AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

Petrol Rate Today, 09-11-2021: ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ನಿಗದಿಯಾಗಿದೆ.

Petrol Price Today: ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 09, 2021 | 7:58 AM

Share

Petrol Diesel Price Today | ದೆಹಲಿ: ಸತತ ಐದು ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ ಇಂದು ಮಂಗಳವಾರ (ನವೆಂಬರ್ 9) ಪೆಟ್ರೋಲ್ (Petrol Price), ಡೀಸೆಲ್ ಬೆಲೆ (Diesel Price) ಸ್ಥಿರತೆ ಕಾಯ್ದುಕೊಂಡಿದೆ. ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಇಂದು ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆಗಳಾಗಿಲ್ಲ. ಇಂದು ಲೀಟರ್ ಪೆಟ್ರೋಲ್ ಬೆಲೆ ಎಷ್ಟಿದೆ? ಈ ಕುರಿತಾದ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ನಿಗದಿಯಾಗಿದೆ. ಇನ್ನು, ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ನಿಗದಿಯಾಗಿದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ಬಲೆ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.10 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?