Petrol Price on November 2: ಕಚ್ಚಾ ತೈಲದ ಬೆಲೆ ಏರಿಕೆ; ಇಂದಿನ ಪೆಟ್ರೋಲ್- ಡೀಸೆಲ್ ದರವೆಷ್ಟು?

Fuel Price Today: ರಾಜಸ್ಥಾನದ ಗಂಗಾನಗರ ಮತ್ತು ಹನುಮಾನ್‌ಗಢ ಜಿಲ್ಲೆಗಳಲ್ಲಿ ಅತ್ಯಂತ ದುಬಾರಿ ಬೆಲೆಯಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟವಾಗುತ್ತಿದೆ. ಭಾರತದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೀಗಿದೆ.

Petrol Price on November 2: ಕಚ್ಚಾ ತೈಲದ ಬೆಲೆ ಏರಿಕೆ; ಇಂದಿನ ಪೆಟ್ರೋಲ್- ಡೀಸೆಲ್ ದರವೆಷ್ಟು?
ಪೆಟ್ರೋಲ್ ಮತ್ತು ಡೀಸೆಲ್ ದರ
Follow us
| Updated By: ಸುಷ್ಮಾ ಚಕ್ರೆ

Updated on: Nov 02, 2022 | 8:26 AM

Fuel Price on November 2: ಕಳೆದ ಕೆಲವು ದಿನಗಳಲ್ಲಿ ಕಚ್ಚಾ ತೈಲದ ಬೆಲೆ ದಾಖಲೆಯ ಮಟ್ಟಕ್ಕೆ ಕುಸಿದಿತ್ತು. ಇದರ ನಂತರ OPEC ದೇಶಗಳು ಕಚ್ಚಾ ತೈಲದ ಉತ್ಪಾದನೆಯ ನಿರ್ಧಾರವನ್ನು ತೆಗೆದುಕೊಂಡ ನಂತರ ಅದರ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ. ಈಗಾಗಲೇ ಕಚ್ಚಾ ತೈಲ ಬೆಲೆ ಹಲವು ಬಾರಿ ಏರಿಳಿತ ಕಂಡಿದೆ. ಇಂದು ಮತ್ತೆ ಕಚ್ಚಾ ತೈಲದ ಬೆಲೆ ಏರಿಕೆಯಾಗಿದೆ. ಕಳೆದ 5 ತಿಂಗಳಿನಿಂದ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ (Petrol Price) -ಡೀಸೆಲ್ ದರ (Diesel Rate) ಒಂದೇ ರೀತಿಯಲ್ಲಿದೆ.

ನವೆಂಬರ್ 1ರಿಂದ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ 40 ಪೈಸೆ ಇಳಿಕೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ ನಂತರ ಅದು ಕಾರ್ಯರೂಪಕ್ಕೆ ಬರಲಿಲ್ಲ. ಹೀಗಾಗಿ, ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಇಂದು ಬೆಳಗ್ಗೆ ಡಬ್ಲ್ಯುಟಿಐ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 88.63 ಡಾಲರ್‌ಗೆ ಏರಿಕೆ ಕಂಡಿದೆ. ಬ್ರೆಂಟ್ ಕಚ್ಚಾ ತೈಲ ಕೂಡ ಏರಿಕೆಯಾಗಿ, ಪ್ರತಿ ಬ್ಯಾರೆಲ್​ಗೆ 94.79 ರೂ. ತಲುಪಿದೆ. ಒಪೆಕ್ ರಾಷ್ಟ್ರಗಳ ಉತ್ಪಾದನೆ ಕಡಿತದಿಂದಾಗಿ ಕಳೆದ ದಿನಗಳಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ.

ಆಗಸ್ಟ್-ಸೆಪ್ಟೆಂಬರ್ ತಿಂಗಳಿನಲ್ಲಿ ಕಚ್ಚಾ ತೈಲ ದಾಖಲೆ ಮಟ್ಟಕ್ಕೆ ಕುಸಿದಿತ್ತು. ಆದರೆ ಆಗ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ. ಮೇ 22ರಂದು ತೈಲದ ಬೆಲೆಯಲ್ಲಿ ಕೊನೆಯ ಬದಲಾವಣೆಯಾಗಿತ್ತು. 5 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿರುವುದು ಇದೇ ಮೊದಲು. ಮೇ 22ರಂದು ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಇದರಿಂದಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಯಿತು. ಇದರ ನಂತರ, ಮಹಾರಾಷ್ಟ್ರದಲ್ಲಿ ತೈಲದ ಮೇಲಿನ ವ್ಯಾಟ್ ಅನ್ನು ಕಡಿಮೆಗೊಳಿಸಲಾಯಿತು. ಇದರಿಂದಾಗಿ ಇಂಧನ ಬೆಲೆ ಕಡಿಮೆಯಾಯಿತು.

ಇದನ್ನೂ ಓದಿ: Petrol Price on October 27: ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಏರಿಕೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

ಸರ್ಕಾರಿ ತೈಲ ಕಂಪನಿಗಳು ನೀಡಿರುವ ಮಾಹಿತಿ ಪ್ರಕಾರ, ರಾಜಸ್ಥಾನದ ಗಂಗಾನಗರ ಮತ್ತು ಹನುಮಾನ್‌ಗಢ ಜಿಲ್ಲೆಗಳಲ್ಲಿ ಅತ್ಯಂತ ದುಬಾರಿ ಬೆಲೆಯಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟವಾಗುತ್ತಿದೆ. ಗಂಗಾನಗರದಲ್ಲಿ ಲೀಟರ್ ಪೆಟ್ರೋಲ್ ದರ 113.48 ರೂ.ಗೆ ತಲುಪಿದ್ದು, ಡೀಸೆಲ್ ಲೀಟರ್ ಗೆ 98.24 ರೂ.ಗೆ ಮಾರಾಟವಾಗುತ್ತಿದೆ. ಅದೇ ರೀತಿ, ಹನುಮಾನ್‌ಗಢ ಜಿಲ್ಲೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 112.54 ರೂ.ಗೆ ತಲುಪಿದ್ದು, ಡೀಸೆಲ್ ಪ್ರತಿ ಲೀಟರ್‌ಗೆ 97.39 ರೂ.ಗೆ ಮಾರಾಟವಾಗುತ್ತಿದೆ. ಭಾರತದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೀಗಿದೆ.

ದೆಹಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. ಮುಂಬೈ ಪೆಟ್ರೋಲ್ 111.35 ರೂ. ಮತ್ತು ಡೀಸೆಲ್ ಲೀಟರ್‌ಗೆ 97.28 ರೂ. ಚೆನ್ನೈ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಕೋಲ್ಕತ್ತಾ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ನೋಯ್ಡಾದಲ್ಲಿ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ ಲೀಟರ್‌ಗೆ 89.96 ರೂ. ಲಕ್ನೋದಲ್ಲಿ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ ಲೀಟರ್‌ಗೆ 89.76 ರೂ. ಜೈಪುರದಲ್ಲಿ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ ಲೀಟರ್‌ಗೆ 93.72 ರೂ. ತಿರುವನಂತಪುರದಲ್ಲಿ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ ಲೀಟರ್‌ಗೆ 96.52 ರೂ. ಪಾಟ್ನಾದಲ್ಲಿ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ ಲೀಟರ್‌ಗೆ 94.04 ರೂ. ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ ಲೀಟರ್‌ಗೆ 87.89 ರೂ. ಹೈದರಾಬಾದ್‌ನಲ್ಲಿ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ ಲೀಟರ್‌ಗೆ 97.82 ರೂ. ಆಗಿದೆ.

ಇದನ್ನೂ ಓದಿ: Petrol Price on November 1: ಇಂದಿನಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ; ಪ್ರತಿ ಲೀಟರ್​ಗೆ 40 ಪೈಸೆ ಕುಸಿತ

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಅನ್ನು ಕಳುಹಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ