AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price Today: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ; ಬೆಂಗಳೂರು ಸಹಿತ ಇತರ ನಗರಗಳಲ್ಲಿ ದರ ಎಷ್ಟಿದೆ?

Petrol Price | Diesel Price Today, 21-04-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.

Petrol Diesel Price Today: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ; ಬೆಂಗಳೂರು ಸಹಿತ ಇತರ ನಗರಗಳಲ್ಲಿ ದರ ಎಷ್ಟಿದೆ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 21, 2022 | 9:00 AM

Share

Petrol Diesel Price Today | ದೆಹಲಿ: ಭಾರತದಲ್ಲಿ ಕಳೆದ ಎರಡು ವಾರಗಳಿಂದ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಾಣದೆ ಸ್ಥಿರವಾಗಿದೆ. ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿತ್ತು. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆಯಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ (Petrol Price) ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿತ್ತು. ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್​ಗೆ ತಲಾ 80 ಪೈಸೆಯಂತೆ ಹೆಚ್ಚಿಸಿದ್ದರೆ, ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್​ಗೆ 50 ಮತ್ತು 30, ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಗಿತ್ತು. ಆದರೆ ಕಳೆದ ಎರಡು ವಾರಗಳಿಂದ ದರ ಸ್ಥಿರವಾಗಿದೆ. ಇಂದು (ಏಪ್ರಿಲ್ 21, 2022) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಬೆಂಗಳೂರು ಸೇರಿದಂತೆ ವಿವಿಧ ನಗರಗಳ ಇಂಧನ ದರದ ಕುರಿತ ಮಾಹಿತಿ ಇಲ್ಲಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ