AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on November 22: ಕೊಂಚ ಏರಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆಗೆ ಮತ್ತೆ ಬ್ರೇಕ್; ಇಂದಿನ ಇಂಧನದ ದರ ಹೀಗಿದೆ

Fuel Price Today: ಭಾರತದ ಪ್ರಮುಖ ನಗರಗಳಲ್ಲಿ ಐದೂವರೆ ತಿಂಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರವಾಗಿದೆ. OPEC ರಾಷ್ಟ್ರಗಳು ಕಚ್ಚಾ ಉತ್ಪಾದನೆಯಲ್ಲಿ ಕಡಿತದ ಘೋಷಣೆ ಮಾಡಿದ ನಂತರ ಕಚ್ಚಾ ತೈಲದಲ್ಲಿ ಏರಿಳಿತಗಳಾಗಿತ್ತು.

Petrol Price on November 22: ಕೊಂಚ ಏರಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆಗೆ ಮತ್ತೆ ಬ್ರೇಕ್; ಇಂದಿನ ಇಂಧನದ ದರ ಹೀಗಿದೆ
ಪೆಟ್ರೋಲ್ ಬೆಲೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Nov 22, 2022 | 8:41 AM

Fuel Price on November 22: ಕಳೆದ ಐದೂವರೆ ತಿಂಗಳಿನಿಂದ ಭಾರತದ ಮೆಟ್ರೋ ಸಿಟಿಗಳಲ್ಲಿ ಪೆಟ್ರೋಲ್ (Petrol Price) ಮತ್ತು ಡೀಸೆಲ್ (Diesel Price) ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಬೇರೆ ನಗರಗಳಲ್ಲಿ ಕೊಂಚ ಏರಿಕೆ ಕಾಣುತ್ತಿದ್ದ ಪೆಟ್ರೋಲ್, ಡೀಸೆಲ್ ಬೆಲೆಗೂ ಇಂದು ಬ್ರೇಕ್ ಬಿದ್ದಿದೆ. ನಿನ್ನೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಕೂಡ 90 ಡಾಲರ್‌ಗಿಂತ ಕಡಿಮೆಯಾಗಿದೆ. ಆದರೆ, ದೆಹಲಿ-ಮುಂಬೈನಂತಹ ದೇಶದ 4 ಮಹಾನಗರಗಳಲ್ಲಿ ಇಂದಿಗೂ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಭಾರತದ ಪ್ರಮುಖ ನಗರಗಳಲ್ಲಿ ಐದೂವರೆ ತಿಂಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರವಾಗಿದೆ. OPEC ರಾಷ್ಟ್ರಗಳು ಕಚ್ಚಾ ಉತ್ಪಾದನೆಯಲ್ಲಿ ಕಡಿತದ ಘೋಷಣೆ ಮಾಡಿದ ನಂತರ ಕಚ್ಚಾ ತೈಲದಲ್ಲಿ ಏರಿಳಿತಗಳಾಗಿತ್ತು. ನವೆಂಬರ್ 1ರಿಂದ ತೈಲ ಕಂಪನಿಗಳು ಪ್ರತಿ ಲೀಟರ್ ತೈಲಕ್ಕೆ 40 ಪೈಸೆ ಪರಿಹಾರವನ್ನು ನೀಡುವ ನಿರೀಕ್ಷೆಯಿತ್ತು. ಆದರೆ ಕಂಪನಿಗಳು ಇದನ್ನು ಮಾಡಲಿಲ್ಲ. ದೇಶಿಯ ಮಾರುಕಟ್ಟೆಯಲ್ಲಿ ಸುಮಾರು 6 ತಿಂಗಳಿನಿಂದ ಪೆಟ್ರೋಲ್ -ಡೀಸೆಲ್ ಬೆಲೆ ಸ್ಥಿರವಾಗಿದೆ. ಇದು ಜನಸಾಮಾನ್ಯರಿಗೆ ನೆಮ್ಮದಿ ತಂದಿದೆ.

ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್‌ಗೆ 6 ರೂ. ಕಡಿತಗೊಳಿಸಿದ್ದರಿಂದ ಮೇ ತಿಂಗಳಲ್ಲಿ ಇಂಧನದ ಬೆಲೆಯಲ್ಲಿ ಕೊಂಚ ಏರಿಳಿತ ಕಂಡುಬಂದಿತ್ತು. ಪರಿಷ್ಕೃತ ದರಗಳ ಪ್ರಕಾರ, ಭಾರತದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಗಳು ಹೀಗಿವೆ…

ಇದನ್ನೂ ಓದಿ: Petrol Price on November 17: ಕಚ್ಚಾ ತೈಲದ ಬೆಲೆ ಮತ್ತೆ ಇಳಿಕೆ; ಈ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕುಸಿತ

ದೆಹಲಿಯಲ್ಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ ಲೀಟರ್‌ಗೆ 94.27 ರೂ. ಚೆನ್ನೈನಲ್ಲಿ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ನೊಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.65 ರೂ. ಮತ್ತು ಡೀಸೆಲ್ 89.82 ರೂ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ 89.76 ರೂ. ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ 93.72 ರೂ. ತಿರುವನಂತಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ 96.52 ರೂ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ 94.04 ರೂ. ಗುರುಗ್ರಾಮದಲ್ಲಿ 97.18 ರೂ. ಮತ್ತು ಡೀಸೆಲ್ ಲೀಟರ್‌ಗೆ 90.05 ರೂ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ 87.89 ರೂ. ಭುವನೇಶ್ವರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 103.19 ರೂ. ಮತ್ತು ಡೀಸೆಲ್ 94.76 ರೂ. ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.20 ರೂ. ಮತ್ತು ಡೀಸೆಲ್ 84.26 ರೂ. ಹೈದರಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ 97.82 ರೂ. ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಳೆದ 24 ಗಂಟೆಗಳಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು ಒಂದು ಡಾಲರ್‌ಗಳಷ್ಟು ಕುಸಿದಿದೆ. ಮೇ 22ರಂದು ತೈಲದ ಬೆಲೆಯಲ್ಲಿ ಕೊನೆಯ ಬದಲಾವಣೆಯಾಗಿತ್ತು. 5 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿರುವುದು ಇದೇ ಮೊದಲು. ಮೇ 22ರಂದು ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಇದರಿಂದಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಯಿತು. ಇದರ ನಂತರ, ಮಹಾರಾಷ್ಟ್ರದಲ್ಲಿ ತೈಲದ ಮೇಲಿನ ವ್ಯಾಟ್ ಅನ್ನು ಕಡಿಮೆಗೊಳಿಸಲಾಯಿತು. ಇದರಿಂದಾಗಿ ಇಂಧನ ಬೆಲೆ ಕಡಿಮೆಯಾಯಿತು.

ಇದನ್ನೂ ಓದಿ: Petrol Price on November 19: ಕಚ್ಚಾ ತೈಲದ ಬೆಲೆ ಕುಸಿತ; ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ದರ ಇಳಿಕೆ

ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಅಂತಾರಾಷ್ಟ್ರೀಯ ಮಾನದಂಡದ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. OMCಗಳಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸೇರಿವೆ.

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಕಳುಹಿಸಬಹುದು. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವ್ಯಾಟ್ ಮತ್ತು ಸರಕು ಸಾಗಣೆ ಶುಲ್ಕಗಳಂತಹ ಸ್ಥಳೀಯ ತೆರಿಗೆಗಳಲ್ಲಿನ ವ್ಯತ್ಯಾಸವು ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:40 am, Tue, 22 November 22

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ