AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on October 27: ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಏರಿಕೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

Fuel Price Today: ಒಂದು ಸಮಯದಲ್ಲಿ ಕಚ್ಚಾ ತೈಲವು ಬ್ಯಾರೆಲ್‌ಗೆ 70 ರೂ. ಇಳಿದಿತ್ತು. ಬೆಲೆಯಲ್ಲಿ ನಿರಂತರ ಕುಸಿತವನ್ನು ಕಂಡ OPEC ರಾಷ್ಟ್ರಗಳು ಉತ್ಪಾದನೆಯನ್ನು ಕಡಿಮೆ ಮಾಡಲು ನಿರ್ಧರಿಸಿದವು.

Petrol Price on October 27: ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಏರಿಕೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 27, 2022 | 9:09 AM

Share

Fuel Price on October 27: ಜಾಗತಿಕ ಮಾರುಕಟ್ಟೆಯಲ್ಲಿ ಕಳೆದ 24 ಗಂಟೆಗಳಲ್ಲಿ ಕಚ್ಚಾ ತೈಲದ ಬೆಲೆ ದಾಖಲೆಯ ಏರಿಕೆಯಾಗಿದೆ. ಇದು ಹಿಂದಿನ ದಾಖಲೆಗಳನ್ನು ಮುರಿದಿದೆ. ಆದರೆ 5 ತಿಂಗಳಿಗೂ ಹೆಚ್ಚು ಕಾಲದಿಂದ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಯಲ್ಲಿ (Diesel Price) ಯಾವುದೇ ಬದಲಾವಣೆಯಾಗಿಲ್ಲ. ಕೊನೆಯ ಬಾರಿಗೆ ಕೇಂದ್ರ ಸರ್ಕಾರವು ಮೇ 22ರಂದು ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು.

ಒಂದು ಸಮಯದಲ್ಲಿ ಕಚ್ಚಾ ತೈಲವು ಬ್ಯಾರೆಲ್‌ಗೆ 70 ರೂ. ಇಳಿದಿತ್ತು. ಬೆಲೆಯಲ್ಲಿ ನಿರಂತರ ಕುಸಿತವನ್ನು ಕಂಡ OPEC ರಾಷ್ಟ್ರಗಳು ಉತ್ಪಾದನೆಯನ್ನು ಕಡಿಮೆ ಮಾಡಲು ನಿರ್ಧರಿಸಿದವು. ನಂತರ ಕಚ್ಚಾ ತೈಲದ ಬೆಲೆ ಏರಿಕೆಯನ್ನು ಕಾಣುತ್ತಿದೆ. ಇಂದು ಬೆಳಗ್ಗೆಯೂ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆಯಾಗಿದೆ.

ಮೇ 22ರಂದು ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಅಬಕಾರಿ ಕಡಿತದಿಂದಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಯಿತು. ಇದರ ನಂತರ, ಮಹಾರಾಷ್ಟ್ರದಲ್ಲಿ ತೈಲದ ಮೇಲಿನ ವ್ಯಾಟ್ ಅನ್ನು ಕಡಿಮೆಗೊಳಿಸಲಾಯಿತು. ಇದರಿಂದಾಗಿ ಇಂಧನದ ಬೆಲೆ ಕಡಿಮೆಯಾಯಿತು. ಇಂದು ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.72 ರೂ. ಇದ್ದು, ಡೀಸೆಲ್ ದರ ಲೀಟರ್‌ಗೆ 89.62 ರೂ. ಇದೆ. ಕಳೆದ 5 ತಿಂಗಳಿಂದ ರಾಷ್ಟ್ರ ರಾಜಧಾನಿ ನವದೆಹಲಿ, ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತ್ತಾ ಸೇರಿ ಹಲವು ಪ್ರಮುಖ ನಗರಗಳಲ್ಲಿ ಇಂಧನದ ದರ ಒಂದೇ ರೀತಿಯಲ್ಲಿದೆ.

ಇದನ್ನೂ ಓದಿ: Petrol Price on October 22: ದೀಪಾವಳಿ ಹಬ್ಬದ ವೇಳೆ ಏರಿಕೆಯಾಗುತ್ತಾ ಪೆಟ್ರೋಲ್ ಬೆಲೆ?; ಇಂದಿನ ಡೀಸೆಲ್ ದರ ಹೀಗಿದೆ

ಬೆಂಗಳೂರಿನಲ್ಲಿ ಪೆಟ್ರೋಲ್ ದರ 1 ಲೀಟರ್​ಗೆ 101.94 ರೂ, ಡೀಸೆಲ್​ಗೆ 87.89 ರೂ. ಇದೆ. ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 96.72 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106.03 ರೂ., 1 ಲೀಟರ್ ಡೀಸೆಲ್ ಲೀಟರ್‌ಗೆ 92.76 ರೂ. ಇದೆ. ಹೈದರಾಬಾದ್​​ನಲ್ಲಿ ಪೆಟ್ರೋಲ್ ಬೆಲೆ 1 ಲೀಟರ್​ಗೆ 109.66 ರೂ., ಡೀಸೆಲ್ ಬೆಲೆ 1 ಲೀಟರ್​ಗೆ 97.82 ರೂ. ಇದೆ.

ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106.31 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಚೆನ್ನೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102.63 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 94.24 ರೂ. ಇದೆ. ತಿರುವನಂತಪುರಂನಲ್ಲಿ ಪೆಟ್ರೋಲ್ ಬೆಲೆ 107.71 ರೂ., ಡೀಸೆಲ್ ಬೆಲೆ 96.52 ರೂ. ಇದೆ.

ಇದನ್ನೂ ಓದಿ: Petrol Price Today: ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧೆಡೆ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಅನ್ನು ಕಳುಹಿಸಬಹುದು.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಹೆಚ್ಚಾಗಿ ಡಾಲರ್ ದರದಿಂದ ಪ್ರಭಾವಿತವಾಗಿರುತ್ತದೆ. ಡಾಲರ್ ದುಬಾರಿಯಾಗಿದ್ದರೆ, ಕಚ್ಚಾ ತೈಲವನ್ನು ಖರೀದಿಸುವುದು ಹೆಚ್ಚು ದುಬಾರಿಯಾಗಬಹುದು ಮತ್ತು ಇದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುತ್ತದೆ. ಮಾರುಕಟ್ಟೆಯಲ್ಲಿ ಮಾರಾಟವಾಗುವ ಪೆಟ್ರೋಲ್ ಮತ್ತು ಡೀಸೆಲ್‌ಗೆ ಜನರು ಪಾವತಿಸುವ ಅರ್ಧಕ್ಕಿಂತ ಹೆಚ್ಚು ಹಣವು ಕೇಂದ್ರ ಸರ್ಕಾರ ಮತ್ತು ರಾಜ್ಯಗಳಿಂದ ತೆರಿಗೆ ರೂಪದಲ್ಲಿದೆ. ಜನರಿಂದ ಪೆಟ್ರೋಲ್ ಮೇಲೆ ಶೇ.55.5 ಮತ್ತು ಡೀಸೆಲ್ ಮೇಲೆ ಶೇ.47.3 ತೆರಿಗೆ ಸಂಗ್ರಹವಾಗಿದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು