AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol and Diesel Rate Today: ಬೆಂಗಳೂರು ಸಹಿತ ವಿವಿಧ ನಗರಗಳಲ್ಲಿ ಎಷ್ಟಿದೆ ಪೆಟ್ರೋಲ್ ಡೀಸೆಲ್ ದರ?

Petrol Diesel Price Today, 17-01-2022: ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ.

Petrol and Diesel Rate Today: ಬೆಂಗಳೂರು ಸಹಿತ ವಿವಿಧ ನಗರಗಳಲ್ಲಿ ಎಷ್ಟಿದೆ ಪೆಟ್ರೋಲ್ ಡೀಸೆಲ್ ದರ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 17, 2022 | 7:41 AM

Share

Petrol Diesel Price Today|ದೆಹಲಿ: ನವೆಂಬರ್​​ಗೂ ಮೊದಲು ದೇಶದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆಯಾಗುತ್ತಲೇ ಇತ್ತು. ಅದರಿಂದಾಗಿ ಜನಸಾಮಾನ್ಯರು ರೋಸಿ ಹೋಗಿದ್ದರು. ಶತಕವನ್ನೂ ದಾಟಿ ಇಂಧನ ದರ ಮುನ್ನುಗ್ಗುತ್ತಿತ್ತು. ಆದರೆ ದೀಪಾವಳಿಗೂ ಮುನ್ನಾದಿನ ಅಂದರೆ ನವೆಂಬರ್ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿತ್ತು. ಅದಾದ ಮೇಲೆ ಹಲವು ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್​ (VAT) ಕಡಿತಗೊಳಿಸಿವೆ. ಹೀಗಾಗಿ ಅಂದಿನಿಂದಲೂ ಪೆಟ್ರೋಲ್ (Petrol Price), ಡೀಸೆಲ್​ ಬೆಲೆ (Diesel Price) ಮಹಾನಗರಗಳಲ್ಲಿ ಸ್ಥಿರವಾಗಿಯೇ ಇವೆ.  ಭಾರತದ ತೈಲ ಕಂಪನಿಗಳು ಇಂದು (ಜನವರಿ 17, ಸೋಮವಾರ) ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದ್ದು,ಇಂದು ಕೂಡ ಇಂಧನಗಳ ದರದಲ್ಲಿ(Fuel Price) ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಎರಡೂವರೆ ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.41 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು