AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ನಿಮ್ಮೂರಿನಲ್ಲಿ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ

Petrol Rate Today, 07-11-2021: ಇಂದು ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ ಸ್ಥಿರವಾಗಿದೆ.

Petrol Price Today: ಇಂದು ನಿಮ್ಮೂರಿನಲ್ಲಿ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 07, 2021 | 7:55 AM

Share

Petrol Diesel Price Today | ದೆಹಲಿ: ಪೆಟ್ರೋಲ್​, ಡೀಸೆಲ್​ ಮೇಲಿನ ಸುಂಕ ಕಡಿತದ ನಂತರದಲ್ಲಿ ಸತತ ಮೂರು ದಿನಗಳಿಂದ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಇಂದು ಭಾನುವಾರ (ನವೆಂಬರ್ 7) ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ಕಳೆದ ಬುಧವಾರ ಇಂಧನ ದರದಲ್ಲಿ ಇಳಿಕೆ ಆಗಿದ್ದು, ದೀಪಾವಳಿ ಹಬ್ಬಕ್ಕೆ ವಾಹನ ಸವಾರರಿಗೆ ಭರ್ಜರಿ ಗಿಫ್ಟ್ ಸಿಕ್ಕಂತಾಗಿತ್ತು. ನಿರಂತರವಾಗಿ ಏರುತ್ತಲೇ ಇದ್ದ ಪೆಟ್ರೋಲ್ (Petrol Price), ಡೀಸೆಲ್ ಬೆಲೆ (Diesel Price) ಕಂಡು ಗ್ರಾಹಕರು ಆಕ್ರೋಶ ಹೊರಹಾಕಿದ್ದರು. ಒಮ್ಮೆ ಇಂಧನ ದರದಲ್ಲಿ (Fuel Price) ಇಳಿಕೆಯಾದ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂಪಾಯಿ ನಿಗದಿಯಾಗಿದೆ. ಅದೇ ರೀತಿ ಲೀಟರ್ ಡೀಸೆಲ್ ದರ 86.67 ರೂಪಾಯಿ ನಿಗದಿಯಾಗಿದೆ. ಇನ್ನು ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ನಿಗದಿಯಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ಇನ್ನು ರಾಜಸ್ಥಾನದ ಜೈಪುರದಲ್ಲಿ ಲೀಟರ್ ಪೆಟ್ರೋಲ್ ದರ 111.10 ರೂಪಾಯಿ ನಿಗದಿಯಾಗಿದೆ. ಅದೇ ರೀತಿ ಲೀಟರ್ ಡೀಸೆಲ್ ದರ 95.71 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
TV9 Web
TV9 Web

TV9 Kannada

Read More
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ