Petrol Price Today: ಇಂದು ಸಹ ಬದಲಾಗದ ಪೆಟ್ರೋಲ್, ಡೀಸೆಲ್ ದರ! ಎಲ್ಲೆಲ್ಲಿ ಎಷ್ಟೆಷ್ಟು ಇಂಧನ ದರವಿದೆ ಪರಿಶೀಲಿಸಿ

Petrol Rate Today: ಕಳೆದ ಮೇ ತಿಂಗಳಿನಿಂದ ಇಂಧನ ದರ ಏರಲು ಪ್ರಾರಂಭಿಸಿತು. ಒಟ್ಟು 42 ದಿನಗಳಲ್ಲಿ 11 ರೂಪಾಯಿಯಷ್ಟು ಏರಿಕೆ ಆಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107. 83 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ.

Petrol Price Today: ಇಂದು ಸಹ ಬದಲಾಗದ ಪೆಟ್ರೋಲ್, ಡೀಸೆಲ್ ದರ! ಎಲ್ಲೆಲ್ಲಿ ಎಷ್ಟೆಷ್ಟು ಇಂಧನ ದರವಿದೆ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Aug 03, 2021 | 8:23 AM

Petrol Diesel Price Today | ದೆಹಲಿ: ಸತತವಾಗಿ 17 ದಿನಗಳ ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ. ಇಂದು ( ಆಗಸ್ಟ್ 3, ಮಂಗಳವಾರ) ಇಂಧನ ಬೆಲೆಯಲ್ಲಿ (Fuel Price) ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಜುಲೈ 17ನೇ ತಾರೀಕಿನಿಂದ ಸ್ಥಿರತೆಯಲ್ಲಿರುವ ತೈಲ ದರ ಇಂದಿನವರೆಗೂ ಯಥಾಸ್ಥಿತಿಯಲ್ಲಿಯೇ ಇದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ (Petrol Price) 101.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ (Diesel Price) 89.87 ರೂಪಾಯಿ ಇದೆ. ಮೇ ತಿಂಗಳಿನಿಂದ ಏರಿಕೆ ಕಾಣಲು ಪ್ರಾರಂಭಿಸಿದ ಪೆಟ್ರೋಲ್ ದರದಲ್ಲಿ 11.52 ರೂಪಾಯಿ ಹೆಚ್ಚಳವಾಗಿದೆ.

ಕಳೆದ ಮೇ ತಿಂಗಳಿನಿಂದ ಇಂಧನ ದರ ಏರಲು ಪ್ರಾರಂಭಿಸಿತು. ಒಟ್ಟು 42 ದಿನಗಳಲ್ಲಿ 11 ರೂಪಾಯಿಯಷ್ಟು ಏರಿಕೆ ಆಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107. 83 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.39 ರೂಪಾಯಿ ಇದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.08 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.02 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.67 ರೂಪಾಯಿ ಇದೆ. ರಾಂಚಿಯಲ್ಲಿ ಲೀಟರ್ ಪೆಟ್ರೋಲ್ ದರ 96.68 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.84 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೊಲ್ ದರ 105.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.26 ರೂಪಾಯಿ ಇದೆ. ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 104.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.57 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.26 ರೂಪಾಯಿ ಇದೆ.

ಜುಲೈ ತಿಂಗಳಿನಲ್ಲಿ 2 ಬಾರಿ ಡೀಸೆಲ್ ದರವನ್ನು ಇಳಿಕೆ ಮಾಡಲಾಯಿತು. ಆ ಬಳಿಕ ಏರುತ್ತಲೇ ಇದ್ದ ಇಂಧನ ದರ ಇನ್ನೇನು ಇಳಿಕೆ ಕಾಣಬಹುದು ಎಂಬ ನಿರೀಕ್ಷೆಯಲ್ಲಿ ವಾಹನ ಸವಾರರಿದ್ದರು. ಆದರೆ ಆ ಬಳಿಕ ಪೆಟ್ರೋಲ್, ಡೀಸೆಲ್​ಗಳೆರಡರ ದರವೂ ಸ್ಥಿರತೆಯಲ್ಲಿಯೇ ಇದೆ. ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?