AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ ಆರು ದಿನಗಳಿಂದ ಸ್ಥಿರತೆಯನ್ನು ಕಾಯ್ದುಕೊಂಡ ಪೆಟ್ರೋಲ್​, ಡೀಸೆಲ್​ ದರ!

Petrol Rate Today, 10-11-2021: ಇಂದು ಬುಧವಾರ (ನವೆಂಬರ್ 10) ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಇಂದು ಇಂಧನ ದರದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

Petrol Price Today: ಸತತ ಆರು ದಿನಗಳಿಂದ ಸ್ಥಿರತೆಯನ್ನು ಕಾಯ್ದುಕೊಂಡ ಪೆಟ್ರೋಲ್​, ಡೀಸೆಲ್​ ದರ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 10, 2021 | 7:56 AM

Share

Petrol Diesel Price Today | ದೆಹಲಿ: ಸತತ ಆರು ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ ಇಂದು ಬುಧವಾರ (ನವೆಂಬರ್ 10) ಪೆಟ್ರೋಲ್ (Petrol Price), ಡೀಸೆಲ್ ಬೆಲೆ (Diesel Price) ಸ್ಥಿರತೆ ಕಾಯ್ದುಕೊಂಡಿದೆ. ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಇಂದು ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆಗಳಾಗಿಲ್ಲ. ಇಂದು ಲೀಟರ್ ಪೆಟ್ರೋಲ್ ಬೆಲೆ ಮತ್ತು ಡೀಸೆಲ್ ಬೆಲೆ ಎಷ್ಟಿದೆ? ಈ ಕುರಿತಾದ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ನಿಗದಿಯಾಗಿದೆ. ಇನ್ನು, ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ನಿಗದಿಯಾಗಿದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬಲೆ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.10 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!