ್ಲಿ ತೈಲದ ಮೇಲಿನ ವ್ಯಾಟ್ ಅನ್ನು ಕಡಿಮೆಗೊಳಿಸಲಾಯಿತು. ಇದರಿಂದಾಗಿ ಇಂಧನ ಬೆಲೆ ಕಡಿಮೆಯಾಯಿತು.

ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಅಂತಾರಾಷ್ಟ್ರೀಯ ಮಾನದಂಡದ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. OMC ಗಳಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸೇರಿವೆ.

ಇದನ್ನೂ ಓದಿ: Petrol Price on November 15: ಚಿಕ್ಕಮಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕುಸಿತ; ನಿಮ್ಮ ನಗರದ ಇಂದಿನ ದರ ಹೀಗಿದೆ

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಕಳುಹಿಸಬಹುದು. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವ್ಯಾಟ್ ಮತ್ತು ಸರಕು ಸಾಗಣೆ ಶುಲ್ಕಗಳಂತಹ ಸ್ಥಳೀಯ ತೆರಿಗೆಗಳಲ್ಲಿನ ವ್ಯತ್ಯಾಸವು ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:47 am, Fri, 18 November 22

ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ