Petrol Price on November 21: ನೊಯ್ಡಾದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ, ಲಕ್ನೋದಲ್ಲಿ ಕೊಂಚ ಏರಿಕೆ
Fuel Price Today: ದೆಹಲಿ-ಮುಂಬೈನಂತಹ ದೇಶದ 4 ಮಹಾನಗರಗಳಲ್ಲಿ ಇಂದಿಗೂ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
Fuel Price on November 21: ಕಳೆದ 24 ಗಂಟೆಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿತದ ಪರಿಣಾಮದಿಂದ ಇಂದು (ಸೋಮವಾರ) ಬೆಳಿಗ್ಗೆ ಸರ್ಕಾರಿ ತೈಲ ಕಂಪನಿಗಳು ಬಿಡುಗಡೆ ಮಾಡಿದ ಪೆಟ್ರೋಲ್ (Petrol Price) ಮತ್ತು ಡೀಸೆಲ್ (Diesel Price) ಚಿಲ್ಲರೆ ಬೆಲೆಯ ಮೇಲೂ ಗೋಚರಿಸುತ್ತದೆ. ಇಂದು ಬೆಳಿಗ್ಗೆ ಉತ್ತರ ಪ್ರದೇಶದ ಅನೇಕ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಕೂಡ 90 ಡಾಲರ್‌ಗಿಂತ ಕಡಿಮೆಯಾಗಿದೆ. ಆದರೆ, ದೆಹಲಿ-ಮುಂಬೈನಂತಹ ದೇಶದ 4 ಮಹಾನಗರಗಳಲ್ಲಿ ಇಂದಿಗೂ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹಲವು ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗಿದೆ.
ಸರ್ಕಾರಿ ತೈಲ ಕಂಪನಿಗಳು ಹೊರಡಿಸಿದ ಬೆಲೆಯ ಪ್ರಕಾರ, ಇಂದು ಬೆಳಿಗ್ಗೆ ಗೌತಮ ಬುದ್ಧ ನಗರ ಜಿಲ್ಲೆಯಲ್ಲಿ (ನೊಯ್ಡಾ-ಗ್ರೇಟರ್ ನೊಯ್ಡಾ) ಪೆಟ್ರೋಲ್ ಲೀಟರ್‌ಗೆ 35 ಪೈಸೆ ಅಗ್ಗವಾಗಿ 96.65 ರೂ. ಮತ್ತು ಡೀಸೆಲ್ ಅನ್ನು ಲೀಟರ್‌ಗೆ 89.82 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಘಜಿಯಾಬಾದ್‌ನಲ್ಲೂ ಪೆಟ್ರೋಲ್‌ಗೆ 18 ಪೈಸೆ ಕಡಿಮೆಯಾಗಿ ಲೀಟರ್‌ಗೆ 96.40 ರೂ. ಮತ್ತು ಡೀಸೆಲ್ ಲೀಟರ್‌ಗೆ 17 ಪೈಸೆ 89.58 ರೂ. ಆಗಿದೆ. ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು, ಲೀಟರ್‌ಗೆ 13 ಪೈಸೆ ಏರಿಕೆಯಾಗಿ 96.57 ರೂ.ಗೆ ತಲುಪಿದೆ ಮತ್ತು ಡೀಸೆಲ್ ಲೀಟರ್‌ಗೆ 12 ಪೈಸೆ ಏರಿಕೆಯಾಗಿ 89.76 ರೂ.ಗೆ ತಲುಪಿದೆ.
ಭಾರತದ ಪ್ರಮುಖ ನಗರಗಳಲ್ಲಿ 6 ತಿಂಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರವಾಗಿದೆ. OPEC ರಾಷ್ಟ್ರಗಳು ಕಚ್ಚಾ ಉತ್ಪಾದನೆಯಲ್ಲಿ ಕಡಿತದ ಘೋಷಣೆಯ ನಂತರ ಕಚ್ಚಾ ತೈಲದಲ್ಲಿ ಏರಿಳಿತಗಳಾಗಿವೆ. ನವೆಂಬರ್ 1ರಿಂದ ತೈಲ ಕಂಪನಿಗಳು ಪ್ರತಿ ಲೀಟರ್ ತೈಲಕ್ಕೆ 40 ಪೈಸೆ ಪರಿಹಾರವನ್ನು ನೀಡುವ ನಿರೀಕ್ಷೆಯಿತ್ತು. ಆದರೆ ಕಂಪನಿಗಳು ಇದನ್ನು ಮಾಡಲಿಲ್ಲ. ದೇಶಿಯ ಮಾರುಕಟ್ಟೆಯಲ್ಲಿ ಸುಮಾರು 6 ತಿಂಗಳಿನಿಂದ ಪೆಟ್ರೋಲ್ -ಡೀಸೆಲ್ ಬೆಲೆ ಸ್ಥಿರವಾಗಿದೆ. ಇದು ಜನಸಾಮಾನ್ಯರಿಗೆ ನೆಮ್ಮದಿ ತಂದಿದೆ.
ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್‌ಗೆ 6 ರೂ. ಕಡಿತಗೊಳಿಸಿದ್ದರಿಂದ ಮೇ ತಿಂಗಳಲ್ಲಿ ಇಂಧನದ ಬೆಲೆಯಲ್ಲಿ ಕೊಂಚ ಏರಿಳಿತ ಕಂಡುಬಂದಿತ್ತು. ಪರಿಷ್ಕೃತ ದರಗಳ ಪ್ರಕಾರ, ಭಾರತದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಗಳು ಹೀಗಿವೆ…
ಇದನ್ನೂ ಓದಿ: Petrol Price on November 18: ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಕುಸಿತ; ಈ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ದುಬಾರಿ
ದೆಹಲಿಯಲ್ಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ ಲೀಟರ್‌ಗೆ 94.27 ರೂ. ಚೆನ್ನೈನಲ್ಲಿ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ನೊಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.65 ರೂ. ಮತ್ತು ಡೀಸೆಲ್ 89.82 ರೂ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ 89.76 ರೂ. ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ 93.72 ರೂ. ತಿರುವನಂತಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ 96.52 ರೂ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ 94.04 ರೂ. ಗುರುಗ್ರಾಮದಲ್ಲಿ 97.18 ರೂ. ಮತ್ತು ಡೀಸೆಲ್ ಲೀಟರ್‌ಗೆ 90.05 ರೂ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ 87.89 ರೂ. ಭುವನೇಶ್ವರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 103.19 ರೂ. ಮತ್ತು ಡೀಸೆಲ್ 94.76 ರೂ. ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.20 ರೂ. ಮತ್ತು ಡೀಸೆಲ್ 84.26 ರೂ. ಹೈದರಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ 97.82 ರೂ. ಆಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಳೆದ 24 ಗಂಟೆಗಳಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು ಒಂದು ಡಾಲರ್‌ಗಳಷ್ಟು ಕುಸಿದಿದೆ. ಮೇ 22ರಂದು ತೈಲದ ಬೆಲೆಯಲ್ಲಿ ಕೊನೆಯ ಬದಲಾವಣೆಯಾಗಿತ್ತು. 5 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿರುವುದು ಇದೇ ಮೊದಲು. ಮೇ 22ರಂದು ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಇದರಿಂದಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಯಿತು. ಇದರ ನಂತರ, ಮಹಾರಾಷ್ಟ್ರದಲ್ಲಿ ತೈಲದ ಮೇಲಿನ ವ್ಯಾಟ್ ಅನ್ನು ಕಡಿಮೆಗೊಳಿಸಲಾಯಿತು. ಇದರಿಂದಾಗಿ ಇಂಧನ ಬೆಲೆ ಕಡಿಮೆಯಾಯಿತು.
ಇದನ್ನೂ ಓದಿ: Petrol Price on November 15: ಚಿಕ್ಕಮಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕುಸಿತ; ನಿಮ್ಮ ನಗರದ ಇಂದಿನ ದರ ಹೀಗಿದೆ
ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಅಂತಾರಾಷ್ಟ್ರೀಯ ಮಾನದಂಡದ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. OMC ಗಳಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸೇರಿವೆ.
ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಕಳುಹಿಸಬಹುದು. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವ್ಯಾಟ್ ಮತ್ತು ಸರಕು ಸಾಗಣೆ ಶುಲ್ಕಗಳಂತಹ ಸ್ಥಳೀಯ ತೆರಿಗೆಗಳಲ್ಲಿನ ವ್ಯತ್ಯಾಸವು ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ.