Fuel Price on November 2: ಕಳೆದ ಕೆಲವು ದಿನಗಳಲ್ಲಿ ಕಚ್ಚಾ ತೈಲದ ಬೆಲೆ ದಾಖಲೆಯ ಮಟ್ಟಕ್ಕೆ ಕುಸಿದಿತ್ತು. ಇದರ ನಂತರ OPEC ದೇಶಗಳು ಕಚ್ಚಾ ತೈಲದ ಉತ್ಪಾದನೆಯ ನಿರ್ಧಾರವನ್ನು ತೆಗೆದುಕೊಂಡ ನಂತರ ಅದರ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ. ಈಗಾಗಲೇ ಕಚ್ಚಾ ತೈಲ ಬೆಲೆ ಹಲವು ಬಾರಿ ಏರಿಳಿತ ಕಂಡಿದೆ. ಇಂದು ಮತ್ತೆ ಕಚ್ಚಾ ತೈಲದ ಬೆಲೆ ಏರಿಕೆಯಾಗಿದೆ. ಕಳೆದ 5 ತಿಂಗಳಿನಿಂದ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ (Petrol Price) -ಡೀಸೆಲ್ ದರ (Diesel Rate) ಒಂದೇ ರೀತಿಯಲ್ಲಿದೆ.
ನವೆಂಬರ್ 1ರಿಂದ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ 40 ಪೈಸೆ ಇಳಿಕೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ ನಂತರ ಅದು ಕಾರ್ಯರೂಪಕ್ಕೆ ಬರಲಿಲ್ಲ. ಹೀಗಾಗಿ, ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಇಂದು ಬೆಳಗ್ಗೆ ಡಬ್ಲ್ಯುಟಿಐ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 88.63 ಡಾಲರ್‌ಗೆ ಏರಿಕೆ ಕಂಡಿದೆ. ಬ್ರೆಂಟ್ ಕಚ್ಚಾ ತೈಲ ಕೂಡ ಏರಿಕೆಯಾಗಿ, ಪ್ರತಿ ಬ್ಯಾರೆಲ್‌ಗೆ 94.79 ರೂ. ತಲುಪಿದೆ. ಒಪೆಕ್ ರಾಷ್ಟ್ರಗಳ ಉತ್ಪಾದನೆ ಕಡಿತದಿಂದಾಗಿ ಕಳೆದ ದಿನಗಳಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ.
ಆಗಸ್ಟ್-ಸೆಪ್ಟೆಂಬರ್ ತಿಂಗಳಿನಲ್ಲಿ ಕಚ್ಚಾ ತೈಲ ದಾಖಲೆ ಮಟ್ಟಕ್ಕೆ ಕುಸಿದಿತ್ತು. ಆದರೆ ಆಗ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ. ಮೇ 22ರಂದು ತೈಲದ ಬೆಲೆಯಲ್ಲಿ ಕೊನೆಯ ಬದಲಾವಣೆಯಾಗಿತ್ತು. 5 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿರುವುದು ಇದೇ ಮೊದಲು. ಮೇ 22ರಂದು ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಇದರಿಂದಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಯಿತು. ಇದರ ನಂತರ, ಮಹಾರಾಷ್ಟ್ರದಲ್ಲಿ ತೈಲದ ಮೇಲಿನ ವ್ಯಾಟ್ ಅನ್ನು ಕಡಿಮೆಗೊಳಿಸಲಾಯಿತು. ಇದರಿಂದಾಗಿ ಇಂಧನ ಬೆಲೆ ಕಡಿಮೆಯಾಯಿತು.
ಇದನ್ನೂ ಓದಿ: Petrol Price on October 27: ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಏರಿಕೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ
ಸರ್ಕಾರಿ ತೈಲ ಕಂಪನಿಗಳು ನೀಡಿರುವ ಮಾಹಿತಿ ಪ್ರಕಾರ, ರಾಜಸ್ಥಾನದ ಗಂಗಾನಗರ ಮತ್ತು ಹನುಮಾನ್‌ಗಢ ಜಿಲ್ಲೆಗಳಲ್ಲಿ ಅತ್ಯಂತ ದುಬಾರಿ ಬೆಲೆಯಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟವಾಗುತ್ತಿದೆ. ಗಂಗಾನಗರದಲ್ಲಿ ಲೀಟರ್ ಪೆಟ್ರೋಲ್ ದರ 113.48 ರೂ.ಗೆ ತಲುಪಿದ್ದು, ಡೀಸೆಲ್ ಲೀಟರ್ ಗೆ 98.24 ರೂ.ಗೆ ಮಾರಾಟವಾಗುತ್ತಿದೆ. ಅದೇ ರೀತಿ, ಹನುಮಾನ್‌ಗಢ ಜಿಲ್ಲೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 112.54 ರೂ.ಗೆ ತಲುಪಿದ್ದು, ಡೀಸೆಲ್ ಪ್ರತಿ ಲೀಟರ್‌ಗೆ 97.39 ರೂ.ಗೆ ಮಾರಾಟವಾಗುತ್ತಿದೆ. ಭಾರತದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೀಗಿದೆ.
ದೆಹಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ ಲೀಟರ್‌ಗೆ 89.62 ರೂ.
ಮುಂಬೈ ಪೆಟ್ರೋಲ್ 111.35 ರೂ. ಮತ್ತು ಡೀಸೆಲ್ ಲೀಟರ್‌ಗೆ 97.28 ರೂ.
ಚೆನ್ನೈ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ.
ಕೋಲ್ಕತ್ತಾ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ.
ನೋಯ್ಡಾದಲ್ಲಿ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ ಲೀಟರ್‌ಗೆ 89.96 ರೂ.
ಲಕ್ನೋದಲ್ಲಿ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ ಲೀಟರ್‌ಗೆ 89.76 ರೂ.
ಜೈಪುರದಲ್ಲಿ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ ಲೀಟರ್‌ಗೆ 93.72 ರೂ.
ತಿರುವನಂತಪುರದಲ್ಲಿ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ ಲೀಟರ್‌ಗೆ 96.52 ರೂ.
ಪಾಟ್ನಾದಲ್ಲಿ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ ಲೀಟರ್‌ಗೆ 94.04 ರೂ.
ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ ಲೀಟರ್‌ಗೆ 87.89 ರೂ.
ಹೈದರಾಬಾದ್‌ನಲ್ಲಿ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ ಲೀಟರ್‌ಗೆ 97.82 ರೂ. ಆಗಿದೆ.
ಇದನ್ನೂ ಓದಿ: Petrol Price on November 1: ಇಂದಿನಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ; ಪ್ರತಿ ಲೀಟರ್‌ಗೆ 40 ಪೈಸೆ ಕುಸಿತ
ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಅನ್ನು ಕಳುಹಿಸಬಹುದು.