Petrol Price Today: ಸತತ ಎಂಟು ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ಏರಿಳಿತಗಳಿಲ್ಲ!

Petrol Rate Today, 12-11-2021: ಸತತ ಎಂಟು ದಿನಗಳಿಂದ ಇಂಧನ ದರ ಸ್ಥಿರವಾಗಿದೆ. ನಿಮ್ಮೂರಿನಲ್ಲಿ ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Petrol Price Today: ಸತತ ಎಂಟು ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ಏರಿಳಿತಗಳಿಲ್ಲ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Nov 12, 2021 | 7:50 AM

Petrol Diesel Price Today | ದೆಹಲಿ: ಇಂದು ನವೆಂಬರ್ 12 ಶುಕ್ರವಾರದಂದು ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸತತ ಎಂಟನೇ ದಿನವೂ ಇಂಧನ ದರ (Fuel Price) ಸ್ಥಿರವಾಗಿದೆ. ನವೆಂಬರ್ 3ನೇ ತಾರೀಕಿನಂದು ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಮನ್ನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಅನೇಕ ರಾಜ್ಯಗಳು ವ್ಯಾಟ್ಅನ್ನು ಕಡಿಮೆ ಮಾಡಿದ ಬಳಿಕ ಹಲವೆಡೆ ಇಂಧನ ದರದಲ್ಲಿ ಕೊಂಚ ಇಳಿಕೆ ಆಗಿತ್ತು. ನಿರಂತರ ಏರಿಕೆ ಕಾಣುತ್ತಿದ್ದ ಪೆಟ್ರೋಲ್ (Petrol Price), ಡೀಸೆಲ್ ಬೆಲೆ (Diesel Price) ನೋಡಿ ವಾಹನ ಸವಾರರು ಆಕ್ರೋಶ ಹೊರಹಾಕಿದ್ದರು. ಆ ಬಳಿಕ ದೀಪಾವಳಿ ಸಂದರ್ಭದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆ ಆಯಿತು. ಆ ನಂತರದಲ್ಲಿ ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ನಗರಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ಇದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ನಿಗದಿಯಾಗಿದೆ. ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ದರ 95.51 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 87.01 ರೂಪಾಯಿ ನಿಗದಿಯಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಚಂಡೀಗಢದಲ್ಲಿ ಲೀಟರ್ ಪೆಟ್ರೋಲ್ ದರ 94.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 80.90 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ