AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on November 3: ದೆಹಲಿ, ಚೆನ್ನೈ, ಬೆಂಗಳೂರು ಮುಂತಾದ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

Fuel Price Today: ಆಗಸ್ಟ್-ಸೆಪ್ಟೆಂಬರ್ ತಿಂಗಳಿನಲ್ಲಿ ಕಚ್ಚಾ ತೈಲ ದಾಖಲೆ ಮಟ್ಟಕ್ಕೆ ಕುಸಿದಿತ್ತು. ಆದರೆ ಆಗ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ.

Petrol Price on November 3: ದೆಹಲಿ, ಚೆನ್ನೈ, ಬೆಂಗಳೂರು ಮುಂತಾದ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ
ಪೆಟ್ರೋಲ್ ದರ
TV9 Web
| Edited By: |

Updated on:Nov 03, 2022 | 9:06 AM

Share

Fuel Price on November 3: ಇಂದು (ನವೆಂಬರ್ 3) ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಯಲ್ಲಿ (Diesel Price) ಯಾವುದೇ ಬದಲಾವಣೆ ಆಗಿಲ್ಲ. 5 ತಿಂಗಳಿನಿಂದ ಇಂಧನದ ಬೆಲೆಗಳು ಸ್ಥಿರವಾಗಿವೆ. ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು (Fuel Rate) ಪರಿಷ್ಕರಿಸಲಾಗುತ್ತದೆ. ಇಂಧನ ಬೆಲೆಗಳ ಪರಿಷ್ಕರಣೆಯನ್ನು ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಮಾಡುತ್ತವೆ. ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ ಮತ್ತು ಡೀಸೆಲ್‌ಗೆ 6 ರೂ ಕಡಿತಗೊಳಿಸಿದ್ದರಿಂದ ಮೇ ತಿಂಗಳಲ್ಲಿ ಇಂಧನ ಬೆಲೆಗಳಲ್ಲಿ ಕೊನೆಯ ಪ್ರಮುಖ ದೇಶಾದ್ಯಂತ ಏರಿಳಿತ ಕಂಡುಬಂದಿತ್ತು.

ಪ್ರಮುಖ ಮೆಟ್ರೋಪಾಲಿಟನ್ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಗಳು ಹೀಗಿವೆ. ಇತ್ತೀಚಿನ ಪರಿಷ್ಕೃತ ದರಗಳ ಪ್ರಕಾರ,

ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 96.72 ಮತ್ತು 89.62 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್‌ಗೆ 106.31 ರೂ ಮತ್ತು ಡೀಸೆಲ್‌ಗೆ 94.27 ರೂ. ಚೆನ್ನೈ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಕೋಲ್ಕತ್ತಾ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ನೋಯ್ಡಾದಲ್ಲಿ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ ಲೀಟರ್‌ಗೆ 89.96 ರೂ. ಲಕ್ನೋದಲ್ಲಿ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ ಲೀಟರ್‌ಗೆ 89.76 ರೂ. ಜೈಪುರದಲ್ಲಿ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ ಲೀಟರ್‌ಗೆ 93.72 ರೂ. ತಿರುವನಂತಪುರದಲ್ಲಿ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ ಲೀಟರ್‌ಗೆ 96.52 ರೂ. ಪಾಟ್ನಾದಲ್ಲಿ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ ಲೀಟರ್‌ಗೆ 94.04 ರೂ. ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ ಲೀಟರ್‌ಗೆ 87.89 ರೂ. ಹೈದರಾಬಾದ್‌ನಲ್ಲಿ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ ಲೀಟರ್‌ಗೆ 97.82 ರೂ. ಆಗಿದೆ.

ಆಗಸ್ಟ್-ಸೆಪ್ಟೆಂಬರ್ ತಿಂಗಳಿನಲ್ಲಿ ಕಚ್ಚಾ ತೈಲ ದಾಖಲೆ ಮಟ್ಟಕ್ಕೆ ಕುಸಿದಿತ್ತು. ಆದರೆ ಆಗ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ. ಮೇ 22ರಂದು ತೈಲದ ಬೆಲೆಯಲ್ಲಿ ಕೊನೆಯ ಬದಲಾವಣೆಯಾಗಿತ್ತು. 5 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿರುವುದು ಇದೇ ಮೊದಲು. ಮೇ 22ರಂದು ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಇದರಿಂದಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಯಿತು. ಇದರ ನಂತರ, ಮಹಾರಾಷ್ಟ್ರದಲ್ಲಿ ತೈಲದ ಮೇಲಿನ ವ್ಯಾಟ್ ಅನ್ನು ಕಡಿಮೆಗೊಳಿಸಲಾಯಿತು. ಇದರಿಂದಾಗಿ ಇಂಧನ ಬೆಲೆ ಕಡಿಮೆಯಾಯಿತು.

ಇದನ್ನೂ ಓದಿ: Petrol Price on October 22: ದೀಪಾವಳಿ ಹಬ್ಬದ ವೇಳೆ ಏರಿಕೆಯಾಗುತ್ತಾ ಪೆಟ್ರೋಲ್ ಬೆಲೆ?; ಇಂದಿನ ಡೀಸೆಲ್ ದರ ಹೀಗಿದೆ

ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಅಂತಾರಾಷ್ಟ್ರೀಯ ಮಾನದಂಡದ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. OMC ಗಳಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸೇರಿವೆ.

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಅನ್ನು ಕಳುಹಿಸಬಹುದು. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವ್ಯಾಟ್ ಮತ್ತು ಸರಕು ಸಾಗಣೆ ಶುಲ್ಕಗಳಂತಹ ಸ್ಥಳೀಯ ತೆರಿಗೆಗಳಲ್ಲಿನ ವ್ಯತ್ಯಾಸವು ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:59 am, Thu, 3 November 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು