Petrol Price on November 8: ಬಳ್ಳಾರಿಯಲ್ಲಿ ಪೆಟ್ರೋಲ್ ಬೆಲೆ 1 ರೂ. ಕುಸಿತ; ಬೆಂಗಳೂರು ಸೇರಿ ಪ್ರಮುಖ ನಗರಗಳ ಇಂದಿನ ಡೀಸೆಲ್ ದರ ಹೀಗಿದೆ

Fuel Price Today: ಒಪೆಕ್ ರಾಷ್ಟ್ರಗಳ ಉತ್ಪಾದನೆ ಕಡಿತದಿಂದಾಗಿ ಕಚ್ಚಾ ತೈಲದ ಬೆಲೆ ಹೆಚ್ಚುತ್ತಿದೆ. ಇಂದು ಕರ್ನಾಟಕದ ಬಳ್ಳಾರಿಯಲ್ಲಿ ಪೆಟ್ರೋಲ್ ಬೆಲೆ 1 ರೂ. ಕುಸಿತವಾಗಿದೆ.

Petrol Price on November 8: ಬಳ್ಳಾರಿಯಲ್ಲಿ ಪೆಟ್ರೋಲ್ ಬೆಲೆ 1 ರೂ. ಕುಸಿತ; ಬೆಂಗಳೂರು ಸೇರಿ ಪ್ರಮುಖ ನಗರಗಳ ಇಂದಿನ ಡೀಸೆಲ್ ದರ ಹೀಗಿದೆ
ಪೆಟ್ರೋಲ್ ಮತ್ತು ಡೀಸೆಲ್ ದರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 08, 2022 | 9:23 AM

Fuel Price on November 8: ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದಾಖಲೆಯ ಮಟ್ಟಕ್ಕೆ ಕುಸಿದಿದ್ದ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಏರಿಕೆ ಕಾಣುತ್ತಿದೆ. ಆದರೆ, ದೇಶಿಯ ಮಾರುಕಟ್ಟೆಯಲ್ಲಿ ಇದರ ಪರಿಣಾಮ ಇನ್ನೂ ಕಾಣಿಸುತ್ತಿಲ್ಲ. ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ (Petrol Price) -ಡಿಸೇಲ್ ಬೆಲೆ (Diesel Price) ಮೊದಲ ಹಂತದಲ್ಲೇ ಮುಂದುವರಿದಿದ್ದು, ಇದರಿಂದ ಜನಸಾಮಾನ್ಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಇಂದು ಬೆಳಿಗ್ಗೆ ಕಚ್ಚಾ ತೈಲ ಪ್ರತಿ ಬ್ಯಾರೆಲ್‌ಗೆ 92.01 ರೂ. ಏರಿಕೆ ಕಂಡಿದೆ. ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್​ಗೆ 97.95 ರೂ. ತಲುಪಿದೆ. ಒಪೆಕ್ ರಾಷ್ಟ್ರಗಳ ಉತ್ಪಾದನೆ ಕಡಿತದಿಂದಾಗಿ ಕಚ್ಚಾ ತೈಲದ ಬೆಲೆ ಹೆಚ್ಚುತ್ತಿದೆ. ಇಂದು ಕರ್ನಾಟಕದ ಬಳ್ಳಾರಿಯಲ್ಲಿ ಪೆಟ್ರೋಲ್ ಬೆಲೆ 1 ರೂ. ಕುಸಿತವಾಗಿದೆ.

5 ತಿಂಗಳಿನಿಂದ ದೇಶಾದ್ಯಂತ ಇಂಧನದ ಬೆಲೆಗಳು ಸ್ಥಿರವಾಗಿವೆ. ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಇಂಧನದ ಬೆಲೆಗಳ ಪರಿಷ್ಕರಣೆಯನ್ನು ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಮಾಡುತ್ತವೆ. ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್‌ಗೆ 6 ರೂ. ಕಡಿತಗೊಳಿಸಿದ್ದರಿಂದ ಮೇ ತಿಂಗಳ ಅಂತ್ಯದಲ್ಲಿ ಇಂಧನದ ಬೆಲೆಗಳಲ್ಲಿ ದೇಶಾದ್ಯಂತ ಏರಿಳಿತ ಕಂಡುಬಂದಿತ್ತು. ಇಂದು ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ…

ಪರಿಷ್ಕೃತ ದರಗಳ ಪ್ರಕಾರ, ಭಾರತದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಗಳು ಹೀಗಿವೆ…

ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 96.72 ಮತ್ತು 89.62 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್‌ಗೆ 106.31 ರೂ ಮತ್ತು ಡೀಸೆಲ್‌ಗೆ 94.27 ರೂ. ಚೆನ್ನೈ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಕೋಲ್ಕತ್ತಾ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ನೋಯ್ಡಾದಲ್ಲಿ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ ಲೀಟರ್‌ಗೆ 89.96 ರೂ. ಲಕ್ನೋದಲ್ಲಿ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ ಲೀಟರ್‌ಗೆ 89.76 ರೂ. ಜೈಪುರದಲ್ಲಿ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ ಲೀಟರ್‌ಗೆ 93.72 ರೂ. ತಿರುವನಂತಪುರದಲ್ಲಿ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ ಲೀಟರ್‌ಗೆ 96.52 ರೂ. ಪಾಟ್ನಾದಲ್ಲಿ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ ಲೀಟರ್‌ಗೆ 94.04 ರೂ. ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ ಲೀಟರ್‌ಗೆ 87.89 ರೂ. ಹೈದರಾಬಾದ್‌ನಲ್ಲಿ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ ಲೀಟರ್‌ಗೆ 97.82 ರೂ. ಆಗಿದೆ.

ಇದನ್ನೂ ಓದಿ: Petrol Price on November 5: ಬೆಂಗಳೂರು, ಶಿವಮೊಗ್ಗ ಸೇರಿದಂತೆ ನಿಮ್ಮ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು?

ಆಗಸ್ಟ್-ಸೆಪ್ಟೆಂಬರ್ ತಿಂಗಳಿನಲ್ಲಿ ಕಚ್ಚಾ ತೈಲ ದಾಖಲೆ ಮಟ್ಟಕ್ಕೆ ಕುಸಿದಿತ್ತು. ಆದರೆ ಆಗ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ. ಮೇ 22ರಂದು ತೈಲದ ಬೆಲೆಯಲ್ಲಿ ಕೊನೆಯ ಬದಲಾವಣೆಯಾಗಿತ್ತು. 5 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿರುವುದು ಇದೇ ಮೊದಲು. ಮೇ 22ರಂದು ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಇದರಿಂದಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಯಿತು. ಇದರ ನಂತರ, ಮಹಾರಾಷ್ಟ್ರದಲ್ಲಿ ತೈಲದ ಮೇಲಿನ ವ್ಯಾಟ್ ಅನ್ನು ಕಡಿಮೆಗೊಳಿಸಲಾಯಿತು. ಇದರಿಂದಾಗಿ ಇಂಧನ ಬೆಲೆ ಕಡಿಮೆಯಾಯಿತು.

ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಅಂತಾರಾಷ್ಟ್ರೀಯ ಮಾನದಂಡದ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. OMC ಗಳಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸೇರಿವೆ.

ಕರ್ನಾಟಕದ ಪ್ರಮುಖ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ.

ಬಾಗಲಕೋಟೆ – ರೂ. 102.39, ಬೆಂಗಳೂರು – ರೂ. 101.94, ಬೆಂಗಳೂರು ಗ್ರಾಮಾಂತರ – ರೂ. 102.25, ಬೆಳಗಾವಿ – ರೂ. 101.91, ಬಳ್ಳಾರಿ – ರೂ. 102.89, ಬೀದರ್ – ರೂ. 103.13, ವಿಜಯಪುರ – ರೂ. 102.12, ಚಾಮರಾಜನಗರ – ರೂ. 102.13, ಚಿಕ್ಕಬಳ್ಳಾಪುರ – ರೂ. 102.39, ಚಿಕ್ಕಮಗಳೂರು – ರೂ. 103.06, ಚಿತ್ರದುರ್ಗ – ರೂ. 104.03, ದಕ್ಷಿಣ ಕನ್ನಡ – ರೂ. 101.71, ದಾವಣಗೆರೆ – ರೂ. 103.57, ಧಾರವಾಡ – ರೂ. 101.71, ಹಾಸನ – ರೂ. 101.88, ಹಾವೇರಿ – ರೂ. 102.89, ಕೊಡಗು – ರೂ. 103.31, ಕೋಲಾರ – ರೂ. 101.87, ಮಂಡ್ಯ – ರೂ. 102.17, ಮೈಸೂರು – ರೂ. 101.50, ರಾಯಚೂರು – ರೂ. 102.67, ರಾಮನಗರ – ರೂ. 102.39, ಶಿವಮೊಗ್ಗ – ರೂ. 103.16, ತುಮಕೂರು – ರೂ. 102.45, ಉಡುಪಿ – ರೂ. 101.83, ಉತ್ತರ ಕನ್ನಡ – ರೂ. 102.01 ಆಗಿದೆ.

ಕರ್ನಾಟಕದ ಪ್ರಮುಖ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರ ಹೀಗಿದೆ.

ಬಾಗಲಕೋಟೆ – ರೂ. 88.32, ಬೆಂಗಳೂರು – ರೂ. 87.89, ಬೆಂಗಳೂರು ಗ್ರಾಮಾಂತರ – ರೂ. 88.17, ಬೆಳಗಾವಿ – ರೂ. 87.90, ಬಳ್ಳಾರಿ – ರೂ. 88.77, ಬೀದರ್ – ರೂ. 88.99, ವಿಜಯಪುರ – ರೂ. 88.02, ಚಿಕ್ಕಬಳ್ಳಾಪುರ – ರೂ. 87.67, ಚಿಕ್ಕಮಗಳೂರು – ರೂ. 88.87, ಚಿತ್ರದುರ್ಗ – ರೂ. 89.44, ದಕ್ಷಿಣ ಕನ್ನಡ – ರೂ. 87.70, ದಾವಣಗೆರೆ – ರೂ. 89.45, ಧಾರವಾಡ – ರೂ. 87.70, ಹಾಸನ – ರೂ. 87.89, ಹಾವೇರಿ – ರೂ. 88.77, ಕೊಡಗು – ರೂ. 88.92, ಕೋಲಾರ – ರೂ. 87.83, ಮಂಡ್ಯ – ರೂ. 88.10, ಮೈಸೂರು – ರೂ. 87.49, ರಾಮನಗರ – ರೂ. 88.29, ಶಿವಮೊಗ್ಗ – ರೂ. 88.96, ತುಮಕೂರು – ರೂ. 88.36, ಉಡುಪಿ – ರೂ. 87.76, ಉತ್ತರ ಕನ್ನಡ – ರೂ. 87.98 ಆಗಿದೆ.

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಕಳುಹಿಸಬಹುದು. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವ್ಯಾಟ್ ಮತ್ತು ಸರಕು ಸಾಗಣೆ ಶುಲ್ಕಗಳಂತಹ ಸ್ಥಳೀಯ ತೆರಿಗೆಗಳಲ್ಲಿನ ವ್ಯತ್ಯಾಸವು ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ