Petrol Price Today: ಸತತ ಒಂಬತ್ತು ದಿನಗಳಿಂದ ಸ್ಥಿರತೆಯನ್ನು ಕಾಯ್ದುಕೊಂಡ ಪೆಟ್ರೋಲ್​, ಡೀಸೆಲ್​ ದರ!

Petrol Rate Today, 13-11-2021: ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.

Petrol Price Today: ಸತತ ಒಂಬತ್ತು ದಿನಗಳಿಂದ ಸ್ಥಿರತೆಯನ್ನು ಕಾಯ್ದುಕೊಂಡ ಪೆಟ್ರೋಲ್​, ಡೀಸೆಲ್​ ದರ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Nov 13, 2021 | 8:11 AM

Petrol Diesel Price Today | ದೆಹಲಿ: ಇಂದು (ನವೆಂಬರ್ 13, ಶನಿವಾರ) ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸತತ ಒಂಬತ್ತನೇ ದಿನವೂ ಇಂಧನ ದರ (Fuel Price) ಸ್ಥಿರವಾಗಿದೆ. ನವೆಂಬರ್ 3ನೇ ತಾರೀಕಿನಂದು ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಮನ್ನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಅನೇಕ ರಾಜ್ಯಗಳು ವ್ಯಾಟ್ ಅನ್ನು ಕಡಿಮೆ ಮಾಡಿತ್ತು. ಆ ಬಳಿಕ ಹಲವೆಡೆ ಇಂಧನ ದರದಲ್ಲಿ ಕೊಂಚ ಇಳಿಕೆ ಆಗಿತ್ತು. ನಿರಂತರ ಏರಿಕೆ ಕಾಣುತ್ತಿದ್ದ ಪೆಟ್ರೋಲ್ (Petrol Price), ಡೀಸೆಲ್ ಬೆಲೆ (Diesel Price) ನೋಡಿ ವಾಹನ ಸವಾರರು ಆಕ್ರೋಶ ಹೊರಹಾಕಿದ್ದರು. ದೀಪಾವಳಿ ಸಂದರ್ಭದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆ ಆಯಿತು. ಆ ನಂತರದಲ್ಲಿ ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ನಗರಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ಇದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ನಿಗದಿಯಾಗಿದೆ. ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ದರ 95.51 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 87.01 ರೂಪಾಯಿ ನಿಗದಿಯಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಚಂಡೀಗಢದಲ್ಲಿ ಲೀಟರ್ ಪೆಟ್ರೋಲ್ ದರ 94.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 80.90 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ