Petrol Price on October 24: ದೀಪಾವಳಿಗೆ ಗ್ರಾಹಕರಿಗೆ ಗುಡ್​ ನ್ಯೂಸ್; ಈ ರಾಜ್ಯದಲ್ಲಿ ಪೆಟ್ರೋಲ್- ಡೀಸೆಲ್ ಬೆಲೆ ಕುಸಿತ

Fuel Price Today: ಮೇ 22ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೊನೆಯ ಬದಲಾವಣೆಯಾಗಿತ್ತು. ಇಷ್ಟು ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿರುವುದು ಇದೇ ಮೊದಲು.

Petrol Price on October 24: ದೀಪಾವಳಿಗೆ ಗ್ರಾಹಕರಿಗೆ ಗುಡ್​ ನ್ಯೂಸ್; ಈ ರಾಜ್ಯದಲ್ಲಿ ಪೆಟ್ರೋಲ್- ಡೀಸೆಲ್ ಬೆಲೆ ಕುಸಿತ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 24, 2022 | 8:49 AM

Fuel Price on October 24: ಕಳೆದ ಕೆಲವು ದಿನಗಳಿಂದ ಕಚ್ಚಾ ತೈಲ ದರವು ದಾಖಲೆಯ ಮಟ್ಟಕ್ಕೆ ಕುಸಿದ ನಂತರ ಈಗ ಮತ್ತೆ ಏರಿಕೆಯಾಗುತ್ತಿದೆ. ಉತ್ಪಾದನೆಯ ಕಡಿತದಿಂದ ಕಚ್ಚಾತೈಲದ ಬೆಲೆ ಏರಿಕೆಯಾಗುತ್ತಿದೆ. ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 90 ರೂ.ಗಿಂತ ಹೆಚ್ಚು ಏರುತ್ತಿದೆ. ಎರಡು ತಿಂಗಳಿನಿಂದ ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆಯಾಗಿತ್ತಾದರೂ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿರಲಿಲ್ಲ. ಆದರೆ, ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಅಗ್ಗವಾಗಿದೆ.

ಮೇ 22ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೊನೆಯ ಬದಲಾವಣೆಯಾಗಿತ್ತು. ಇಷ್ಟು ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿರುವುದು ಇದೇ ಮೊದಲು. ಮೇ 22ರಂದು ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಅಬಕಾರಿ ಕಡಿತದಿಂದಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಯಿತು. ಇದರ ನಂತರ, ಮಹಾರಾಷ್ಟ್ರದಲ್ಲಿ ತೈಲದ ಮೇಲಿನ ವ್ಯಾಟ್ ಅನ್ನು ಕಡಿಮೆಗೊಳಿಸಲಾಯಿತು. ಇದರಿಂದಾಗಿ ಇಂಧನದ ಬೆಲೆ ಕಡಿಮೆಯಾಯಿತು.

ಇಂದು ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.72 ರೂ. ಇದ್ದು, ಡೀಸೆಲ್ ದರ ಲೀಟರ್‌ಗೆ 89.62 ರೂ. ಇದೆ. ಕಳೆದ 5 ತಿಂಗಳಿಂದ ರಾಷ್ಟ್ರ ರಾಜಧಾನಿ ನವದೆಹಲಿ, ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತ್ತಾ ಸೇರಿ ಹಲವು ಪ್ರಮುಖ ನಗರಗಳಲ್ಲಿ ಇಂಧನದ ದರ ಒಂದೇ ರೀತಿಯಲ್ಲಿದೆ.

ಇದನ್ನೂ ಓದಿ: ಒತ್ತುವರಿ ತೆರವು ನಿಲ್ಲಿಸದಿದ್ದರೆ ಆತ್ಮಹತ್ಯೆ: ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬಿಬಿಎಂಪಿಗೆ ಬೆದರಿಕೆ ಹಾಕಿದ್ದ ದಂಪತಿಯ ರಕ್ಷಣೆ

ಬೆಂಗಳೂರಿನಲ್ಲಿ ಪೆಟ್ರೋಲ್ ದರ 1 ಲೀಟರ್​ಗೆ 101.94 ರೂ, ಡೀಸೆಲ್​ಗೆ 87.89 ರೂ. ಇದೆ. ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 96.72 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106.03 ರೂ., 1 ಲೀಟರ್ ಡೀಸೆಲ್ ಲೀಟರ್‌ಗೆ 92.76 ರೂ. ಇದೆ. ಹೈದರಾಬಾದ್​​ನಲ್ಲಿ ಪೆಟ್ರೋಲ್ ಬೆಲೆ 1 ಲೀಟರ್​ಗೆ 109.66 ರೂ., ಡೀಸೆಲ್ ಬೆಲೆ 1 ಲೀಟರ್​ಗೆ 97.82 ರೂ. ಇದೆ.

ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106.31 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಚೆನ್ನೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102.63 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 94.24 ರೂ. ಇದೆ. ತಿರುವನಂತಪುರಂನಲ್ಲಿ ಪೆಟ್ರೋಲ್ ಬೆಲೆ 107.71 ರೂ., ಡೀಸೆಲ್ ಬೆಲೆ 96.52 ರೂ. ಇದೆ.

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಅನ್ನು ಕಳುಹಿಸಬಹುದು.

ಇದನ್ನೂ ಓದಿ: Petrol Price Today: ಇಳಿಕೆಯಾಯಿತಾ ಪೆಟ್ರೋಲ್ ಬೆಲೆ?; ನಿಮ್ಮ ನಗರಗಳಲ್ಲಿ ಇಂದಿನ ಡೀಸೆಲ್ ದರ ಹೀಗಿದೆ

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಹೆಚ್ಚಾಗಿ ಡಾಲರ್ ದರದಿಂದ ಪ್ರಭಾವಿತವಾಗಿರುತ್ತದೆ. ಡಾಲರ್ ದುಬಾರಿಯಾಗಿದ್ದರೆ, ಕಚ್ಚಾ ತೈಲವನ್ನು ಖರೀದಿಸುವುದು ಹೆಚ್ಚು ದುಬಾರಿಯಾಗಬಹುದು ಮತ್ತು ಇದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುತ್ತದೆ. ಮಾರುಕಟ್ಟೆಯಲ್ಲಿ ಮಾರಾಟವಾಗುವ ಪೆಟ್ರೋಲ್ ಮತ್ತು ಡೀಸೆಲ್‌ಗೆ ಜನರು ಪಾವತಿಸುವ ಅರ್ಧಕ್ಕಿಂತ ಹೆಚ್ಚು ಹಣವು ಕೇಂದ್ರ ಸರ್ಕಾರ ಮತ್ತು ರಾಜ್ಯಗಳಿಂದ ತೆರಿಗೆ ರೂಪದಲ್ಲಿದೆ. ಜನರಿಂದ ಪೆಟ್ರೋಲ್ ಮೇಲೆ ಶೇ.55.5 ಮತ್ತು ಡೀಸೆಲ್ ಮೇಲೆ ಶೇ.47.3 ತೆರಿಗೆ ಸಂಗ್ರಹವಾಗಿದೆ ಎನ್ನಲಾಗಿದೆ.

ಭಾರತದ ಇಂಧನ ಮಾರಾಟವು ಅಕ್ಟೋಬರ್‌ನ ಆರಂಭದಲ್ಲಿ ಹೆಚ್ಚಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವು ವರ್ಷದಿಂದ ವರ್ಷಕ್ಕೆ ಶೇ. 22-26ರಷ್ಟು ಹೆಚ್ಚುತ್ತಿದೆ. ಅಕ್ಟೋಬರ್ ಮೊದಲಾರ್ಧದಲ್ಲಿ ತಿಂಗಳಿನಿಂದ ತಿಂಗಳಿಗೆ ಇಂಧನದ ಬೆಲೆ ಏರಿಕೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1.05 ಮಿಲಿಯನ್ ಟನ್ ಬಳಕೆಗೆ ಹೋಲಿಸಿದರೆ ಅಕ್ಟೋಬರ್ 1ರಿಂದ 15ರ ಅವಧಿಯಲ್ಲಿ ಪೆಟ್ರೋಲ್ ಮಾರಾಟವು ಶೇ. 22.7ರಷ್ಟು ಏರಿಕೆಯಾಗಿ 1.28 ಮಿಲಿಯನ್ ಟನ್‌ಗಳಿಗೆ ತಲುಪಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ