AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on November 29: 10 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ತೈಲದ ಬೆಲೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇ 21ರಂದು ಪೆಟ್ರೋಲ್ ಮೇಲೆ ಲೀಟರ್ ಗೆ 8 ರೂ. ಮತ್ತು ಡೀಸೆಲ್ ಮೇಲೆ 6 ರೂ. ಅಬಕಾರಿ ಸುಂಕ ಕಡಿತ ಮಾಡುವುದಾಗಿ ಘೋಷಿಸಿದ್ದರು. ಇಂಧನದ ದರಗಳು 6 ತಿಂಗಳಿನಿಂದ ಬದಲಾಗದೆ ಉಳಿದಿದೆ.

Petrol Price on November 29: 10 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ತೈಲದ ಬೆಲೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ
ಪೆಟ್ರೋಲ್ ದರ
TV9 Web
| Edited By: |

Updated on:Nov 29, 2022 | 10:09 AM

Share

Fuel Price on November 29: ಕಳೆದ 10 ತಿಂಗಳಲ್ಲೇ ತೈಲದ ಬೆಲೆಗಳು ಕನಿಷ್ಠ ಮಟ್ಟಕ್ಕೆ ಇಳಿದಿದೆ. ಇದರಿಂದ ಇಂಧನದ ಬೆಲೆಯಲ್ಲಿ ಭಾರೀ ಇಳಿಕೆಯ ನಿರೀಕ್ಷೆಯನ್ನು ಹೆಚ್ಚಿಸಿದೆ. ಬೆಂಚ್‌ಮಾರ್ಕ್ ಬ್ರೆಂಟ್ ಕಚ್ಚಾತೈಲವು ಸೋಮವಾರದಿಂದ ಜನವರಿಯಿಂದ ಅತ್ಯಂತ ಕಡಿಮೆ ಮಟ್ಟಕ್ಕೆ ಕುಸಿದಿದೆ. ಸರ್ಕಾರಿ ಚಾಲಿತ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆ ಪರಿಷ್ಕರಣೆ ಘೋಷಿಸುತ್ತವೆ. ಆದರೂ ಇಂದು ಪೆಟ್ರೋಲ್ (Petrol Price) ಮತ್ತು ಡೀಸೆಲ್‌ನ ಚಿಲ್ಲರೆ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿ, ಬೆಂಗಳೂರು, ಮುಂಬೈ, ಕೋಲ್ಕತ್ತಾದಂತಹ ಮಹಾನಗರಗಳಲ್ಲಿ ಇಂಧನದ ದರಗಳು (Fuel Price) 6 ತಿಂಗಳಿನಿಂದ ಬದಲಾಗದೆ ಉಳಿದಿದೆ.

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಕೊನೆಯ ಬಾರಿಗೆ ದೇಶಾದ್ಯಂತ ಬದಲಾವಣೆಯಾಗಿದ್ದು, ಗ್ರಾಹಕರಿಗೆ ಸ್ವಲ್ಪ ಪರಿಹಾರವನ್ನು ನೀಡಲು ಕೇಂದ್ರವು ಇಂಧನದ ಮೇಲಿನ ತೆರಿಗೆಯನ್ನು ಕಡಿತಗೊಳಿಸಿತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇ 21 ರಂದು ಪೆಟ್ರೋಲ್ ಮೇಲೆ ಲೀಟರ್ ಗೆ 8 ರೂಪಾಯಿ ಮತ್ತು ಡೀಸೆಲ್ ಮೇಲೆ 6 ರೂಪಾಯಿ ಅಬಕಾರಿ ಸುಂಕ ಕಡಿತ ಮಾಡುವುದಾಗಿ ಘೋಷಿಸಿದ್ದರು.

ಇಂದು ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 96.72 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ಲೀಟರ್‌ಗೆ 89.62 ರೂ. ಆಗಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.31 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 94.27 ರೂ. ಆಗಿದೆ. ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರಿನಲ್ಲಿ ಪ್ರಸ್ತುತ ಪೆಟ್ರೋಲ್ ಬೆಲೆ ಲೀಟರ್‌ಗೆ 101.94 ರೂ ಆಗಿದ್ದರೆ ಡೀಸೆಲ್ ಬೆಲೆ 87.89 ರೂ. ಆಗಿದೆ. ಚೆನ್ನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕ್ರಮವಾಗಿ ಲೀಟರ್‌ಗೆ 102.63 ಮತ್ತು 94.24 ರೂ. ಆಗಿದೆ.

ಇದನ್ನೂ ಓದಿ: Petrol Price on November 21: ನೊಯ್ಡಾದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ, ಲಕ್ನೋದಲ್ಲಿ ಕೊಂಚ ಏರಿಕೆ

ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.03 ರೂ. ಮತ್ತು ಪ್ರತಿ ಲೀಟರ್ ಡೀಸೆಲ್ ಬೆಲೆ 92.76 ರೂ. ಆಗಿದೆ. ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.62 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 89.81 ರೂ. ಆಗಿದೆ. ದೇಶದಲ್ಲಿ ಪೆಟ್ರೋಲ್ ಬೆಲೆಯಲ್ಲಿ ಕೊನೆಯ ಬದಲಾವಣೆಯು ಮೇ 22ರಂದು ಸಂಭವಿಸಿತ್ತು. ಅಷ್ಟೇ ಅಲ್ಲ, ಸುಮಾರು 6 ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ ಮಾಡದೇ ಇರುವುದು ಇದೇ ಮೊದಲು.

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ಬೆಲೆಗಳನ್ನು ಬಿಡುಗಡೆ ಮಾಡಲಾಗುತ್ತದೆ. ಆ ದಿನದ ಹೊಸ ದರಗಳು ಬೆಳಿಗ್ಗೆ 6 ಗಂಟೆಯಿಂದಲೇ ಅನ್ವಯವಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳ ಸೇರ್ಪಡೆಯಿಂದಾಗಿ ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದರಿಂದಾಗಿ ಪೆಟ್ರೋಲ್ ಡೀಸೆಲ್ ಬೆಲೆ ತುಂಬಾ ಹೆಚ್ಚಾಗಿತ್ತು.

ಇದನ್ನೂ ಓದಿ: Petrol Price on November 21: ನೊಯ್ಡಾದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ, ಲಕ್ನೋದಲ್ಲಿ ಕೊಂಚ ಏರಿಕೆ

ಭಾರತದ ಪ್ರಮುಖ ನಗರಗಳಲ್ಲಿ 6 ತಿಂಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರವಾಗಿದೆ. OPEC ರಾಷ್ಟ್ರಗಳು ಕಚ್ಚಾ ಉತ್ಪಾದನೆಯಲ್ಲಿ ಕಡಿತದ ಘೋಷಣೆ ಮಾಡಿದ ನಂತರ ಕಚ್ಚಾ ತೈಲದಲ್ಲಿ ಏರಿಳಿತಗಳಾಗಿತ್ತು. ನವೆಂಬರ್ 1ರಿಂದ ತೈಲ ಕಂಪನಿಗಳು ಪ್ರತಿ ಲೀಟರ್ ತೈಲಕ್ಕೆ 40 ಪೈಸೆ ಪರಿಹಾರವನ್ನು ನೀಡುವ ನಿರೀಕ್ಷೆಯಿತ್ತು. ಆದರೆ, ಕಂಪನಿಗಳು ಇದನ್ನು ಮಾಡಲಿಲ್ಲ. ದೇಶಿಯ ಮಾರುಕಟ್ಟೆಯಲ್ಲಿ ಸುಮಾರು 6 ತಿಂಗಳಿನಿಂದ ಪೆಟ್ರೋಲ್ -ಡೀಸೆಲ್ ಬೆಲೆ ಸ್ಥಿರವಾಗಿದೆ. ಇದು ಜನಸಾಮಾನ್ಯರಿಗೆ ನೆಮ್ಮದಿ ತಂದಿದೆ.

ದೆಹಲಿಯಲ್ಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ ಲೀಟರ್‌ಗೆ 94.27 ರೂ. ಚೆನ್ನೈನಲ್ಲಿ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ನೊಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.65 ರೂ. ಮತ್ತು ಡೀಸೆಲ್ 89.82 ರೂ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ 89.76 ರೂ. ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ 93.72 ರೂ. ತಿರುವನಂತಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ 96.52 ರೂ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ 94.04 ರೂ. ಗುರುಗ್ರಾಮದಲ್ಲಿ 97.18 ರೂ. ಮತ್ತು ಡೀಸೆಲ್ ಲೀಟರ್‌ಗೆ 90.05 ರೂ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ 87.89 ರೂ. ಭುವನೇಶ್ವರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 103.19 ರೂ. ಮತ್ತು ಡೀಸೆಲ್ 94.76 ರೂ. ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.20 ರೂ. ಮತ್ತು ಡೀಸೆಲ್ 84.26 ರೂ. ಹೈದರಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ 97.82 ರೂ. ಆಗಿದೆ.

ಇದನ್ನೂ ಓದಿ: Petrol Price on November 26: ಇಂದು ಪೆಟ್ರೋಲ್, ಡೀಸೆಲ್ ಬೆಲೆ ಕೊಂಚ ಇಳಿಕೆ; ನಿಮ್ಮ ನಗರದ ಇಂಧನದ ದರ ಹೀಗಿದೆ

ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಅಂತಾರಾಷ್ಟ್ರೀಯ ಮಾನದಂಡದ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. OMCಗಳಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸೇರಿವೆ.

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಕಳುಹಿಸಬಹುದು. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವ್ಯಾಟ್ ಮತ್ತು ಸರಕು ಸಾಗಣೆ ಶುಲ್ಕಗಳಂತಹ ಸ್ಥಳೀಯ ತೆರಿಗೆಗಳಲ್ಲಿನ ವ್ಯತ್ಯಾಸವು ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:08 am, Tue, 29 November 22

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ