Petrol Price on October 26: ನೊಯ್ಡಾದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕುಸಿತ, ಲಕ್ನೋದಲ್ಲಿ ಏರಿಕೆ; ನಿಮ್ಮ ನಗರದಲ್ಲಿ ಇಂದಿನ ದರವೆಷ್ಟು?
ಇಂದು ಉತ್ತರ ಪ್ರದೇಶದ ನೋಯ್ಡಾ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ದರಗಳು ಇಳಿದಿದ್ದರೆ ಲಕ್ನೋದಲ್ಲಿ ಇಂಧನದ ಬೆಲೆ ಏರಿಕೆಯಾಗಿದೆ.
Fuel Price on October 26: ಜಾಗತಿಕ ಮಾರುಕಟ್ಟೆಯಲ್ಲಿ ಕಳೆದ 24 ಗಂಟೆಗಳಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 1 ಡಾಲರ್‌ಗಳಷ್ಟು ಕುಸಿದಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂದು (ಬುಧವಾರ) ಬೆಳಿಗ್ಗೆ ಬಿಡುಗಡೆ ಮಾಡಿದ ಪೆಟ್ರೋಲ್ (Petrol Price) ಮತ್ತು ಡೀಸೆಲ್ (Diesel Price) ಚಿಲ್ಲರೆ ಬೆಲೆಯಲ್ಲೂ ಬದಲಾವಣೆ ಕಂಡುಬರುತ್ತಿದೆ. ಇಂದು ಉತ್ತರ ಪ್ರದೇಶದ ನೋಯ್ಡಾ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ದರಗಳು ಇಳಿದಿದ್ದರೆ ಲಕ್ನೋದಲ್ಲಿ ಇಂಧನದ ಬೆಲೆ ಏರಿಕೆಯಾಗಿದೆ.
ಆದರೆ, ಇಂದಿಗೂ ಸರ್ಕಾರಿ ತೈಲ ಕಂಪನಿಗಳು ದೆಹಲಿ, ಮುಂಬೈನಂತಹ ಮಹಾನಗರಗಳಲ್ಲಿ ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ (ನೋಯ್ಡಾ) ಪೆಟ್ರೋಲ್ 36 ಪೈಸೆ ಕಡಿಮೆಯಾಗಿ 96.64 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 32 ಪೈಸೆ ಕಡಿಮೆಯಾಗಿ 89.82 ರೂ.ಗೆ ತಲುಪಿದೆ. ಲಕ್ನೋದಲ್ಲಿ ಪೆಟ್ರೋಲ್ ದರ 13 ಪೈಸೆ ಏರಿಕೆಯಾಗಿ 96.57 ಮತ್ತು ಡೀಸೆಲ್ ದರ 12 ಪೈಸೆ ಏರಿಕೆಯಾಗಿ 89.76 ರೂ. ಆಗಿದೆ.
ಮೇ 22ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೊನೆಯ ಬದಲಾವಣೆಯಾಗಿತ್ತು. ಇಷ್ಟು ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿರುವುದು ಇದೇ ಮೊದಲು. ಮೇ 22ರಂದು ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಅಬಕಾರಿ ಕಡಿತದಿಂದಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಯಿತು. ಇದರ ನಂತರ, ಮಹಾರಾಷ್ಟ್ರದಲ್ಲಿ ತೈಲದ ಮೇಲಿನ ವ್ಯಾಟ್ ಅನ್ನು ಕಡಿಮೆಗೊಳಿಸಲಾಯಿತು. ಇದರಿಂದಾಗಿ ಇಂಧನದ ಬೆಲೆ ಕಡಿಮೆಯಾಯಿತು.
ಇದನ್ನೂ ಓದಿ: Petrol Price on October 19: ನಿಮ್ಮ ನಗರದಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?; ಇಲ್ಲಿದೆ ಮಾಹಿತಿ
ಇಂದು ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.72 ರೂ. ಇದ್ದು, ಡೀಸೆಲ್ ದರ ಲೀಟರ್‌ಗೆ 89.62 ರೂ. ಇದೆ. ಕಳೆದ 5 ತಿಂಗಳಿಂದ ರಾಷ್ಟ್ರ ರಾಜಧಾನಿ ನವದೆಹಲಿ, ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತ್ತಾ ಸೇರಿ ಹಲವು ಪ್ರಮುಖ ನಗರಗಳಲ್ಲಿ ಇಂಧನದ ದರ ಒಂದೇ ರೀತಿಯಲ್ಲಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ದರ 1 ಲೀಟರ್‌ಗೆ 101.94 ರೂ, ಡೀಸೆಲ್‌ಗೆ 87.89 ರೂ. ಇದೆ. ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 96.72 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106.03 ರೂ., 1 ಲೀಟರ್ ಡೀಸೆಲ್ ಲೀಟರ್‌ಗೆ 92.76 ರೂ. ಇದೆ. ಹೈದರಾಬಾದ್ನಲ್ಲಿ ಪೆಟ್ರೋಲ್ ಬೆಲೆ 1 ಲೀಟರ್‌ಗೆ 109.66 ರೂ., ಡೀಸೆಲ್ ಬೆಲೆ 1 ಲೀಟರ್‌ಗೆ 97.82 ರೂ. ಇದೆ.
ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106.31 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಚೆನ್ನೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102.63 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 94.24 ರೂ. ಇದೆ. ತಿರುವನಂತಪುರಂನಲ್ಲಿ ಪೆಟ್ರೋಲ್ ಬೆಲೆ 107.71 ರೂ., ಡೀಸೆಲ್ ಬೆಲೆ 96.52 ರೂ. ಇದೆ.
ಇದನ್ನೂ ಓದಿ: Petrol Price on October 22: ದೀಪಾವಳಿ ಹಬ್ಬದ ವೇಳೆ ಏರಿಕೆಯಾಗುತ್ತಾ ಪೆಟ್ರೋಲ್ ಬೆಲೆ?; ಇಂದಿನ ಡೀಸೆಲ್ ದರ ಹೀಗಿದೆ
ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಅನ್ನು ಕಳುಹಿಸಬಹುದು.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಹೆಚ್ಚಾಗಿ ಡಾಲರ್ ದರದಿಂದ ಪ್ರಭಾವಿತವಾಗಿರುತ್ತದೆ. ಡಾಲರ್ ದುಬಾರಿಯಾಗಿದ್ದರೆ, ಕಚ್ಚಾ ತೈಲವನ್ನು ಖರೀದಿಸುವುದು ಹೆಚ್ಚು ದುಬಾರಿಯಾಗಬಹುದು ಮತ್ತು ಇದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುತ್ತದೆ. ಮಾರುಕಟ್ಟೆಯಲ್ಲಿ ಮಾರಾಟವಾಗುವ ಪೆಟ್ರೋಲ್ ಮತ್ತು ಡೀಸೆಲ್‌ಗೆ ಜನರು ಪಾವತಿಸುವ ಅರ್ಧಕ್ಕಿಂತ ಹೆಚ್ಚು ಹಣವು ಕೇಂದ್ರ ಸರ್ಕಾರ ಮತ್ತು ರಾಜ್ಯಗಳಿಂದ ತೆರಿಗೆ ರೂಪದಲ್ಲಿದೆ. ಜನರಿಂದ ಪೆಟ್ರೋಲ್ ಮೇಲೆ ಶೇ.55.5 ಮತ್ತು ಡೀಸೆಲ್ ಮೇಲೆ ಶೇ.47.3 ತೆರಿಗೆ ಸಂಗ್ರಹವಾಗಿದೆ ಎನ್ನಲಾಗಿದೆ.